Ganesh Chaturthi Special Trains: ಹಬ್ಬಗಳ ಸೀಸನ್​ಗೆ ಬೆಂಗಳೂರಿನಿಂದ ವಿವಿಧೆಡೆಗೆ 22 ವಿಶೇಷ ರೈಲುಗಳು

ಗೌರಿ ಗಣೇಶ ಅಥವಾ ಗಣೇಶ ಚತುರ್ಥಿ ಹಬ್ಬಕ್ಕೆ ಇನ್ನೊಂದೇ ದಿನ ಬಾಕಿ ಇದೆ. ಆ ನಂತರ ಸಾಲು ಹಬ್ಬಗಳು ಬರಲಿವೆ. ದಸರಾ, ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಗಮನದಲ್ಲಿಟ್ಟುಕೊಂಡು ನೈಋತ್ಯ ರೈಲ್ವೆ ಬೆಂಗಳೂರಿನಿಂದ ಕರ್ನಾಟಕದ ವಿವಿಧ ಪ್ರದೇಶಗಳಿಗೆ 22 ವಿಶೇಷ ರೈಲುಗಳನ್ನು ಘೋಷಿಸಿದೆ. ವಿವರ ಇಲ್ಲಿದೆ.

Ganesh Chaturthi Special Trains: ಹಬ್ಬಗಳ ಸೀಸನ್​ಗೆ ಬೆಂಗಳೂರಿನಿಂದ ವಿವಿಧೆಡೆಗೆ 22 ವಿಶೇಷ ರೈಲುಗಳು
ಹಬ್ಬಗಳ ಸೀಸನ್​ಗೆ ಬೆಂಗಳೂರಿನಿಂದ ವಿವಿಧೆಡೆಗೆ 22 ವಿಶೇಷ ರೈಲುಗಳು
Follow us
|

Updated on:Sep 05, 2024 | 10:41 AM

ಬೆಂಗಳೂರು, ಸೆಪ್ಟೆಂಬರ್ 5: ಗೌರಿ ಗಣೇಶ ಹಬ್ಬ, ದಸರಾ ಹಾಗೂ ದೀಪಾವಳಿ ಹಬ್ಬಗಳು ಮತ್ತು ಸಾಲು ರಜೆಗಳನ್ನು ಗಮನದಲ್ಲಿಟ್ಟುಕೊಂಡು ನೈಋತ್ಯ ರೈಲ್ವೆ ಕರ್ನಾಟಕದಾದ್ಯಂತ 22 ವಿಶೇಷ ರೈಲುಗಳನ್ನು ಘೋಷಣೆ ಮಾಡಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿದ್ದು, ವಿಶೇಷ ರೈಲುಗಳ ವೇಳಾಪಟ್ಟಿ, ಪ್ರಯಾಣದ ಸಮಯ ಇತ್ಯಾದಿ ವಿವರಗಳನ್ನೂ ಹಂಚಿಕೊಂಡಿದೆ.

ಗಣೇಶ ಚತುರ್ಥಿ ವಿಶೇಷ ರೈಲುಗಳ ವಿವರ

ಸೆಪ್ಟೆಂಬರ್ 5 ರಿಂದ 7 ರವರೆಗೆ ಬೆಂಗಳೂರು ಮತ್ತು ಕಲಬುರಗಿ ನಡುವೆ ವಿಶೇಷ ರೈಲುಗಳ ಸಂಚಾರ ನಡೆಸಲಿದೆ. ಬೆಂಗಳೂರು ಕಲಬುರಗಿ ವಿಶೇಷ ರೈಲು ಎಸ್​ಎಂವಿಟಿ ಬೆಂಗಳೂರಿನಿಂದ ರಾತ್ರಿ 9:15 ಕ್ಕೆ ಹೊರಟು ಮರುದಿನ ಬೆಳಿಗ್ಗೆ 7:40 ಕ್ಕೆ ಕಲಬುರಗಿಗೆ ತಲುಪಲಿದೆ. ಅದೇ ರೀತಿ, ಸೆಪ್ಟೆಂಬರ್ 6 ರಿಂದ 8 ರವರೆಗೆ, ಕಲಬುರಗಿಯಿಂದ ಹಿಂತಿರುಗುವ ರೈಲು ಬೆಳಿಗ್ಗೆ 9:35 ಕ್ಕೆ ಹೊರಟು ಅದೇ ದಿನ ರಾತ್ರಿ 8:00 ಗಂಟೆಗೆ ಎಸ್​ಎಂವಿಟಿ ಬೆಂಗಳೂರು ತಲುಪುತ್ತದೆ.

ನೈಋತ್ಯ ರೈಲ್ವೆ ಎಕ್ಸ್​ ಸಂದೇಶ

ಪ್ರಯಾಣಿಕರ ವಿಶೇಷ ಗಮನಕ್ಕೆ; ಗಣೇಶ ಚತುರ್ಥಿ, ದೀಪಾವಳಿ ಮತ್ತು ದಸರಾ ಹಬ್ಬದ ವೇಳೆ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆಯು ವಿವಿಧ ಸ್ಥಳಗಳ ನಡುವೆ ಇಪ್ಪತ್ತೆರಡು ಹಬ್ಬದ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ಅವುಗಳು ಈ ಕೆಳಗಿನಂತಿವೆ ಎಂದು ಎಕ್ಸ್​ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.

ದೀಪಾವಳಿ ವಿಶೇಷ ರೈಲುಗಳ ವಿವರ

ಅಕ್ಟೋಬರ್ 30 ಮತ್ತು ನವೆಂಬರ್ 2 ರಂದು ಮೈಸೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲುಗಳು ಕಾರ್ಯನಿರ್ವಹಿಸಲಿವೆ. ವಿಜಯಪುರದಿಂದ ಮೈಸೂರಿಗೆ ಹಿಂದಿರುಗುವ ರೈಲು ಅಕ್ಟೋಬರ್ 31 ಮತ್ತು ನವೆಂಬರ್ 3 ರಂದು ಸಂಚರಿಸಲಿದೆ. ಜತೆಗೆ, ಅಕ್ಟೋಬರ್ 30 ರಂದು ಯಶವಂತಪುರ ಮತ್ತು ಬೆಳಗಾವಿ ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ. ನವೆಂಬರ್ 1, ಅಕ್ಟೋಬರ್ 31 ಮತ್ತು ನವೆಂಬರ್ 3 ರಂದು ಹಿಂದಿರುಗಲಿವೆ.

ದಸರಾ ವಿಶೇಷ ರೈಲುಗಳ ವಿವರ

ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 9 ಮತ್ತು 12 ರಂದು ಎಸ್​ಎಂವಿಟಿ ಬೆಂಗಳೂರಿನಿಂದ ವಿಜಯಪುರಕ್ಕೆ ವಿಶೇಷ ರೈಲುಗಳು ಇರಲಿವೆ. ಅಕ್ಟೋಬರ್ 10 ಮತ್ತು 13 ರಂದು ರೈಲುಗಳು ಹಿಂತಿರುಗಲಿವೆ. ಅಕ್ಟೋಬರ್ 9 ಮತ್ತು 12 ರಂದು ಯಶವಂತಪುರ ಮತ್ತು ಬೆಳಗಾವಿ ನಡುವೆ ವಿಶೇಷ ರೈಲುಗಳು ಕಾರ್ಯನಿರ್ವಹಿಸಲಿದ್ದು, ಅಕ್ಟೋಬರ್ 10 ಮತ್ತು 13 ರಂದು ಹಿಂದಿರುಗಲಿವೆ. ಇದಲ್ಲದೆ, ಅಕ್ಟೋಬರ್ 9 ರಿಂದ 13 ರವರೆಗೆ ಮೈಸೂರು-ಕೆಎಸ್ಆರ್ ಬೆಂಗಳೂರು ಮಾರ್ಗದಲ್ಲಿ ಮತ್ತು ಅಕ್ಟೋಬರ್ 10 ರಿಂದ 14 ರವರೆಗೆ ಕೆಎಸ್ಆರ್ ಬೆಂಗಳೂರು-ಮೈಸೂರು ವಿಶೇಷ ರೈಲುಗಳು ಚಲಿಸಲಿವೆ.

ಇದನ್ನೂ ಓದಿ: ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುವಾಗ ಸೇಫ್ಟಿ ಹಾರ್ನೆಸ್ ಬೆಲ್ಟ್ ಕಡ್ಡಾಯಗೊಳಿಸಲು ಮುಂದಾದ ಕರ್ನಾಟಕ ಸರ್ಕಾರ

ಇದೇ ಅವಧಿಯಲ್ಲಿ ಚಾಮರಾಜನಗರ ಮತ್ತು ಮೈಸೂರು ನಡುವೆ ಹೆಚ್ಚುವರಿ ಸೇವೆಗಳು ಲಭ್ಯವಿರುತ್ತವೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:07 am, Thu, 5 September 24