ಕಲಬುರಗಿ ಬೆಂಗಳೂರು ನಡುವೆ 2 ವಿಶೇಷ ರೈಲು: ಹೊರಡುವ ಸಮಯ, ನಿಲುಗಡೆ ಇತ್ಯಾದಿ ಮಾಹಿತಿ ಇಲ್ಲಿದೆ

Kalaburagi Bangalore Special Train: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸುವುದಕ್ಕಾಗಿ ನೈಋತ್ಯ ರೈಲ್ವೆ ಬೆಂಗಳೂರು ಹಾಗೂ ಕಲಬುರಗಿ ಮಧ್ಯೆ 2 ವಿಶೇಷ ರೈಲು ಘೋಷಣೆ ಮಾಡಿದೆ. ರೈಲು ಹೊರಡುವ ಸಮಯ, ನಿಲುಗಡೆ ಇತ್ಯಾದಿ ವಿವರ ಇಲ್ಲಿದೆ.

ಕಲಬುರಗಿ ಬೆಂಗಳೂರು ನಡುವೆ 2 ವಿಶೇಷ ರೈಲು: ಹೊರಡುವ ಸಮಯ, ನಿಲುಗಡೆ ಇತ್ಯಾದಿ ಮಾಹಿತಿ ಇಲ್ಲಿದೆ
ಕಲಬುರಗಿ ಬೆಂಗಳೂರು ನಡುವೆ 2 ವಿಶೇಷ ರೈಲು: ಹೊರಡುವ ಸಮಯ, ನಿಲುಗಡೆ ಇತ್ಯಾದಿ ಮಾಹಿತಿ ಇಲ್ಲಿದೆImage Credit source: SWR
Follow us
|

Updated on: Oct 17, 2024 | 8:23 AM

ಬೆಂಗಳೂರು, ಅಕ್ಟೋಬರ್ 17: ಈ ಹಿಂದೆ ಗಣೇಶ ಹಬ್ಬ ಹಾಗೂ ದಸರಾ ಹಬ್ಬಗಳ ಸೀಸನ್​​ನಲ್ಲಿ ಕರ್ನಾಟಕದ ವಿವಿಧ ಪ್ರದೇಶಗಳಿಗೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದ್ದ ನೈಋತ್ಯ ರೈಲ್ವೆ ಇದೀಗ ದೀಪಾವಳಿಗೂ ಪ್ರಯಾಣಿಕರ ನೆರವಿಗೆ ಧಾವಿಸಿದೆ. ದೀಪಾವಳಿ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ಬೇಡಿಕೆಗೆ ಅನುಗುಣವಾಗಿ ಬೆಂಗಳೂರು ಹಾಗೂ ಕಲಬುರಗಿ ಮಧ್ಯೆ 2 ಟ್ರಿಪ್ ವಿಶೇಷ ರೈಲುಗಳನ್ನು ಘೋಷಣೆ ಮಾಡಿದೆ.

‘ಪ್ರಯಾಣಿಕರ ವಿಶೇಷ ಗಮನಕ್ಕೆ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ವಲಯವು ನಿರ್ಧರಿಸಿದೆ’ ಎಂದು ಎಕ್ಸ್​ ಖಾತೆಯಲ್ಲಿ ನೈಋತ್ಯ ರೈಲ್ವೆ ಮಾಹಿತಿ ನೀಡಿದೆ.

ಬೆಂಗಳೂರು ಕಲಬುರಗಿ ವಿಶೇಷ ರೈಲು ವೇಳಾಪಟ್ಟಿ

ಬೆಂಗಳೂರು ಕಲಬುರಗಿ ವಿಶೇಷ ಎಕ್ಸ್​​ಪ್ರೆಸ್ ರೈಲು 06533 ಅಕ್ಟೋಬರ್ 30 ಮತ್ತು ನವೆಂಬರ್ 2ರಂದು ಸಂಚರಿಸಲಿದೆ. ಕಲಬುರಗಿ ಎಸ್​ಎಂವಿಟಿ ವಿಶೇಷ ಎಕ್ಸ್​​ಪ್ರೆಸ್ ರೈಲು 06533 ಅಕ್ಟೋಬರ್ 31 ಮತ್ತು ನವೆಂಬರ್ 3ರಂದು ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ನೈಋತ್ಯ ರೈಲ್ವೆ ಎಕ್ಸ್​ ಸಂದೇಶ

ಬೆಂಗಳೂರು ಕಲಬುರಗಿ ವಿಶೇಷ ಎಕ್ಸ್​ಪ್ರೆಸ್ ರೈಲು ಒಟ್ಟು 12 ನಿಲುಗಡೆಗಳನ್ನು ಹೊಂದಿದೆ.

ಎಲ್ಲೆಲ್ಲಿ ನಿಲುಗಡೆ?

ಎಸ್‌ಎಂವಿಟಿ ಬೆಂಗಳೂರು, ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ಶಹಾಬಾದ್, ಕಲಬುರಗಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.

ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಸೇವೆ

ಈ ರೈಲು 12 ಜನರಲ್ ಸೆಕೆಂಡ್ ಕ್ಲಾಸ್, 3 ಸ್ವೀಪರ್ ಕ್ಲಾಸ್, 2 ಎಸಿ ಸಿ ತ್ರಿ ಟೈಯರ್, 1 ಲಗೇಜ್/ಬ್ರೇಕ್ ವ್ಯಾನ್ ಕಮ್ ಜನರೇಟರ್ ಕಾರ್ ಮತ್ತು | ಎಸ್ಎಲ್‌ಆರ್‌ಡಿ ಸೇರಿ ಗಿಂತೆ 19 ಬೋಗಿಗಳನ್ನು ಒಳಗೊಂಡಿರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಜಗದೀಶ್​ಗೆ ಸೀರೆ ಕೊಡೋಕೆ ಮುಂದಾದ ಮನೆ ಮಂದಿ; ‘ಹೆಂಗಸಾಗೋಕೂ ಯೋಗ್ಯತೆ ಇಲ್ಲ’
ಜಗದೀಶ್​ಗೆ ಸೀರೆ ಕೊಡೋಕೆ ಮುಂದಾದ ಮನೆ ಮಂದಿ; ‘ಹೆಂಗಸಾಗೋಕೂ ಯೋಗ್ಯತೆ ಇಲ್ಲ’
Daily Devotional: ದಿನ ನಿತ್ಯ ದೇವರನಾಮ ಜಪದ ಫಲ ತಿಳಿಯಿರಿ
Daily Devotional: ದಿನ ನಿತ್ಯ ದೇವರನಾಮ ಜಪದ ಫಲ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಇಂದು ಧನಯೋಗ, ಆರು ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ ಇಂದು ಧನಯೋಗ, ಆರು ಗ್ರಹಗಳ ಶುಭ ಫಲವಿದೆ
ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ
ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ
ಚೆನ್ನೈನಲ್ಲಿ ಭಾರೀ ಮಳೆ; ಪ್ರವಾಹದ ನೀರಿನಿಂದ ಎಂಜಿನಿಯರಿಂಗ್ ಕಾಲೇಜು ಜಲಾವೃತ
ಚೆನ್ನೈನಲ್ಲಿ ಭಾರೀ ಮಳೆ; ಪ್ರವಾಹದ ನೀರಿನಿಂದ ಎಂಜಿನಿಯರಿಂಗ್ ಕಾಲೇಜು ಜಲಾವೃತ
ಮಿತಿ ಮೀರಿದ ದರ್ಶನ್ ಬೆನ್ನು ನೋವು; ಬಳ್ಳಾರಿ ಜೈಲಿಗೆ ಬಂತು ಮೆಡಿಕಲ್ ಬೆಡ್
ಮಿತಿ ಮೀರಿದ ದರ್ಶನ್ ಬೆನ್ನು ನೋವು; ಬಳ್ಳಾರಿ ಜೈಲಿಗೆ ಬಂತು ಮೆಡಿಕಲ್ ಬೆಡ್
ಬಿಜೆಪಿ, ಜೆಡಿಎಸ್ ಸಂಸದರು ಕೇಂದ್ರದ ಮುಂದೆ ತುಟಿಬಿಚ್ಚಲ್ಲ: ಸಿದ್ದರಾಮಯ್ಯ
ಬಿಜೆಪಿ, ಜೆಡಿಎಸ್ ಸಂಸದರು ಕೇಂದ್ರದ ಮುಂದೆ ತುಟಿಬಿಚ್ಚಲ್ಲ: ಸಿದ್ದರಾಮಯ್ಯ
ನೂರೈವತ್ತು ಜನಕ್ಕೆ ತಯಾರಿಸಿದ ಬಾಡೂಟ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ನೂರೈವತ್ತು ಜನಕ್ಕೆ ತಯಾರಿಸಿದ ಬಾಡೂಟ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಜಗಳಗಳೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಜಗಳಗಳೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು