ಬೆಂಗಳೂರು, ಅಕ್ಟೋಬರ್ 17: ಈ ಹಿಂದೆ ಗಣೇಶ ಹಬ್ಬ ಹಾಗೂ ದಸರಾ ಹಬ್ಬಗಳ ಸೀಸನ್ನಲ್ಲಿ ಕರ್ನಾಟಕದ ವಿವಿಧ ಪ್ರದೇಶಗಳಿಗೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದ್ದ ನೈಋತ್ಯ ರೈಲ್ವೆ ಇದೀಗ ದೀಪಾವಳಿಗೂ ಪ್ರಯಾಣಿಕರ ನೆರವಿಗೆ ಧಾವಿಸಿದೆ. ದೀಪಾವಳಿ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ಬೇಡಿಕೆಗೆ ಅನುಗುಣವಾಗಿ ಬೆಂಗಳೂರು ಹಾಗೂ ಕಲಬುರಗಿ ಮಧ್ಯೆ 2 ಟ್ರಿಪ್ ವಿಶೇಷ ರೈಲುಗಳನ್ನು ಘೋಷಣೆ ಮಾಡಿದೆ.
‘ಪ್ರಯಾಣಿಕರ ವಿಶೇಷ ಗಮನಕ್ಕೆ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ವಲಯವು ನಿರ್ಧರಿಸಿದೆ’ ಎಂದು ಎಕ್ಸ್ ಖಾತೆಯಲ್ಲಿ ನೈಋತ್ಯ ರೈಲ್ವೆ ಮಾಹಿತಿ ನೀಡಿದೆ.
ಬೆಂಗಳೂರು ಕಲಬುರಗಿ ವಿಶೇಷ ಎಕ್ಸ್ಪ್ರೆಸ್ ರೈಲು 06533 ಅಕ್ಟೋಬರ್ 30 ಮತ್ತು ನವೆಂಬರ್ 2ರಂದು ಸಂಚರಿಸಲಿದೆ. ಕಲಬುರಗಿ ಎಸ್‌ಎಂವಿಟಿ ವಿಶೇಷ ಎಕ್ಸ್ಪ್ರೆಸ್ ರೈಲು 06533 ಅಕ್ಟೋಬರ್ 31 ಮತ್ತು ನವೆಂಬರ್ 3ರಂದು ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.
ಪ್ರಯಾಣಿಕರ ವಿಶೇಷ ಗಮನಕ್ಕೆ :
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ವಲಯವು ನಿರ್ಧರಿಸಿದೆ.#SWRupdates pic.twitter.com/x4txPOUgOn— South Western Railway (@SWRRLY) October 16, 2024
ಬೆಂಗಳೂರು ಕಲಬುರಗಿ ವಿಶೇಷ ಎಕ್ಸ್ಪ್ರೆಸ್ ರೈಲು ಒಟ್ಟು 12 ನಿಲುಗಡೆಗಳನ್ನು ಹೊಂದಿದೆ.
ಎಸ್‌ಎಂವಿಟಿ ಬೆಂಗಳೂರು, ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ಶಹಾಬಾದ್, ಕಲಬುರಗಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.
ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಸೇವೆ
ಈ ರೈಲು 12 ಜನರಲ್ ಸೆಕೆಂಡ್ ಕ್ಲಾಸ್, 3 ಸ್ವೀಪರ್ ಕ್ಲಾಸ್, 2 ಎಸಿ ಸಿ ತ್ರಿ ಟೈಯರ್, 1 ಲಗೇಜ್/ಬ್ರೇಕ್ ವ್ಯಾನ್ ಕಮ್ ಜನರೇಟರ್ ಕಾರ್ ಮತ್ತು | ಎಸ್ಎಲ್‌ಆರ್‌ಡಿ ಸೇರಿ ಗಿಂತೆ 19 ಬೋಗಿಗಳನ್ನು ಒಳಗೊಂಡಿರಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ