ಬೆಂಗಳೂರು, ಸೆಪ್ಟೆಂಬರ್ 10: ಆಂಧ್ರ ಪ್ರದೇಶದ ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ನಿಲ್ದಾಣ ಮತ್ತು ಪಶ್ಚಿಮ ಬಂಗಾಳದ ಹೌರಾ ಮಧ್ಯೆ ಸಂಚರಿಸುತ್ತಿದ್ದ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದ ವರೆಗೆ ವಿಸ್ತರಿಸಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ ಅಧಿಕೃತ ಖಾತೆಯ ಮೂಲಕ ನೈಋತ್ಯ ರೈಲ್ವೆಯು ಪ್ರಯಾಣಿಕರಿಗೆ ಮಾಹಿತಿ ನೀಡಿದೆ.
ಪ್ರಯಾಣಿಕರ ವಿಶೇಷ ಗಮನಕ್ಕೆ, ಹೌರಾ-ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು (ರೈಲು ಸಂಖ್ಯೆ 22831/22832) ಸೇವೆ ಯಶವಂತಪುರದವರೆಗೆ ವಿಸ್ತರಣೆ ಮಾಡಲಾಗಿದೆ. ನಾಗಸಮುದ್ರಂ ನಿಲ್ದಾಣದಲ್ಲಿ ರೈಲುಗಳ ನಿಲುಗಡೆ ರದ್ದು ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.
ಪ್ರಯಾಣಿಕರ ವಿಶೇಷ ಗಮನಕ್ಕೆ :
I. ಹೌರಾ-ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಸೇವೆ ಯಶವಂತಪುರದವರೆಗೆ ವಿಸ್ತರಣೆ.
II. ನಾಗಸಮುದ್ರಂ ನಿಲ್ದಾಣದಲ್ಲಿ ರೈಲುಗಳ ನಿಲುಗಡೆ ರದ್ದು#SWRupdates pic.twitter.com/p7rD9P0kEd— South Western Railway (@SWRRLY) September 9, 2024
ಹೌರಾ-ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ನಿಲ್ದಾಣಗಳ ನಡುವೆ ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ರೈಲು ಸಂಖ್ಯೆ 22831, ಈಗ ಹೌರಾ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಸೆಪ್ಟೆಂಬರ್ 25 ರಿಂದ ಜಾರಿಗೆ ಬರುವಂತೆ ಕಾರ್ಯನಿರ್ವಹಿಸಲಿದೆ. ಈ ರೈಲು ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ (ಎಸ್‌ಎಸ್ ಪಿಎನ್) ನಲ್ಲಿ ಕೊನೆಗೊಳ್ಳುವ ಬದಲು ಯಶವಂತಪುರದವರೆಗೆ ತನ್ನ ಪ್ರಯಾಣವನ್ನು ವಿಸ್ತರಿಸುತ್ತದೆ.
ಈ ಹಿಂದೆ ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ನಿಲ್ಯಾಣದಿಂದ ಹೌರಾಗೆ ಚಲಿಸುತ್ತಿದ್ದ ರೈಲು ಸಂಖ್ಯೆ 22832, ಈಗ ಯಶವಂತಪುರದಿಂದ ಹೌರಾಕ್ಕೆ ಸೆಪ್ಟೆಂಬರ್ 27 ರಿಂದ ಸಂಚರಿಸಲಿದೆ.
ಇದನ್ನೂ ಓದಿ: ಬೆಂಗಳೂರು: ಎಸ್ಎಂವಿಟಿ ರೈಲು ನಿಲ್ದಾಣದಲ್ಲಿ ಹೊಸ ನಿಯಮ ಜಾರಿ, ಪ್ರಯಾಣಿಕರಿಗೆ ಸಂಕಷ್ಟ
ಅಗತ್ಯ ಮೂಲಸೌಕರ್ಯ ಕಾಮಗಾರಿಯ ಸಲುವಾಗಿ ನಾಗಸಮುದ್ರಂ ನಿಲ್ದಾಣದಲ್ಲಿ ರೈಲು ಸಂಖ್ಯೆ 07693/07694 ಗುಂತಕಲ್-ಹಿಂದೂಪುರ-ಗುಂತಕಲ್ ಡೆಮು ವಿಶೇಷ ರೈಲುಗಳ ನಿಲುಗಡೆಯನ್ನು ನವೆಂಬರ್ 5 ರವರೆಗೆ ರದ್ದುಗೊಳಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ