ಹುಬ್ಬಳಿಯಿಂದ ಪ್ರಯಾಗ್‌ರಾಜ್‌ಗೆ ವಿಶೇಷ ರೈಲು: ಇಲ್ಲಿದೆ ವೇಳಾಪಟ್ಟಿ
ನೈಋತ್ಯ ರೈಲ್ವೆ ಹುಬ್ಬಳ್ಳಿಯಿಂದ ಪ್ರಯಾಗ್‌ರಾಜ್‌ಗೆ ಹೊಸ ಏಕಮಾರ್ಗ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಪ್ರಾರಂಭಿಸಿದೆ. ಈ ರೈಲು ಧಾರವಾಡ, ಬೆಳಗಾವಿ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ನಿಲ್ಲಲಿದೆ. ರೈಲಿನ ಸಮಯ, ಮಾರ್ಗ ಮತ್ತು ಬುಕಿಂಗ್ ಮಾಹಿತಿಯನ್ನು ಭಾರತೀಯ ರೈಲ್ವೆಯ ವೆಬ್‌ಸೈಟ್ ಅಥವಾ 139 ನಂಬರ್‌ಗೆ ಕರೆ ಮಾಡುವ ಮೂಲಕ ಪಡೆಯಬಹುದು. ಕುಂಭಮೇಳದಿಂದಾಗಿ ಪ್ರಯಾಣಿಕರ ದಟ್ಟತೆಯನ್ನು ನಿವಾರಿಸಲು ಈ ರೈಲು ಪ್ರಾರಂಭಿಸಲಾಗಿದೆ.
ಹುಬ್ಬಳ್ಳಿ, ಡಿಸೆಂಬರ್ 26: ನೈಋತ್ಯ ರೈಲ್ವೆ ಹುಬ್ಬಳ್ಳಿಯಿಂದ ಪ್ರಯಾಗ್‌ರಾಜ್‌ಗೆ (Hubballi to Prayagraj) ಏಕಮಾರ್ಗ ವಿಶೇಷ ಎಕ್ಸಪ್ರೆಸ್ ರೈಲು ಪ್ರಾರಂಭಿಸಿದೆ. ಆ ಮೂಲಕ ಪ್ರಯಾಣಿಕರ ದಟ್ಟಣೆ ನಿವಾರಿಸಲು ಇಲಾಖೆ ಮುಂದಾಗಿದೆ. ಡಿಸೆಂಬರ್ 26 (ಗುರುವಾರ) ರಂದು ಎಸ್ಎಸ್‌ಎಸ್ ಹುಬ್ಬಳ್ಳಿ-ಪ್ರಯಾಗ್‌ರಾಜ್ ಏಕಮಾರ್ಗ ವಿಶೇಷ ಎಕ್ಸ್ ಪ್ರೆಸ್ (07369) ರೈಲು ಹುಬ್ಬಳ್ಳಿಯಿಂದ 11 ಗಂಟೆಗೆ ಹೊರಟು, ಶನಿವಾರ 03 ಗಂಟೆಗೆ ಪ್ರಯಾಗ್‌ರಾಜ್ ತಲುಪಲಿದೆ.
ಈ ರೈಲು ಧಾರವಾಡ, ಬೆಳಗಾವಿ, ಘಟಪ್ರಭಾ, ಮಿರಜ್, ಸಾಂಗ್ಲಿ, ಕರಾಡ್, ಪುಣೆ, ದೌಂಡ್ ಚೋರ್ಡ್ ಲೈನ್, ಅಹದಗರ, ಮನ್ನಡ, ಭುಸಾವಲ್, ಖಾಂಡ್ಯಾ, ತಲಾಡಿಯಾ, ಛಾನೆರಾ, ಖಿರ್ಕಿಯಾ, ಹರ್ದಾ, ಬಾನಾಪುರ, ಇಟಾರ್ಸಿ, ಪಿಪರಿಯಾ, ನರಸಿಂಗಪುರ, ಜಬಲ್ಪುರ, ಕಟ್ಟಿ, ಮೈಹಾರ್, ಸತ್ನಾ ಮತ್ತು ಮಾಣಿಕ್ಷುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ಇದನ್ನೂ ಓದಿ: New Year: ಕ್ರಿಸ್ಮಸ್, ಹೊಸ ವರ್ಷ ಪ್ರಯುಕ್ತ ರಾಜ್ಯದ ಈ ನಗರಗಳಿಗೆ ವಿಶೇಷ ರೈಲು
ಈ ರೈಲು 11 ಸ್ವೀಪರ್ ಕ್ಲಾಸ್, 7 ಜನರಲ್ ಸೆಕೆಂಡ್ ಕ್ಲಾಸ್ ಮತ್ತು ಎಸ್ಎಲ್ಆರ್ಡಿ ಸೇರಿದಂತೆ ಒಟ್ಟು 20 ಬೋಗಿಗಳನ್ನು ಹೊಂದಿದೆ. ಈ ರೈಲಿನ ಆಗಮನ, ನಿರ್ಗಮನ ಸಮಯ ತಿಳಿಯಲು ಪ್ರಯಾಣಿಕರು ಭಾರತೀಯ ರೈಲ್ವೆಯ ವೆಬ್ ಸೈಟ್ www.enquiry.indianrail.gov.in, 139 ನಂಬರ್‌ಗೆ ಕರೆ ಮಾಡುವ ಮೂಲಕ ಅಥವಾ ಎನ್‌ಟಿಇಎಸ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ ಮಾಹಿತಿ ಪಡೆಯಬಹುದಾಗಿದೆ.
ಕುಂಭಮೇಳ ಪ್ರಯುಕ್ತ ಬೆಂಗಳೂರಿನಿಂದ ಪ್ರಯಾಗ್‌ರಾಜ್‌ಗೆ ವಿಶೇಷ ರೈಲು
ಕುಂಭಮೇಳದಲ್ಲಿ ಭಾಗವಹಿಸುವ ಪ್ರಯಾಣಿಕರ ನಿರೀಕ್ಷಿತ ದಟ್ಟಣೆಯನ್ನು ನಿವಾರಿಸುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆ ಏಕಮಾರ್ಗ ವಿಶೇಷ ರೈಲನ್ನು ಪ್ರಾರಂಭಿಸಿದೆ. ಈ ರೈಲು (06577) ಡಿಸೆಂಬರ್ 26 (ಗುರುವಾರ) ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ನಿಲ್ದಾಣದಿಂದ ರಾತ್ರಿ 11 ಗಂಟೆಗೆ ಹೊರಟು, ಶನಿವಾರ (ಡಿಸೆಂಬರ್ 28) 01:30 ಗಂಟೆಗೆ ಪ್ರಯಾಗ್‌ರಾಜ್ ತಲುಪಲಿದೆ.
ಈ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ಪೆಟ್ಟೆ, ಕಟ್ಟಾಡಿ, ರೇಣಿಗುಂಟ, ಗುಡೂರು, ವಿಜಯವಾಡ, ವಾರಂಗಲ್, ಬಲ್ಲಾರ್ಷಾ, ನಾಗುರ, ಇಟಾರ್ಸಿ, ಜಬಲ್ಪುರ್, ಕಟ್ಟಿ, ಸತ್ಕಾ ಮತ್ತು ಮಾಣಿಕುರ ನಿಲ್ದಾಣಗಳಲ್ಲಿ ನಿಲ್ಲಲಿದೆ. ಈ ರೈಲು 15 ಸ್ವೀಪರ್ ಕ್ಲಾಸ್ ಬೋಗಿಗಳು, 3 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು 2 ಎಸ್ಎಲ್ಆರ್ಡಿ ಸೇರಿದಂತೆ 20 ಬೋಗಿಗಳನ್ನು ಒಳಗೊಂಡಿದೆ.
ಇದನ್ನೂ ಓದಿ: ಕರ್ನಾಟಕದ ಈ ರೈಲುಗಳು ಭಾಗಶಃ ರದ್ದು, ತಿರುಪತಿ-ಹುಬ್ಬಳ್ಳಿ ರೈಲು ಸಂಖ್ಯೆ ಬದಲು; ಇಲ್ಲಿದೆ ವಿವರ
ಈ ರೈಲಿನ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಪ್ರಯಾಣಿಕರು ಭಾರತೀಯ ರೈಲ್ವೆಯ ವೆಬ್ ಸೈಟ್ www.enquiry.indianrail.gov.in ಭೇಟಿ ನೀಡಿ. ಅಥವಾ 139 ನಂಬರ್‌ಗೆ ಕರೆ ಮಾಡುವ ಮೂಲಕ ಮಾಹಿತಿ ಪಡೆಯಬಹುದಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.