ರೈಲಿನಲ್ಲಿ ಬೆಂಕಿ ಹೊತ್ತಿಸುವ ವಸ್ತುಗಳನ್ನು ಸಾಗಿಸದಂತೆ ಪ್ರಯಾಣಿಕರಿಗೆ ನೈಋತ್ಯ ರೈಲ್ವೆ ಮನವಿ

ರೈಲಿನಲ್ಲಿ ಪಟಾಕಿ ಮತ್ತು ಬೆಂಕಿ ಹೊತ್ತಿಸುವ ವಸ್ತುಗಳನ್ನು ಸಾಗಿಸುವುದು ರೈಲ್ವೆ ಕಾಯ್ದೆಯಡಿ ಅಪರಾಧ. ಮತ್ತು ಇದನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಚಲಿಸುವ ರೈಲುಗಳಲ್ಲಿ ಮತ್ತು ರೈಲ್ವೆ ಆವರಣದಲ್ಲಿ ಪ್ರಯಾಣಿಕರು ಧೂಮಪಾನ ಮಾಡಬಾರದು ಎಂದು ಅವರು ರೈಲ್ವೆ ಇಲಾಖೆ ಈಗಾಗಲೆ ಸುತ್ತೋಲೆ ಹೊರಡಿಸಿದೆ.

ರೈಲಿನಲ್ಲಿ ಬೆಂಕಿ ಹೊತ್ತಿಸುವ ವಸ್ತುಗಳನ್ನು ಸಾಗಿಸದಂತೆ ಪ್ರಯಾಣಿಕರಿಗೆ ನೈಋತ್ಯ ರೈಲ್ವೆ ಮನವಿ
ರೈಲು
Follow us
ವಿವೇಕ ಬಿರಾದಾರ
|

Updated on: Nov 21, 2023 | 8:45 AM

ಬೆಂಗಳೂರು ನ.21: ದೇಶಾದ್ಯಂತ ರೈಲುಗಳಲ್ಲಿ (Train) ಅಗ್ನಿ ಅವಘಡಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ರೈಲಿನಲ್ಲಿ ಬೆಂಕಿ (Fire) ಹೊತ್ತಿಸುವ ವಸ್ತುಗಳನ್ನು ಸಾಗಿಸದಂತೆ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಮನವಿ ಮಾಡಿದೆ. ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡೀಸೆಲ್, ಸೀಮೆಎಣ್ಣೆ, ಸ್ಟವ್, ಮ್ಯಾಚ್ ಬಾಕ್ಸ್, ಸಿಗರೇಟ್ ಲೈಟರ್, ಪಟಾಕಿ ಸೇರಿದಂತೆ ಯಾವುದೇ ಸ್ಫೋಟಕ ವಸ್ತುಗಳನ್ನು ತೆಗೆದುಕೊಂಡು ಹೋಗದಂತೆ ಬೆಂಗಳೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೀಶ್ ಮೋಹನ್ ಶುಕ್ರವಾರ ಪ್ರಯಾಣಿಕರಿಗೆ ಸೂಚಿಸಿದ್ದಾರೆ.

ರೈಲಿನಲ್ಲಿ ಪಟಾಕಿ ಮತ್ತು ಬೆಂಕಿ ಹೊತ್ತಿಸುವ ವಸ್ತುಗಳನ್ನು ಸಾಗಿಸುವುದು ರೈಲ್ವೆ ಕಾಯ್ದೆಯಡಿ ಅಪರಾಧ ಎಂದು ಅವರು ಸೂಚಿಸಿದರು. ಮತ್ತು ಇದನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಚಲಿಸುವ ರೈಲುಗಳಲ್ಲಿ ಮತ್ತು ರೈಲ್ವೆ ಆವರಣದಲ್ಲಿ ಪ್ರಯಾಣಿಕರು ಧೂಮಪಾನ ಮಾಡಬಾರದು ಎಂದು ಅವರು ರೈಲ್ವೆ ಇಲಾಖೆ ಈಗಾಗಲೆ ಸುತ್ತೋಲೆ ಹೊರಡಿಸಿದೆ.

ಏಪ್ರಿಲ್‌ನಿಂದ ಅಕ್ಟೋಬರ್‌ವರೆಗೆ ಪಟಾಕಿ ಮತ್ತು ಸುಡುವ ವಸ್ತುಗಳನ್ನು ಸಾಗಿಸಿದ್ದಕ್ಕಾಗಿ ಐದು ಪ್ರಕರಣಗಳನ್ನು ದಾಖಲಿಸಲಾಗಿವೆ. ಚಲಿಸುವ ರೈಲಿನಲ್ಲಿ ಮತ್ತು ರೈಲ್ವೆ ಆವರಣಗಳಲ್ಲಿ ಧೂಮಪಾನ ಮಾಡಿದಕ್ಕೆ 258 ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದರು.

ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ಬೆಂಗಳೂರು-ಹುಬ್ಬಳ್ಳಿ ಮಧ್ಯೆ ಈ ಎರಡು ದಿನ ರೈಲು ರದ್ದು

ರೈಲ್ವೆ ಕಾರ್ಯಾಚರಣೆಗೆ ಸಂಬಂಧಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರಿಗೆ ಅಗ್ನಿಶಾಮಕಗಳನ್ನು ಹೇಗೆ ಬಳಸಬೇಕೆಂದು ತರಬೇತಿ ನೀಡಲಾಗಿದೆ. ವಿಭಾಗದ 30 ನಿಲ್ದಾಣಗಳಲ್ಲಿ ರೈಲ್ವೆ ಮೇಲ್ವಿಚಾರಕರು ಮತ್ತು ಸಿಬ್ಬಂದಿ ಅಗ್ನಿ ಸುರಕ್ಷತಾ ತಪಾಸಣೆ ನಡೆಸಿದರು. 182 ಪ್ಯಾಂಟ್ರಿ ಕಾರುಗಳನ್ನು ಸಹ ಪರಿಶೀಲಿಸಲಾಗಿದೆ ಮತ್ತು ನ್ಯೂನತೆಗಳನ್ನು ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ 60 ಪಾರ್ಸೆಲ್ ವ್ಯಾನ್‌ಗಳು ಮತ್ತು 145 ಸೆಕೆಂಡ್ ಕ್ಲಾಸ್ ಸಿಟ್ಟಿಂಗ್-ಲಗೇಜ್ ಕೋಚ್‌ಗಳ (ಎಸ್‌ಎಲ್‌ಆರ್) ತಪಾಸಣೆಯಲ್ಲಿ ಯಾವುದೇ ದಹನಕಾರಿ ವಸ್ತುಗಳನ್ನು ಸಾಗಿಸಿಲ್ಲ ಎಂದು ಹೇಳಿದರು. ರೈಲ್ವೆಯಲ್ಲಿ ದಹನಕಾರಿ ಮತ್ತು ಸ್ಫೋಟಕ ವಸ್ತುಗಳನ್ನು ಸಾಗಿಸುವುದು ಶಿಕ್ಷಾರ್ಹ ಅಪರಾಧವಾಗಿದೆ ಮತ್ತು ರೈಲ್ವೆ ಕಾಯಿದೆ, 1989 ರ ಸೆಕ್ಷನ್ 67, 164 ಮತ್ತು 165 ರ ಅಡಿಯಲ್ಲಿ 1,000 ರೂ.ವರೆಗೆ ದಂಡ ಅಥವಾ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ಎರಡೂ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ