2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ.. ಮೊಳಕಾಲ್ಮೂರು ತಹಶೀಲ್ದಾರ್ ACB ಬಲೆಗೆ
2 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಮೊಳಕಾಲ್ಮೂರು ತಹಶೀಲ್ದಾರ್ ಹಾಗೂ ಕಂದಾಯ ಅಧಿಕಾರಿಯೊಬ್ಬರು ACB ಬಲೆಗೆ ಬಿದ್ದಿದ್ದಾರೆ.
ಚಿತ್ರದುರ್ಗ: 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಮೊಳಕಾಲ್ಮೂರು ತಹಶೀಲ್ದಾರ್ ಹಾಗೂ ಕಂದಾಯ ಅಧಿಕಾರಿಯೊಬ್ಬರು ACB ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದ ಕಚೇರಿಯಲ್ಲಿ ಇಬ್ಬರು ಅಧಿಕಾರಿಗಳು ACB ಬಲೆಗೆ ಸಿಲುಕಿದ್ದಾರೆ.
ತಹಶೀಲ್ದಾರ್ ಮಲ್ಲಿಕಾರ್ಜುನ ಹಾಗೂ RI ಉಮೇಶ್ರನ್ನು ACB ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ರಸ್ತೆ ನಿರ್ಮಾಣ ಗುತ್ತಿಗೆದಾರ ಪ್ರೀತಂ ಬಳಿ 2 ಲಕ್ಷ ರೂಪಾಯಿ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ಲಂಚ ಸ್ವೀಕರಿಸುತ್ತಿದ್ದ ವೇಳೆ ACB ಅಧಿಕಾರಿಗಳು ದಾಳಿ ನಡೆಸಿದರು ಎಂದು ತಿಳಿದುಬಂದಿದೆ. ACB ಎಸ್.ಪಿ ಜಯಪ್ರಕಾಶ್ ನೇತೃತ್ವದಲ್ಲಿ ದಾಳಿ ನಡೆಯಿತು.
Published On - 5:40 pm, Mon, 30 November 20