ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರದ ಮೇಲೆ ಒತ್ತಡ ಹಾಕಿ: ಸಂಸದರಿಗೆ ಸಿಎಂ ಸೂಚನೆ

ಕರ್ನಾಟಕದಿಂದ ಆಯ್ಕೆಯಾದ ಸಂಸದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ನವದೆಹಲಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ರಾಜ್ಯದ ಅಭಿವೃದ್ಧಿ, ನೀರಾವರಿ ಹಾಗೂ ಇನ್ನಿತರೆ ವಿಚಾರಗಳ ಬಗ್ಗೆ ಚರ್ಚಿಸಿದರು. ಇಂದು (ಜೂ.28) ಸುದ್ದಿಗೋಷ್ಠಿ ನಡೆಸಿ ಸಭೆಯಲ್ಲಿ ಪ್ರಸ್ತಾಪವಾದ ವಿಷಯಗಳ ಬಗ್ಗೆ ತಿಳಿಸಿದರು.

ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರದ ಮೇಲೆ ಒತ್ತಡ ಹಾಕಿ: ಸಂಸದರಿಗೆ ಸಿಎಂ ಸೂಚನೆ
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಂಸದರು
Follow us
|

Updated on:Jun 28, 2024 | 12:24 PM

ನವದೆಹಲಿ/ಬೆಂಗಳೂರು, ಜೂನ್​ 28: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ರಾಜ್ಯ ಸಂಸದರೊಂದಿಗೆ ನವದೆಹಲಿಯಲ್ಲಿ (Delhi) ಶುಕ್ರವಾರ ಸಭೆ ನಡೆಸಿದರು. ಸಭೆಯಲ್ಲಿ ಚರ್ಚೆಯಾದ ವಿಷಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಿ, ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ರಾಜ್ಯಕ್ಕೆ ಬರಬೇಕಿರುವ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ರಾಜ್ಯದ ಯೋಜನೆಗಳನ್ನು ಸಂಸತ್ ಸದಸ್ಯರ ಗಮನಕ್ಕೆ ತರಲಾಗಿದೆ. ಪಕ್ಷಭೇದ ಮರೆತು ಕರ್ನಾಟಕದ ಒಳಿತಿಗಾಗಿ ನಿಲ್ಲುವ ಪ್ರಯತ್ನ ಮಾಡುತ್ತೇವೆ ಅಂತ ಹೇಳಿದ್ದಾರೆ ಎಂದು ತಿಳಿಸಿದರು.

ರಾಜ್ಯದ ಯೋಜನೆಗಳನ್ನು ಜಾರಿ ಮಾಡುವಂತೆ ಕೇಂದ್ರದ ಮೇಲೆ ಒತ್ತಡಹಾಕಿ ಮಂಜೂರು ಮಾಡಿಸಲು ಹೇಳಿದ್ದೇವೆ. ರಾಜ್ಯದ ನೆಲ, ಜಲ, ಭಾಷೆ ವಿಚಾರದಲ್ಲಿ ರಾಜಕೀಯ ಮಾಡಬಾರದು. ಪಕ್ಷ ಭೇದ ಮರೆತು ಪ್ರಯತ್ನ ಮಾಡುತ್ತಿದ್ದೇವೆ. ಕೇಂದ್ರ ಮಂತ್ರಿಗಳು ಉತ್ತರದ ರೂಪದಲ್ಲಿ ಪತ್ರ ಕೊಟ್ಟಿದ್ದಾರೆ. ಬಿಜೆಪಿ ನಿಲುವನ್ನು ಪ್ರಸ್ತಾಪ ಮಾಡಿದ್ದಾರೆ. ಅದರಲ್ಲಿ ಅನೇಕ‌ ಸುಳ್ಳುಗಳು ಇವೆ. ಮಹದಾಯಿ ಕುಡಿಯುವ ನೀರಿನ ಯೋಜನೆ ನ್ಯಾಯಾಲಯದಲ್ಲಿ ಇದೆ ಅಂತ ಹೇಳಿದ್ದಾರೆ. ಗೆಜೆಟ್ ನೊಟಿಫಿಕೇಷನ್ ಆಗಿದೆ. ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆ ಅನುಮತಿ ಬೇಕಿದೆ. ವಿಷಯ ಕೇಂದ್ರ ಸರಕಾರದ ಮುಂದೆ ಇದೆ. ನ್ಯಾಯಾಲಯದಲ್ಲಿ ಕೇಸ್ ಇದೆ ಎಂದು ನೆಪ ಹೇಳಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಚರ್ಚೆ ಮಾಡಿದ್ದೇವೆ. ಘೋಷಣೆ ಮಾಡಿದ ಹಣವನ್ನು ಕೇಂದ್ರ ಬಿಡುಗಡೆ ಮಾಡಿಲ್ಲ. ಇವತ್ತಿನವರೆಗೂ ಒಂದು ರೂ. ಬಿಡುಗಡೆ ಮಾಡಿಲ್ಲ. ರಾಜ್ಯ ಸರಕಾರದಿಂದ ತಾಂತ್ರಿಕ ಸಮಸ್ಯೆ ಇದೆ ಎಂದಿದ್ದಾರೆ. ಆತರಹದ ಯಾವುದೇ ತಾಂತ್ರಿಕ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದ್ದೇವೆ. ನಾವು ಪತ್ರ ಬರೆದಿದ್ದೇವೆ, ಫೈಲ್ ಕಳಿಸಿದ್ದೇವೆ. 5,300 ಕೋಟಿ ರೂ. ಕೊಡುತ್ತೇವೆ ಅಂತ ನಿರ್ಮಲಾ ಸೀತಾರಮನ್ ಒಪ್ಪಿಕೊಂಡಿದ್ದಾರೆ. ರಾಷ್ಟ್ರೀಯ ಯೋಜನೆ ಅಂತ ಘೋಷಣೆ ಮಾಡಿ ಎಂದು ಒತ್ತಾಯಿಸಿದ್ದೇವೆ. ಇದನ್ನು ಸಂಸದ ಬಸವರಾಜ್​ ಬೊಮ್ಮಾಯಿ ಕೂಡ ಬೆಂಬಲಿಸಿದ್ದಾರೆ ಎಂದು ಹೇಳಿದರು.

ಮೇಕೆದಾಟು ಯೋಜನೆ 2018ರಿಂದ ಬಾಕಿ ಇದೆ. ಡಿಪಿಆರ್ ಮಾಡಿ, 9 ಸಾವಿರ ಕೋಟಿ ರೂ. ಅಂದಾಜು ವೆಚ್ಚವಾಗಲಿದೆ. ನ್ಯಾಯಾಲಯದಲ್ಲಿ ಯಾವುದೇ ಸಮಸ್ಯೆ ಇಲ್ಲ. ಮೇಕೆದಾಟು ಮಾಡಲಿಕ್ಕೆ ಯಾವ ತಕರಾರು ಇಲ್ಲ. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೂ ಅನುಕೂಲವಾಗಲಿದೆ. ತಮಿಳುನಾಡಿನವರು ಕೋರ್ಟ್​ನಲ್ಲಿ ಕೇಸ್ ಹಾಕಿದ್ದಾರೆ. ಆದರೆ ಯೋಜನೆಗೆ ಯಾವುದೆ ತಡೆ ನೀಡಿಲ್ಲ. ಅದನ್ನು ಕೂಡ ಕೇಂದ್ರ ಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಮೇಕೆದಾಟು ಯೋಜನೆಯಿಂದ ಕುಡಿಯುವ ನೀರು, ವಿದ್ಯುತ್ ಉತ್ಪಾದನೆಗೆ ಸಹಾಯಕವಾಗಲಿದೆ. ನಮ್ಮ ಪ್ರದೇಶದಲ್ಲಿ ಹೆಚ್ಚುವರಿ ನೀರು ಸಂಗ್ರಹಿಸಲು ಮೇಕೆದಾಟು ಅವಶ್ಯಕವಾಗಿದೆ. 2022ರಲ್ಲಿ 490 ಟಿಎಂಸಿ ಹೆಚ್ಚುವರಿ ನೀರು ಹರಿದು ಹೋಗಿದೆ. ಹೆಚ್ಚುವರಿ ನೀರು ಬಳಿಸಿಕೊಳ್ಳಲು ಎರಡು ರಾಜ್ಯಗಳಿಗೆ ಸಹಾಯಕವಾಗಲಿದೆ ಎಂದರು.

ಕೃಷ್ಣ ನೀರು ಹಂಚಿಕೆ ವಿಚಾರವಾಗಿ ಗೆಜೆಟ್ ನೊಟಿಫಿಕೇಷನ್ ಆಗಿಲ್ಲ. ಗೆಜೆಟ್ ನೊಟಿಫಿಕೇಷನ್ ಆಗಲು ಕೇಂದ್ರ ಸರಕಾರ ಸುಪ್ರೀಂಕೋರ್ಟ್​ನಲ್ಲಿ ಹೇಳಬೇಕು. ಇದನ್ನು ಕೂಡ ಕೇಂದ್ರ ಮಂತ್ರಿಗಳ ಗಮನಕ್ಕೆ ತಂದಿದ್ದೇವೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಜನರ ಸಮಸ್ಯೆ ಕೇಳೋದು ಬಿಟ್ಟು ಸಚಿವರ ಮೂಲಕ ಡಿಸಿಎಂ ವಿಚಾರ ಎತ್ತಿಸಿದ್ದೇ ಸಿದ್ದರಾಮಯ್ಯ: ಬಿವೈ ವಿಜಯೇಂದ್ರ

15ನೇ ಹಣಕಾಸು ಆಯೋಗದಲ್ಲಿ 2011ರ ಜನಗಣತಿ ವರದಿ ಪಡೆದಿದ್ದಾರೆ. ಕರ್ನಾಟಕದಲ್ಲಿ ಜನಸಂಖ್ಯೆ ಕಂಟ್ರೋಲ್ ಮಾಡಿದ್ದೇವೆ. 1971ರ ಜನಸಂಖ್ಯಾ ವರದಿ ಮಾನದಂಡವಾಗಬೇಕು. ಜನಸಂಖ್ಯೆ ನಿಯಂತ್ರಣ ಮಾಡಿದವರಿಗೆ ಮಾರಕ ಆಗಬಾರದು. ಇದರಿಂದ ಸುಮಾರು 23 ಪರ್ಸೆಂಟ್ ಕೋತಾ ಆಗಿದೆ. ಕರ್ನಾಟಕದಿಂದ 4.5 ಲಕ್ಷ ಕೋಟಿ ತೆರಿಗೆ ಕಟ್ಟುತ್ತೇವೆ. ನಮಗೆ ವಾಪಸ್ ಬರುವುದು 12 ಪರ್ಸೆಂಟ್ ಮಾತ್ರ. 16ನೇ ಹಣಕಾಸು ಆಯೋಗದ ಮುಂದೆ ಮಂಡಿಸಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯಕ್ಕೆ ವಿಶೇಷ ಅನುದಾನವನ್ನು ಕೇಂದ್ರ ಕೊಟ್ಟಿಲ್ಲ. ನಮ್ಮ ಸರಕಾರದಲ್ಲೂ ಪ್ರಯತ್ನ ಮಾಡಿದ್ದೇವೆ, ಬಿಎಸ್​ ಯಡಿಯೂರಪ್ಪ ಅವರು ಅಧಿಕಾರದಲ್ಲಿ ಇದ್ದಾಗಲೂ ಪ್ರಯತ್ನ ಮಾಡಿದ್ದಾರೆ ಎಂದು ತಿಳಿಸಿದರು.

ಫೆಲಿಫೆರಲ್ ರಿಂಗ್ ರೋಡ್​ಗೂ ಕೂಡ ಅನುದಾನ ಕೊಟ್ಟಿಲ್ಲ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಜಕೀಯ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. 5,495 ಕೋಟಿ‌ ವಿಶೇಷ ಅನುದಾನ, ಫೆರಿಫರಲ್​ಗೆ 3000 ಕೋಟಿ, ಕೆರೆಗಳ‌ ಅಭಿವೃದ್ದಿಗೆ 3000 ಸೇರಿ ಒಟ್ಟು 11,495ಕೋಟಿ ಬಿಡುಗಡೆ ಆಗಬೇಕು ಎಂದು ಆಗ್ರಹಿಸಿದರು.

ನಮ್ಮ ಮೆಟ್ರೋ ಮೂರನೇ ಹಂತಕ್ಕೆ ಅನುದಾನ ನಿಡುವಂತೆ ಕೇಳಿದ್ದೇವೆ. ಪ್ರಧಾನಿ ಸಿಂಚಾಯಿ ಯೋಜನಿಂದ 770 ಕೋಟಿ ರೂ. ಕೇಳಿದ್ದೇವೆ. ರಾಯಚೂರಿನಲ್ಲಿ ಏಮ್ಸ್ ತೆರೆಯಬೇಕು. ಎಸ್‌ಡಿಆರ್ ಎಫ್​ದರ ಮರು ಪರಿಷ್ಕೃರಣೆ ಮಾಡಬೇಕು. ಕಸ್ತೂರಿ ರಂಗನ್ ವರದಿ ತಿರಸ್ಕರಿಸಬೇಕು ಎಂದು ಮನವಿ ಮಾಡಿದ್ದೇವೆ. ರಾಜ್ಯದಲ್ಲಿ ಒಂದು ಐಐಟಿ ಇದೆ, ಹಾಸನಕ್ಕೆ ಮತ್ತೊಂದು ಐಐಟಿ ಕೊಡಿ ಎಂದು ಪತ್ರ ಬರೆದಿದ್ದೇವೆ. ರೈಲ್ವೇ ಬಗ್ಗೆ ಸಭೆಯಲ್ಲಿ ಪ್ರಸ್ತಾಪ ಮಾಡಿದ್ದೇವೆ. ರೈಲ್ಷೆಯಿಂದ ಬರುವ ಆದಾಯ ಕೇಂದ್ರಕ್ಕೆ ಹೋಗುತ್ತೆ. ಬಾಕಿ ಇರುವ ಯೋಜನೆಗಳನ್ನು ಪೂರೈಸಿ ಎಂದು ಮನವಿ ಮಾಡಿದ್ದೇವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:24 pm, Fri, 28 June 24

ತಾಜಾ ಸುದ್ದಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?