ಪ್ರಮಾಣ ವಚನ ಸ್ವೀಕರಿಸಿದ 17 ಪರಿಷತ್ ಸದಸ್ಯರು, ಮೊದಲ ಬಾರಿಗೆ ಪರಿಷತ್ ಪ್ರವೇಶಿಸಿದ ಯತೀಂದ್ರ
ವಿಧಾನ ಪರಿಷತ್ಗೆ ನೂತನವಾಗಿ ಆಯ್ಕೆಯಾದ 17 ಸದಸ್ಯರು ಇಂದು (ಜೂ.24) ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಪ್ರಮಾಣ ವಚನ ಬೋಧಿಸಿದರು.
ಬೆಂಗಳೂರು, ಜೂನ್ 24: ವಿಧಾನ ಪರಿಷತ್ಗೆ (Vidhan Parishat) ನೂತನವಾಗಿ ಆಯ್ಕೆಯಾದ 17 ಸದಸ್ಯರು ಇಂದು (ಜೂ.24) ಪ್ರಮಾಣ ವಚನ ಸ್ವೀಕರಿಸಿದರು. ನೂತನ ಸದಸ್ಯರಿಗೆ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ (Basvaraj Horatti) ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಪ್ರಮಾಣ ವಚನ ಬೋಧಿಸಿದರು. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೂ ಮುನ್ನ ನೂತನ ಸದಸ್ಯರಿಗೆ ಮುಖ್ಯಮತ್ರಿ ಸಿದ್ದರಾಮಯ್ಯ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah), ಕಾನೂನು ಹಾಗೂ ಸಂಸದೀಯ ಸಚಿವ ಹೆಚ್ಕೆ ಪಾಟೀಲ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ವಿಧಾನಸಭೆ, ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಒಟ್ಟು 17 ಸದಸ್ಯರು ನೂತನವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆಯಿಂದ ವಿಧಾನ ಪರಿಷತ್ಗೆ 11 ಮತ್ತು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ 6 ಮಂದಿ ಆಯ್ಕೆಯಾಗಿದ್ದಾರೆ.
ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಆಯ್ಕೆಯಾದವರು
ಕಾಂಗ್ರೆಸ್ನಿಂದ ಐವನ್ ಡಿಸೋಜಾ, ಕೆ ಗೋವಿಂದರಾಜು, ಜಗದೇವ್ ಗುತ್ತೆದಾರ್, ಬಲ್ಕಿಸ್ ಬಾನು, ಎನ್ ಎಸ್ ಭೋಸರಾಜ್, ಯತೀಂದ್ರ ಸಿದ್ದರಾಮಯ್ಯ, ಎ ವಸಂತ ಕುಮಾರ್, ಬಿಜೆಪಿಯಿಂದ ಎನ್ ರವಿಕುಮಾರ್, ಸಿಟಿ ರವಿ, ಮುಳೆ ಮಾರುತಿರಾವ್, ಜೆಡಿಎಸ್ನಿಂದ ಜವರಾಯಿಗೌಡ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಲಿಮ್ಕಾ ದಾಖಲೆ ನಿರ್ಮಿಸಿದ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅಭಿನಂದಿಸಿದ ಸದನ
ಶಿಕ್ಷಕ ಹಾಗೂ ಪಧವಿದರ ಕ್ಷೇತ್ರದಿಂದ ಆಯ್ಕೆಯಾದವರು
ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಗೆದ್ದ ಚಂದ್ರಶೇಖರ್ ಬಸವರಾಜ್ ಪಾಟೀಲ್, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ರಾಮೋಜಿಗೌಡ, ಆಗ್ನೆಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಡಿ ಟಿ ಶ್ರೀನಿವಾಸ್, ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯಿಂದ ಗೆದ್ದ ಡಾ. ಧನಂಜಯ ಸರ್ಜಿ, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಎಸ್ಎಲ್ ಭೋಜೇಗೌಡ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ಂದ ಕೆ ವಿವೇಕಾನಂದ ಪ್ರಮಾಣ ವಚನ ಸ್ವೀಕರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಮೊದಲ ಬಾರಿಗೆ ವಿಧಾನ ಪರಿಷತ್ಗೆ ಆಯ್ಕೆಯಾಗಿದ್ದಾರೆ. ಈ ಹಿಂದೆ ಇವರು ವರುಣಾ ಕ್ಷೇತ್ರದ ಶಾಸಕರಾಗಿ ವಿಧಾನಸಭೆಯನ್ನು ಪ್ರವೇಶಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ