ಜಿಲ್ಲಾ-ತಾಲೂಕು ಪಂಚಾಯಿತಿ ಚುನಾವಣೆ: ಇಂದು ಆಯೋಗದ ಪಿಐಎಲ್​ ವಿಚಾರಣೆ ನಡೆಸಲಿರುವ ಹೈಕೋರ್ಟ್

| Updated By: ರಮೇಶ್ ಬಿ. ಜವಳಗೇರಾ

Updated on: Mar 02, 2023 | 6:51 AM

ಈಗಾಗಲೇ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಬಹಳಷ್ಟು ವಿಳಂಬವಾಗಿದ್ದು, ಇಂದು ಕರ್ನಾಟಕ ಹೈಕೋರ್ಟ್ ಈ ಬಗ್ಗೆ ಮಹತ್ವದ ವಿಚಾರಣೆ ನಡೆಸಲಿದೆ. ಈ ಹಿನ್ನೆಲೆಯಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಜಿಲ್ಲಾ-ತಾಲೂಕು ಪಂಚಾಯಿತಿ ಚುನಾವಣೆ: ಇಂದು ಆಯೋಗದ ಪಿಐಎಲ್​ ವಿಚಾರಣೆ ನಡೆಸಲಿರುವ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Follow us on

ಬೆಂಗಳೂರು: ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ (taluk and zilla panchayat election) ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗದ ಸಲ್ಲಿಸಿದ ಪಿಐಎಲ್ ವಿಚಾರಣೆಯನ್ನು ಇಂದು(ಮಾರ್ಚ್ 02) ಕರ್ನಾಟಕ ಹೈಕೋರ್ಟ್ (karnataka high court) ನಡೆಸಲಿದೆ. ನಿನ್ನೆ(ಮಾ.1) ಹೈಕೋರ್ಟ್‌ಗೆ ಸರ್ಕಾರದಿಂದ ಅಧಿಸೂಚನೆಯ ಪ್ರತಿ ಸಲ್ಲಿಕೆಯಾಗಿದೆ. ಇಂದು ಚುನಾವಣಾ ಆಯೋಗದ ಪ್ರತಿಕ್ರಿಯೆ ಕುರಿತು ಕೋರ್ಟ್ ವಿಚಾರಣೆ ಮಾಡಲಿದೆ. ಇದರಿಂದ ಏನು ಆದೇಶ ನೀಡಲಿದೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದ್ದು, ಸ್ಥಳೀಯರ ನಾಯಕರ ಚಿತ್ತ ಇದೀಗ ಕೋರ್ಟ್​ನತ್ತ ನೆಟ್ಟಿದೆ.

ಸೀಮಾ ನಿರ್ಣಯ ಆಯೋಗದ ವರದಿ ಸಿಎಂ ಅಂಗೀಕರಿಸಿದ್ದಾರೆ ಎಂದು ನಿನ್ನೆ ಕ್ಷೇತ್ರ ಪುನರ್ವಿಂಗಡಣೆ ಅಧಿಸೂಚನೆ ಹೊರಡಿಸಿರುವ ಬಗ್ಗೆ ಹೈಕೋರ್ಟ್‌ಗೆ ರಾಜ್ಯಸರ್ಕಾರದಿಂದ ಅಧಿಸೂಚನೆಯ ಪ್ರತಿ ಸಲ್ಲಿಕೆ ಮಾಡಲಾಗಿದೆ. ಈ ಬಗ್ಗೆ ಚುನಾವಣಾ ಆಯೋಗದ ಪ್ರತಿಕ್ರಿಯೆ ಕುರಿತು ಕೋರ್ಟ್ ವಿಚಾರಣೆ ನಡೆಸಲಿದೆ.

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಹಿನ್ನಡೆಯುಂಟಾಗಿತ್ತು. ನ್ಯಾಯಮೂರ್ತಿ ಅನಿರುದ್ಧ್ ನೇತೃತ್ವದ ಸುಪ್ರೀಂ ಕೋರ್ಟ್ ವಿಭಾಗೀಯ ಪೀಠ ಬೋಸ್, ಹೈಕೋರ್ಟ್ ಆದೇಶವನ್ನು ಪಾಲಿಸುವಂತೆ ಸೂಚಿಸಿತ್ತು.

ಕಳೆದ ವರ್ಷ ಮೇ ತಿಂಗಳಲ್ಲಿ ನಿಗದಿಯಾಗಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸುವ ಕುರಿತು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಪರಿಗಣಿಸಲಿಲ್ಲ. ಅರ್ಜಿಯು ಹೈಕೋರ್ಟ್‌ನಲ್ಲಿ ಇತ್ಯರ್ಥಕ್ಕೆ ಬಾಕಿ ಇರುವಾಗ ಮದ್ಯಪ್ರವೇಶಿಸುವುದಿಲ್ಲ ಎಂದು ಕಾರಣ ನೀಡಿತ್ತು.