AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಲೂಕು, ಜಿಲ್ಲಾ ಪಂಚಾಯ್ತಿ ಮೀಸಲಾತಿ ಪ್ರಕಟ: ಚುನಾವಣೆಗೆ ಮುಹೂರ್ತವೂ ಫಿಕ್ಸ್

ಕರ್ನಾಟಕದ 30 ಜಿಲ್ಲೆಗಳ 1,101 ಜಿಲ್ಲಾ ಪಂಚಾಯಿತಿ ಮತ್ತು 234 ತಾಲೂಕು ಪಂಚಾಯಿತಿಗಳ ಒಟ್ಟು 3,580 ಸ್ಥಾನಗಳಿಗೆ ಸರ್ಕಾರ ಕೊನೆಗೂ ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರವು ವಿಶೇಷ ರಾಜ್ಯ ಪತ್ರದ ಮೂಲಕ ಅಧಿಸೂಚನೆ ಹೊರಡಿಸಿದೆ. ಇದರ ಬೆನ್ನಲ್ಲೇ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಯಾವಾಗ ನಡೆಯಬಹುದು ಎನ್ನುವುದನ್ನು ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದಾರೆ.

ತಾಲೂಕು, ಜಿಲ್ಲಾ ಪಂಚಾಯ್ತಿ ಮೀಸಲಾತಿ ಪ್ರಕಟ: ಚುನಾವಣೆಗೆ ಮುಹೂರ್ತವೂ ಫಿಕ್ಸ್
Eshwar Khandre
ರಮೇಶ್ ಬಿ. ಜವಳಗೇರಾ
|

Updated on:Nov 24, 2026 | 3:54 PM

Share

ಬೆಂಗಳೂರು, ನವೆಂಬರ್ 24: ಕ್ಷೇತ್ರ ಮರುವಿಂಗಡಣೆಯಿಂದಾಗಿ 2022ರಿಂದ ವಿಳಂಬವಾಗಿದ್ದ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ರಾಜ್ಯದ 1,101 ಜಿಲ್ಲಾ ಪಂಚಾಯಿತಿ ಮತ್ತು 3580 ತಾಲೂಕು ಪಂಚಾಯಿತಿ ಸ್ಥಾನಗಳಿಗೆ ರಾಜ್ಯ ಸರ್ಕಾರ ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸಿದೆ. ಇದರ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ, 2027ರ ಜನವರಿಯಲ್ಲಿ ಬ್ಯಾಲೆಟ್ ಪೇಪರ್ (ಮತಪತ್ರ) ಮೂಲಕ ಚುನಾವಣೆ ನಡೆಯಲಿದ್ದು, ಶೀಘ್ರದಲ್ಲೇ ಚುನಾವಣಾ ಆಯೋಗ ಅಧಿಕೃತ ವೇಳಾಪಟ್ಟಿ ಪ್ರಕಟಿಸಲಿದೆ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರ್ ಖಂಡ್ರೆ, 1,101 ಜಿಲ್ಲಾ, ಹಾಗೂ 234 ತಾಲೂಕು ಪಂಚಾಯಿತಿಗಳ 3,580 ಸ್ಥಾನಗಳಿಗೆ ಮೀಸಲಾತಿ ನಿಗದಿ ಮಾಡಿ ಅಂತಿಮ ಅಧಿಸೂಚನೆ ಹೊರಡಿಸಲಾಗಿದ್ದು, ಜನವರಿಯಲ್ಲಿ ಚುನಾವಣೆ ನಡೆಯಲಿದೆ. ನಾವು ಅಂತಿಮ ಅಧಿಸೂಚನೆ‌ ಹೊರಡಿಸಿದ್ದೇವೆ. ಯಾವ ಮತದಾರರ ಪಟ್ಟಿ ಬಳಕೆ ಎಂಬುದು ಆಯೋಗಕ್ಕೆ ಬಿಟ್ಟದ್ದು. ಹಳೇ ಮತದಾರರ ಪಟ್ಟಿ ಬಳಕೆ ಎಂಬ ಪ್ರಸ್ತಾವನೆ ಸರ್ಕಾರದ್ದಾಗಿದೆ. ಆದ್ರೆ, ಮುಂದಿನ ಪ್ರಕ್ರಿಯೆ ರಾಜ್ಯ ಚುನಾವಣಾ ಆಯೋಗಕ್ಕೆ ಬಿಟ್ಟದ್ದು ಎಂದರು.

ಇದನ್ನೂ ನೋಡಿ: ಕೆಲಸಕ್ಕೆ ಬಾರದವರೆಂದು ಕುಮಾರಸ್ವಾಮಿಯ ನಾಮಫಲಕ ತೆಗೆಸಿದ ಕಾಂಗ್ರೆಸ್ ಶಾಸಕ, ವಿಡಿಯೋ ನೋಡಿ

ಸ್ಥಳೀಯ ಸಂಸ್ಥೆಗಳ ಅಧಿಕಾರಾವಧಿಯು 2022ರಲ್ಲೇ ಮುಕ್ತಾಯಗೊಂಡಿದ್ದರೂ, ಹಲವು ಕಾರಣಗಳಿಂದ ಚುನಾವಣೆ ನಡೆದಿರಲಿಲ್ಲ. ಹಲವು ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸಿದ್ದು ಮಾತ್ರವಲ್ಲದೆ, ಕೆಲ ಗ್ರಾಮೀಣ ಪ್ರದೇಶಗಳು ಸಮೀಪದ ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳ ವ್ಯಾಪ್ತಿಗೆ ಸೇರ್ಪಡೆಗೊಂಡಿದ್ದವು. ಇದರಿಂದಾಗಿ ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಭೌಗೋಳಿಕ ಗಡಿಗಳನ್ನು ಮರುವಿಂಗಡಣೆ ಮಾಡುವುದು ಅನಿವಾರ್ಯವಾಗಿತ್ತು. ಹಿಂದಿನ ಸರ್ಕಾರದ ಅವಧಿಯಲ್ಲೇ ಚುನಾವಣೆ ನಡೆಯಬೇಕಿತ್ತಾದರೂ, ಪ್ರಕ್ರಿಯೆಗಳು ಪೂರ್ಣಗೊಳ್ಳದ ಕಾರಣ ವಿಳಂಬವಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಬ್ಯಾಲೆಟ್ ಪೇಪರ್ ಮೂಲಕವೇ ಮತದಾನ

ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲಾತಿ ನಿಗದಿಪಡಿಸುವ ಸರ್ಕಾರದ ಪಾಲಿನ ಪ್ರಮುಖ ಕರ್ತವ್ಯ ಪೂರ್ಣಗೊಂಡಿದೆ. ಇನ್ನು ಬ್ಯಾಲೆಟ್ ಪೇಪರ್ ಚುನಾವಣೆ ನಡೆಸಲು ಈಗಾಗಲೇ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡಿದ್ದು, ಈ ಬಗ್ಗೆ ರಾಜ್ಯ ಚುನಾವಣಾ ಆಯೋಗಕ್ಕೂ ಶಿಫಾರಸ್ಸು ಮಾಡಿದೆ. ಸದ್ಯ ಚುನಾವಣಾ ದಿನಾಂಕ, ನೀತಿ ಸಂಹಿತೆ ಹಾಗೂ ವೇಳಾಪಟ್ಟಿಯನ್ನು ನಿಗದಿಪಡಿಸುವ ಜವಾಬ್ದಾರಿ ರಾಜ್ಯ ಚುನಾವಣಾ ಆಯೋಗ ಮೇಲಿದೆ. ಆಯೋಗವು ದಿನಾಂಕ ಪ್ರಕಟಿಸಿದ ತಕ್ಷಣವೇ ಚುನಾವಣೆಗಳು ಬ್ಯಾಲೆಟ್ ಪೇಪರ್ (ಮತಪತ್ರ) ಮೂಲಕವೇ ನಡೆಯಲಿವೆ.

ಕ್ಷೇತ್ರಗಳ ಮೀಸಲಾತಿ ಪ್ರಕಟವಾಗಿದ್ದರಿಂದ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಆಕಾಂಕ್ಷಿಗಳು ಟಿಕೆಟ್ಗಾಗಿ ತಮ್ಮ ನಾಯಕರ ಬೆನ್ನುಬಿದ್ದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:46 pm, Tue, 24 November 26

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಅಂಬರೀಷ್ 8ನೇ ವರ್ಷದ ಪುಣ್ಯಸ್ಮರಣೆ; ಅಂಬಿ ಸಮಾಧಿಗೆ ವಿಶೇಷ ಪೂಜೆ
ಅಂಬರೀಷ್ 8ನೇ ವರ್ಷದ ಪುಣ್ಯಸ್ಮರಣೆ; ಅಂಬಿ ಸಮಾಧಿಗೆ ವಿಶೇಷ ಪೂಜೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ