ತಮಿಳುನಾಡಿನಲ್ಲಿ ಭೀಕರ ಅಪಘಾತ: ಬೆಂಗಳೂರಿನ ಟೆಕ್ಕಿ ಸೇರಿದಂತೆ ಒಂದೇ ಕುಟುಂಬದ 7 ಜನ ಸಾವು
ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೆಂಗಳೂರಿನ ಒಂದೇ ಕುಟುಂಬದ 7 ಜನರು ಸಾವನ್ನಪ್ಪಿರುವಂತಹ ಘಟನೆ ತಿರುವಣ್ಣಾಮಲೈಯ ಸೆಂಗಂ ಬಳಿಯ ಅಂತನೂರು ಬೈಪಾಸ್ನಲ್ಲಿ ಘಟನೆ ನಡೆದಿದೆ. ಅಪಘಾತದಲ್ಲಿ 4 ಮಕ್ಕಳು, ಓರ್ವ ಪುರುಷ ಹಾಗೂ ಮಹಿಳೆ ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ತಮಿಳುನಾಡು, ಅಕ್ಟೋಬರ್ 15: ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ (accident) ಸಂಭವಿಸಿದ ಪರಿಣಾಮ ಒಂದೇ ಕುಟುಂಬದ 7 ಜನರು ಸಾವನ್ನಪ್ಪಿರುವಂತಹ ಘಟನೆ ತಿರುವಣ್ಣಾಮಲೈಯ ಸೆಂಗಂ ಬಳಿಯ ಅಂತನೂರು ಬೈಪಾಸ್ನಲ್ಲಿ ಘಟನೆ ನಡೆದಿದೆ. ಕೃಷ್ಣಗಿರಿ ಮೂಲದ ಸತೀಶ್ ಎನ್ನುವವರು ಬೆಂಗಳೂರಿನ IT ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅಪಘಾತದಲ್ಲಿ 4 ಮಕ್ಕಳು, ಓರ್ವ ಪುರುಷ ಹಾಗೂ ಮಹಿಳೆ ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಕಾರಿನಲ್ಲಿದ್ದವರು ತಮಿಳುನಾಡಿನ ದೇವಸ್ಥಾನಕ್ಕೆ ಭೇಟಿ ನೀಡಿ ಬೆಂಗಳೂರಿಗೆ ವಾಪಸ್ ಆಗುತ್ತಿದ್ದರು. ಲಾರಿಗೆ ನೇರವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ ಎಂದು ತಮಿಳುನಾಡು ಪೊಲೀಸರು ತಿಳಿಸಿದ್ದಾರೆ. ಸದ್ಯ ಕಾರಿನಲ್ಲಿ ಸಿಲುಕಿಕೊಂಡಿರುವ ಮೃತ ದೇಹಗಳನ್ನು ಗ್ಯಾಸ್ ಕಟರ್ನಿಂದ ಕತ್ತರಿಸಿ ಹೊರತೆಯಲಾಗಿದೆ. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಲುಕ್ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಪಿಟಿಐ ಟ್ವೀಟ್
VIDEO | Several killed after a car collided with a truck near Pakkiripalayam in Tiruvannamalai, Tamil Nadu earlier today. pic.twitter.com/o4NBKSdR7X
— Press Trust of India (@PTI_News) October 15, 2023
ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮಿನಿ ಬಸ್ ಕಂಟೈನರ್ಗೆ ಡಿಕ್ಕಿ ಹೊಡೆದು 12 ಮಂದಿ ಸಾವು, 23 ಜನರಿಗೆ ಗಾಯ
ಸದ್ಯ ತಮಿಳುನಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಕುಟುಂಬದ ಇತರೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:59 pm, Sun, 15 October 23