ತಮಿಳುನಾಡಿನಲ್ಲಿ ಭೀಕರ ಅಪಘಾತ: ಬೆಂಗಳೂರಿನ ಟೆಕ್ಕಿ ಸೇರಿದಂತೆ ಒಂದೇ ಕುಟುಂಬದ 7 ಜನ ಸಾವು

|

Updated on: Oct 15, 2023 | 4:32 PM

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೆಂಗಳೂರಿನ ಒಂದೇ ಕುಟುಂಬದ 7 ಜನರು ಸಾವನ್ನಪ್ಪಿರುವಂತಹ ಘಟನೆ ತಿರುವಣ್ಣಾಮಲೈಯ ಸೆಂಗಂ ಬಳಿಯ ಅಂತನೂರು ಬೈಪಾಸ್​ನಲ್ಲಿ ಘಟನೆ ನಡೆದಿದೆ. ಅಪಘಾತದಲ್ಲಿ 4 ಮಕ್ಕಳು, ಓರ್ವ ಪುರುಷ ಹಾಗೂ ಮಹಿಳೆ ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. 

ತಮಿಳುನಾಡಿನಲ್ಲಿ ಭೀಕರ ಅಪಘಾತ: ಬೆಂಗಳೂರಿನ ಟೆಕ್ಕಿ ಸೇರಿದಂತೆ ಒಂದೇ ಕುಟುಂಬದ 7 ಜನ ಸಾವು
ಭೀಕರ ಅಪಘಾತ
Follow us on

ತಮಿಳುನಾಡು, ಅಕ್ಟೋಬರ್​​​ 15: ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ (accident) ಸಂಭವಿಸಿದ ಪರಿಣಾಮ ಒಂದೇ ಕುಟುಂಬದ 7 ಜನರು ಸಾವನ್ನಪ್ಪಿರುವಂತಹ ಘಟನೆ ತಿರುವಣ್ಣಾಮಲೈಯ ಸೆಂಗಂ ಬಳಿಯ ಅಂತನೂರು ಬೈಪಾಸ್​ನಲ್ಲಿ ಘಟನೆ ನಡೆದಿದೆ. ಕೃಷ್ಣಗಿರಿ ಮೂಲದ ಸತೀಶ್ ಎನ್ನುವವರು ಬೆಂಗಳೂರಿನ IT ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅಪಘಾತದಲ್ಲಿ 4 ಮಕ್ಕಳು, ಓರ್ವ ಪುರುಷ ಹಾಗೂ ಮಹಿಳೆ ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಕಾರಿನಲ್ಲಿದ್ದವರು ತಮಿಳುನಾಡಿನ ದೇವಸ್ಥಾನಕ್ಕೆ ಭೇಟಿ ನೀಡಿ ಬೆಂಗಳೂರಿಗೆ ವಾಪಸ್​ ಆಗುತ್ತಿದ್ದರು.
ಲಾರಿಗೆ ನೇರವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ ಎಂದು ತಮಿಳುನಾಡು
ಪೊಲೀಸರು ತಿಳಿಸಿದ್ದಾರೆ. ಸದ್ಯ ಕಾರಿನಲ್ಲಿ ಸಿಲುಕಿಕೊಂಡಿರುವ ಮೃತ ದೇಹಗಳನ್ನು ಗ್ಯಾಸ್​​ ಕಟರ್​ನಿಂದ ಕತ್ತರಿಸಿ ಹೊರತೆಯಲಾಗಿದೆ. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಲುಕ್​ಔಟ್​​ ನೋಟಿಸ್​ ಜಾರಿ ಮಾಡಿದ್ದಾರೆ.

ಪಿಟಿಐ ಟ್ವೀಟ್​​

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮಿನಿ ಬಸ್ ಕಂಟೈನರ್​ಗೆ ಡಿಕ್ಕಿ ಹೊಡೆದು 12 ಮಂದಿ ಸಾವು, 23 ಜನರಿಗೆ ಗಾಯ

ಸದ್ಯ ತಮಿಳುನಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಕುಟುಂಬದ ಇತರೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:59 pm, Sun, 15 October 23