Cauvery Water Dispute: ಕಾವೇರಿ ನೀರಿಗಾಗಿ ಮತ್ತೆ ಕ್ಯಾತೆ; ಸುಪ್ರೀಂ ಕೋರ್ಟ್ ಮೊರೆಹೋದ ತಮಿಳುನಾಡು

Tamil Nadu Moves Supreme Court Against Karnataka; ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿ ಕರ್ನಾಟಕವು ಕಾವೇರಿ ನೀರು ನಿಯಂತ್ರಣ ಸಮಿತಿಯ ಸೂಚನೆಯನ್ನು ಪಾಲಿಸುತ್ತಿಲ್ಲ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈಮುರುಗನ್ ಕಳೆದ ವಾರ ಆರೋಪಿಸಿದ್ದರು. ಅಲ್ಲದೆ, ಈ ವಿಚಾರವಾಗಿ ಸುಪ್ರೀಂ ಕೋರ್ಟ್​ಗೆ ಮೊರೆಹೋಗುತ್ತೇವೆ ಎಂದೂ ಹೇಳಿದ್ದರು.

Cauvery Water Dispute: ಕಾವೇರಿ ನೀರಿಗಾಗಿ ಮತ್ತೆ ಕ್ಯಾತೆ; ಸುಪ್ರೀಂ ಕೋರ್ಟ್ ಮೊರೆಹೋದ ತಮಿಳುನಾಡು
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on:Aug 14, 2023 | 8:34 PM

ನವದೆಹಲಿ, ಆಗಸ್ಟ್ 14: ಕಾವೇರಿ ನೀರಿಗಾಗಿ (Cauvery Water) ತಮಿಳುನಾಡು (Tamil Nadu) ಮತ್ತೆ ಕ್ಯಾತೆ ತೆಗೆದಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್(Supreme Court) ಮೆಟ್ಟಿಲೇರಿದೆ. ತಮ್ಮ ಪಾಲಿನ ನೀರು ಬಿಡುತ್ತಿಲ್ಲ ಎಂದು ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್​ಗೆ ಸೋಮವಾರ ಅರ್ಜಿ ಸಲ್ಲಿಸಿದೆ. ಕರ್ನಾಟಕ ನೀರು ಬಿಡದ ಕಾರಣ ರಾಜ್ಯದಕಲ್ಲಿ ಬೆಳೆ ಹಾನಿಯಾಗಿದೆ. ತಮಿಳುನಾಡಿನ ಕಾವೇರಿ ನದಿ ಪಾತ್ರದಲ್ಲಿ ಬೆಳೆಗಳು ಒಣಗುತ್ತಿವೆ. ತಮ್ಮ ಪಾಲಿನ ನೀರು ಬಿಡುಗಡೆಗೆ ಸೂಚಿಸುವಂತೆ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್​ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಮಿಳುನಾಡು ಸರ್ಕಾರ ಉಲ್ಲೇಖಿಸಿದೆ.

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿ ಕರ್ನಾಟಕವು ಕಾವೇರಿ ನೀರು ನಿಯಂತ್ರಣ ಸಮಿತಿಯ ಸೂಚನೆಯನ್ನು ಪಾಲಿಸುತ್ತಿಲ್ಲ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈಮುರುಗನ್ ಕಳೆದ ವಾರ ಆರೋಪಿಸಿದ್ದರು. ಅಲ್ಲದೆ, ಈ ವಿಚಾರವಾಗಿ ಸುಪ್ರೀಂ ಕೋರ್ಟ್​ಗೆ ಮೊರೆಹೋಗುತ್ತೇವೆ ಎಂದೂ ಹೇಳಿದ್ದರು. ಅದಕ್ಕೂ ಮುನ್ನ ನಡೆದಿದ್ದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ತಮಿಳುನಾಡಿನ ಅಧಿಕಾರಿಗಳು ಸಭೆಯಿಂದ ಹೊರನಡೆದ ಘಟನೆಯೂ ನಡೆದಿತ್ತು.

ಕಾವೇರಿ ನೀರು ಬಿಡುಗಡೆ; ಕರ್ನಾಟಕದ ವಾದವೇನು?

ಕರ್ನಾಟಕದಲ್ಲಿ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿಯೂ ಹೇಳಿಕೊಳ್ಳುವಂಥ ಮಳೆಯಾಗಿಲ್ಲ. ಹೀಗಾಗಿ ಹೆಚ್ಚು ನೀರು ಬಿಡುವುದು ಕಷ್ಟ ಎಂಬುದು ಕರ್ನಾಟಕದ ವಾದವಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿಯು 15 ದಿನಗಳ ಕಾಲ 15,000 ಕ್ಯೂಸೆಕ್ ಬಿಡುಗಡೆ ಮಾಡಲು ನಿರ್ಧರಿಸಿತ್ತು. ಇದಕ್ಕೆ ಕಳೆದ ಶುಕ್ರವಾರ ನಡೆದಿದ್ದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ರಾಜ್ಯದ ಅಧಿಕಾರಿಗಳು ಅಸಮ್ಮತಿ ಸೂಚಿಸಿದ್ದರು. ಆಗಸ್ಟ್ 22 ರವರೆಗೆ ತಮಿಳುನಾಡಿಗೆ ಕೇವಲ 8,000 ಕ್ಯೂಸೆಕ್‌ಗಳನ್ನು ಮಾತ್ರ ಬಿಡುಗಡೆ ಮಾಡಬಹುದಷ್ಟೇ ಎಂದು ಕರ್ನಾಟಕದ ಅಧಿಕಾರಿಗಳು ತಿಳಿಸಿದ್ದರು. ಇದಕ್ಕೆ ಸಂಬಂಧಿಸಿದ ಕಾರಣವನ್ನು ಮನವರಿಕೆ ಮಾಡಿಕೊಟ್ಟಿದ್ದರು. ಆದರೆ, ಇದು ತಮಿಳುನಾಡಿನ ಅಸಮಾಧಾನಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ತಮಿಳುನಾಡಿಗೆ ಹೆಚ್ಚು ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ; ಒಂದು ಹನಿಯೂ ಹೆಚ್ಚು ಬಿಡಲ್ಲವೆಂದ ಕರ್ನಾಟಕ

ಆದರೆ, ಈ ವಿಚಾರದಲ್ಲಿ ತಮಿಳುನಾಡಿನ ಅಧಿಕಾರಿಗಳು ಹೇಳುತ್ತಿರುವುದೇ ಬೇರೆ. ಕರ್ನಾಟಕದ ಜಲಾಶಯಗಳಲ್ಲಿ ಸಾಕಷ್ಟು ನೀರಿದೆ. ಆದರೆ ತಮಿಳುನಾಡಿಗೆ ಬಿಡುಗಡೆ ಮಾಡಲು ಅವರು ಮನಸು ಮಾಡುತ್ತಿಲ್ಲ ಎಂದು ತಮಿಳುನಾಡಿನ ಅಧಿಕಾರಿಗಳು ದೂರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:25 pm, Mon, 14 August 23

ತಾಜಾ ಸುದ್ದಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!