Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಪಿ ಕ್ಷೇತ್ರ ಮರುವಿಂಡಣೆ ವಿರುದ್ಧ ಬೆಂಬಲ ಕೋರಿ ಕರ್ನಾಟಕಕ್ಕೆ ತಮಿಳುನಾಡು ಸಿಎಂ ಪತ್ರ

ಲೋಕಸಭಾ ಕ್ಷೇತ್ರ ಮರುವಿಂಗಡಣೆಯನ್ನು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌ ಅವರು ತೀವ್ರವಾಗಿ ವಿರೋಧಿಸಿದ್ದಾರೆ. ಈ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಆಡಳಿತದಲ್ಲಿರುವ ಮಿತ್ರ ಪಕ್ಷಗಳ ಬೆಂಬಲ ಕೋರಿದ್ದಾರೆ. ಈ ಸಂಬಂಧ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ. ಹಾಗಾದ್ರೆ, ಪತ್ರದಲ್ಲೇನಿದೆ. ಈ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.

ಎಂಪಿ ಕ್ಷೇತ್ರ ಮರುವಿಂಡಣೆ ವಿರುದ್ಧ ಬೆಂಬಲ ಕೋರಿ ಕರ್ನಾಟಕಕ್ಕೆ ತಮಿಳುನಾಡು ಸಿಎಂ ಪತ್ರ
Stalin And Siddaramaiah
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Mar 12, 2025 | 2:49 PM

ಬೆಂಗಳೂರು/ಚೆನ್ನೈ, (ಮಾರ್ಚ್​ 12): ಲೋಕಸಭಾ ಕ್ಷೇತ್ರ ಮರುವಿಂಗಡಣೆಯನ್ನು ತೀವ್ರವಾಗಿ ವಿರೋಧಿಸುತ್ತಿರುವ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌, ಇದಕ್ಕೆ ಬೆಂಬಲಯಾಚಿಸುವ ಸಲುವಾಗಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಲೋಕಸಭಾ ಕ್ಷೇತ್ರ ಮರುವಿಂಗಡಣೆ ವಿರುದ್ಧವಾಗಿ ಮಾರ್ಚ್ 22ರಂದು ನಡೆಯುವ ಸಭೆಗೆ ಬರುವಂತೆ ಪತ್ರದ ಮೂಲಕ ಸಿದ್ದರಾಮಯ್ಯನವರಿಗೆ ಆಹ್ವಾನ ನೀಡಿದ್ದಾರೆ. ಎನ್‌ಡಿಎಯೇತರರ ಆಡಳಿತವಿರುವ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಸಭೆಗೆ ಆಹ್ವಾನಿಸಿದ್ದಾರೆ.

ಮಾರ್ಚ್ 22ರಂದು ತಮಿಳುನಾಡಿನಲ್ಲಿ ನಡೆಯಲಿರುವ ಸಭೆಗೆ ದಕ್ಷಿಣ ಭಾರತದ ಸುಮಾರು 7 ರಾಜ್ಯಗಳ ಸಿಎಂ ಸಭೆಯಲ್ಲಿ ಭಾಗಿಯಾಗಲಿದ್ದು, ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಹಿಂದಿ ಹೇರಿಕೆ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ಕುರಿತು ಸಭೆ ನಡೆಸಲು ನಿರ್ಧರಿಸಲಾಗಿದೆ. ಈಗಾಗಲೇ ಸಭೆಗೆ ಬರುವಂತೆ ಆಹ್ವಾನ ನೀಡಲು ಆಗಮಿಸಿದ್ದ ಸ್ಟಾಲಿನ್ ಅವರು ತಮ್ಮ ಸಚಿವರ ನಿಯೋಗವನ್ನು ಕರ್ನಾಟಕ ಸೇರಿ 7 ರಾಜ್ಯಗಳಿಗೆ ತಮ್ಮ ನಾಯಕರನ್ನು ಕಳುಹಿಸಿ ಆಹ್ವಾನ ಕೊಡಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಖುದ್ದು ತಾವು ಸಹ ಸಿಎಂಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಕ್ಷೇತ್ರ ಮರುವಿಂಗಡಣೆ ವಿಚಾರ: ಅಮಿತ್​ ಶಾ ಹೇಳಿಕೆ ನಂಬಿಕೆಗೆ ಅರ್ಹವಲ್ಲ ಎಂದ ಸಿಎಂ ಸಿದ್ದರಾಮಯ್ಯ

ತಮಿಳುನಾಡು, ಕೇರಳ, ಕರ್ನಾಟಕ, ಪುದುಚೆರಿ, ತೆಲಂಗಾಣ, ಆಂಧ್ರ ಪ್ರದೇಶ, ಪಂಜಾಬ್, ಪಶ್ಚಿಮ ಬಂಗಾಳ ರಾಜ್ಯದ ಪ್ರತಿನಿಧಿಗಳು ಈ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಇನ್ನು ಕರ್ನಾಟಕದ ಪರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಡಿಕೆ ಶಿವಕುಮಾರ್ ಹೇಳಿದ್ದಿಷ್ಟು

ಇನ್ನು ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ತಮಿಳುನಾಡು ಸಚಿವ ಪೊನ್ನ ಮುಡಿ ಮತ್ತು ಅಬ್ದುಲ್ಲಾ ಭೇಟಿಯಾಗಿದ್ದು, ಲೋಕಸಭಾ ಕ್ಷೇತ್ರಗಳ ಪುನರ್​ವಿಂಗಡಣೆ ಮೂಲಕ ಸೀಟು ಕಡಿಮೆ ಮಾಡುವ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಹೀಗಾಗಿ ಈ ಸಂಬಂಧ ಚರ್ಚಿಸಲು ಮಾರ್ಚ್​ 22ರಂದು ನಡೆಯುವ ಸಭೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಸಭೆಗೆ ಬರುವಂತೆ ನಮಗೂ, ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ್ದಾರೆ. ಪಕ್ಷದ ವರಿಷ್ಠರ ಜೊತೆ ಮಾತನಾಡಿ ಎಂದು ಹೇಳಿದ್ದೇನೆ. ನಾವು ಕೂಡ ಈ ವಿಚಾರವನ್ನು ಹೈಕಮಾಂಡ್​​​​ ಗಮನಕ್ಕೆ ತರುತ್ತೇವೆ ಎಂದು ಹೇಳಿದರು.

ಜನಸಂಖ್ಯೆ ಆಧಾರದಲ್ಲಿ ಕ್ಷೇತ್ರಗಳ ಮರುವಿಂಗಡಣೆಯಿಂದಾಗಿ ತಮಿಳುನಾಡು ಸೇರಿ, ಕುಟುಂಬ ಯೋಜನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದ ರಾಜ್ಯಗಳ ಲೋಕಸಭಾ ಸ್ಥಾನಗಳು ಕಡಿಮೆಯಾಗಿ ಅನ್ಯಾಯವಾಗುತ್ತದೆ ಎಂದು ಡಿಎಂಕೆ ಆರೋಪಿಸುತ್ತಿದೆ. ಇನ್ನು ಈ ಕ್ಷೇತ್ರಗಳ ಮರುವಿಂಗಡಣೆ ಬಗ್ಗೆಯೂ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಖಂಡಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ನೂತನ ಟ್ರಾವೆಲ್ ಜೆರ್ಸಿಯಲ್ಲಿ ಮಿರಮಿರ ಮಿಂಚಿದ ಆರ್​ಸಿಬಿ ಬಾಯ್ಸ್
ನೂತನ ಟ್ರಾವೆಲ್ ಜೆರ್ಸಿಯಲ್ಲಿ ಮಿರಮಿರ ಮಿಂಚಿದ ಆರ್​ಸಿಬಿ ಬಾಯ್ಸ್
ಸಚಿವ ಸತೀಶ್ ಜಾರಕಿಹೊಳಿ ಬಾಂಬ್​: ನಮ್ಮ ಮಂತ್ರಿ ಮೇಲೆ ಹನಿಟ್ರ್ಯಾಪ್ ಆಗಿದೆ​
ಸಚಿವ ಸತೀಶ್ ಜಾರಕಿಹೊಳಿ ಬಾಂಬ್​: ನಮ್ಮ ಮಂತ್ರಿ ಮೇಲೆ ಹನಿಟ್ರ್ಯಾಪ್ ಆಗಿದೆ​
ಸಾರ್ವಜನಿಕ ಹಣ ಪೋಲು ಮಾಡುವ ವಿಷಯದಲ್ಲಿ ಕಾಂಗ್ರೆಸ್ ವಿವಿ ಆರಂಭಿಸಿದೆ: ಅಶೋಕ
ಸಾರ್ವಜನಿಕ ಹಣ ಪೋಲು ಮಾಡುವ ವಿಷಯದಲ್ಲಿ ಕಾಂಗ್ರೆಸ್ ವಿವಿ ಆರಂಭಿಸಿದೆ: ಅಶೋಕ
ನಮ್ಮ ನಡತೆ ಸರಿಯಾಗಿದ್ದರೆ ಯಾರೂ ಟಾರ್ಗೆಟ್ ಮಾಡಲ್ಲ: ಬಾಲಕೃಷ್ಣ
ನಮ್ಮ ನಡತೆ ಸರಿಯಾಗಿದ್ದರೆ ಯಾರೂ ಟಾರ್ಗೆಟ್ ಮಾಡಲ್ಲ: ಬಾಲಕೃಷ್ಣ
ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ನಿರ್ಣಯ ಅಂಗೀಕಾರ, ಜೋಶಿ ಏನಂದ್ರು?
ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ನಿರ್ಣಯ ಅಂಗೀಕಾರ, ಜೋಶಿ ಏನಂದ್ರು?
ಕುಮಾರಸ್ವಾಮಿ ಹಾಸನ ಬಿಟ್ಟು ರಾಮನಗರ ಬಂದಿದ್ದು ಯಾಕೆ? ಶಿವಕುಮಾರ್
ಕುಮಾರಸ್ವಾಮಿ ಹಾಸನ ಬಿಟ್ಟು ರಾಮನಗರ ಬಂದಿದ್ದು ಯಾಕೆ? ಶಿವಕುಮಾರ್
ನೀರು ಉಳಿಸುವ ಅಭಿಯಾನಕ್ಕಾಗಿ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ; ಡಿಕೆಶಿ
ನೀರು ಉಳಿಸುವ ಅಭಿಯಾನಕ್ಕಾಗಿ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ; ಡಿಕೆಶಿ
ಫಲಾನುಭವಿಗಳು ಬಡವರಾದರೇನು, ಅವರಿಗೂ ಕಮಿಟ್ಮೆಂಟ್​ಗಳಿರುತ್ತವೆ: ಸರವಣ
ಫಲಾನುಭವಿಗಳು ಬಡವರಾದರೇನು, ಅವರಿಗೂ ಕಮಿಟ್ಮೆಂಟ್​ಗಳಿರುತ್ತವೆ: ಸರವಣ
ಕೈಗೆ ಗಂಭೀರ ಗಾಯದೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅತ್ತೆ
ಕೈಗೆ ಗಂಭೀರ ಗಾಯದೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅತ್ತೆ
ರವಿಚಂದ್ರನ್ ಲುಕ್​ನಲ್ಲಿ ಮಂಜು ಪಾವಗಡ; ನಾಗವಲ್ಲಿ ಆದ ಚೈತ್ರಾ ಕುಂದಾಪುರ
ರವಿಚಂದ್ರನ್ ಲುಕ್​ನಲ್ಲಿ ಮಂಜು ಪಾವಗಡ; ನಾಗವಲ್ಲಿ ಆದ ಚೈತ್ರಾ ಕುಂದಾಪುರ