ಈ ವರ್ಷ 3 ಲಕ್ಷ ಮನೆಗಳ ನಿರ್ಮಾಣದ ಗುರಿ: ಮುಕ್ತಾಯ ಹಂತದಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಸಿಎಂ ಸೂಚನೆ
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾಡಲಾಗಿದೆ. ಈ ವೇಳೆ ಮಾತನಾಡಿದ ಅವರು, ವಿವಿಧ ವಸತಿ ಯೋಜನೆಗಳಡಿ ಈ ವರ್ಷ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಮುಕ್ತಾಯದ ಹಂತದಲ್ಲಿರುವ 1.6 ಲಕ್ಷ ಮನೆಗಳನ್ನು ಮಾರ್ಚ್ ಒಳಗೆ ಪೂರ್ಣಗೊಳಿಸಲು ಸೂಚನೆ ನೀಡಿದ್ದಾರೆ.
ಬೆಂಗಳೂರು, ಡಿಸೆಂಬರ್ 29: ವಿವಿಧ ವಸತಿ ಯೋಜನೆಗಳಡಿ ಈ ವರ್ಷ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ರಾಜ್ಯದಲ್ಲಿ ಈವರೆಗೆ 1.31 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಮುಕ್ತಾಯದ ಹಂತದಲ್ಲಿರುವ 1.6 ಲಕ್ಷ ಮನೆಗಳನ್ನು ಮಾರ್ಚ್ ಒಳಗೆ ಪೂರ್ಣಗೊಳಿಸಲು ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆ ನೀಡಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿ, ಈ ಬಗ್ಗೆ ಜಿಲ್ಲಾ ಪಂಚಾಯಿತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಸಂಬಂಧಿಸಿದ ಇಂಜಿನಿಯರುಗಳಿಗೆ ಸಭೆ ನಡೆಸುವಂತೆ ತಿಳಿಸಿದ್ದಾರೆ.
ಲಿಂಟೆಲ್ & ಛಾವಣಿ ಹಂತದಲ್ಲಿರುವ 1.5 ಲಕ್ಷಕ್ಕೂ ಹೆಚ್ಚು ಮನೆಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ತಿಳಿಸಲು ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಲು ಸಿಎಂ ಸೂಚನೆ
ಕೊಳೆಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಡಿ ಸುಮಾರು 1.8 ಲಕ್ಷ ಮನೆಗಳು ಪ್ರಗತಿಯಲ್ಲಿದೆ. ಫಲಾನುಭವಿಗಳ ವಂತಿಗೆ ಸೇರಿದಂತೆ 5 ಲಕ್ಷ ರೂ.ಗಳನ್ನು ಭರಿಸಲು ಹಾಗೂ ಇದಕ್ಕಾಗಿ ಮತ್ತು ಬಡಾವಣೆಗಳ ಮೂಲಸೌಕರ್ಯ ಅಭಿವೃದ್ಧಿಗಾಗಿ 500 ಕೋಟಿ ರೂ. ಬಿಡುಗಡೆಗೆ ಸಚಿವ ಸಂಪುಟ ತೀರ್ಮಾನಿಸಿದೆ. ಹೀಗಾಗಿ 25,000 ಮನೆಗಳನ್ನು ಫೆಬ್ರುವರಿ ಅಂತ್ಯದ ವೇಳೆ ಪೂರ್ಣಗೊಳಿಸಲು ಸೂಚಿಸಲಾಗಿದೆ.
ಇದನ್ನೂ ಓದಿ: ರೈತರ ಬಗ್ಗೆ ಗೌರವದಿಂದ ಮಾತನಾಡಬೇಕು: ಎಲ್ಲ ನಾಯಕರಿಗೆ ಸಿದ್ದರಾಮಯ್ಯ ಖಡಕ್ ವಾರ್ನಿಂಗ್
ರಾಜೀವ್ ಗಾಂಧಿ ವಸತಿ ನಿಗಮದ ಮುಕ್ತಾಯ ಹಂತದಲ್ಲಿರುವ ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಅಗತ್ಯವಿರುವ ಅನುದಾನಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟದ ಮುಂದೆ ಪ್ರಸ್ತಾವನೆಯನ್ನು ಮಂಡಿಸುವಂತೆ ಸೂಚನೆ ನೀಡಲಾಗಿದೆ.
ರಾಜೀವ್ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ 2133 ಕೋಟಿ ರೂ. ಲಭ್ಯವಿದ್ದು, ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಆದೇಶಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.