Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಸಂಕಷ್ಟದಲ್ಲೂ ರಾಜ್ಯದಲ್ಲಿ ತೆರಿಗೆ ಸಂಗ್ರಹ ತೃಪ್ತಿಕರ: ವಾರ್ಷಿಕ ಗುರಿಯ ಶೇ 14ರಷ್ಟು ಸಾಧನೆ

ವಾರ್ಷಿಕ ತೆರಿಗೆ ಸಂಗ್ರಹ ಗುರಿಯ ಶೇ 14.92ರಷ್ಟು ಸಾಧನೆಯಾಗಿದೆ. ಅಬಕಾರಿ ಇಲಾಖೆಯಲ್ಲಿ 2021-22ನೇ ಸಾಲಿಗೆ ₹ 24,580 ಕೋಟಿ ತೆರಿಗೆ ಗುರಿ ನಿಗದಿಪಡಿಸಲಾಗಿತ್ತು. ಏಪ್ರಿಲ್, ಮೇ ತಿಂಗಳಲ್ಲಿ ₹4284.05 ಕೋಟಿ ತೆರಿಗೆ ಸಂಗ್ರಹವಾಗಿದೆ.

ಕೊವಿಡ್ ಸಂಕಷ್ಟದಲ್ಲೂ ರಾಜ್ಯದಲ್ಲಿ ತೆರಿಗೆ ಸಂಗ್ರಹ ತೃಪ್ತಿಕರ: ವಾರ್ಷಿಕ ಗುರಿಯ ಶೇ 14ರಷ್ಟು ಸಾಧನೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 14, 2021 | 9:03 PM

ಬೆಂಗಳೂರು: ಕರ್ನಾಟಕದಲ್ಲಿ ಕೊವಿಡ್ ಸಂಕಷ್ಟದ ನಡುವೆಯೂ ತೆರಿಗೆ ಸಂಗ್ರಹ ತೃಪ್ತಿಕರವಾಗಿದೆ. ₹82,443 ಕೋಟಿ ವಾಣಿಜ್ಯ ತೆರಿಗೆ ಸಂಗ್ರಹದ ಗುರಿ ಇರಿಸಿಕೊಳ್ಳಲಾಗಿತ್ತು. ಈವರೆಗೆ ಒಟ್ಟು ₹82,462 ಕೋಟಿ ವಾಣಿಜ್ಯ ತೆರಿಗೆ ಸಂಗ್ರಹವಾಗಿದೆ. ಇದರಲ್ಲಿ ₹65,659 ಕೋಟಿ ಜಿಎಸ್​ಟಿ, ಪೆಟ್ರೋಲ್, ಡೀಸೆಲ್ ಮೂಲಕ ₹15,861 ಕೋಟಿ, ವೃತ್ತಿ ತೆರಿಗೆ ಮೂಲಕ ₹942 ಕೋಟಿ ತೆರಿಗೆ ಸಂಗ್ರಹಿಸಲಾಗಿದೆ. ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ₹ 11,409 ಕೋಟಿ ತೆರಿಗೆ ಸಂಗ್ರಹಿಸಲಾಗಿದೆ.

ವಾರ್ಷಿಕ ತೆರಿಗೆ ಸಂಗ್ರಹ ಗುರಿಯ ಶೇ 14.92ರಷ್ಟು ಸಾಧನೆಯಾಗಿದೆ. ಅಬಕಾರಿ ಇಲಾಖೆಯಲ್ಲಿ 2021-22ನೇ ಸಾಲಿಗೆ ₹ 24,580 ಕೋಟಿ ತೆರಿಗೆ ಗುರಿ ನಿಗದಿಪಡಿಸಲಾಗಿತ್ತು. ಏಪ್ರಿಲ್, ಮೇ ತಿಂಗಳಲ್ಲಿ ₹4284.05 ಕೋಟಿ ತೆರಿಗೆ ಸಂಗ್ರಹವಾಗಿದೆ. ಕಳೆದ ವರ್ಷದ ಏಪ್ರಿಲ್, ಮೇ ತಿಂಗಳಿಗೆ ಹೋಲಿಸಿದರೆ ತೆರಿಗೆ ಸಂಗ್ರಹ ಪ್ರಮಾಣ ಹೆಚ್ಚಾಗಿದೆ. ಈ ವರ್ಷದ ಅಬಕಾರಿ ತೆರಿಗೆ ಸಂಗ್ರಹದಲ್ಲಿಯೂ ಹೆಚ್ಚಳ ಕಂಡುಬಂದಿದೆ.

2020-21ರಲ್ಲಿ ₹ 23,332.10 ಕೋಟಿ ತೆರಿಗೆ ಸಂಗ್ರಹವಾಗಿದೆ. ಶೇ 8.10ರಷ್ಟು ಬೆಳವಣಿಗೆ ದರವಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ವಾಣಿಜ್ಯ ತೆರಿಗೆ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಧಾನಿಗೆ ಸಿಎಂ ಪತ್ರ ಈ ನಡುವೆ ಜಿಎಸ್​ಟಿ ಪರಿಹಾರ ವ್ಯವಸ್ಥೆಯನ್ನು ಇನ್ನಷ್ಟು ಕಾಲ ವಿಸ್ತರಿಸಬೇಕು ಎಂದು ವಿನಂತಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಜಿಎಸ್​ಟಿ ಪರಿಹಾರ ವ್ಯವಸ್ಥೆಯು 2022ಕ್ಕೆ ಅಂತ್ಯವಾಗಲಿದೆ ಎಂದು ಕೇಂದ್ರ ಸರ್ಕಾರ ಈ ಹಿಂದೆ ಘೋಷಿಸಿತ್ತು.

ದೇಶದಲ್ಲಿ ಚಿಲ್ಲರೆ ಹಣದುಬ್ಬರ ಹೆಚ್ಚಳ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಾಕಿಕೊಂಡಿದ್ದ ಗುರಿಯ ಮಿತಿಯನ್ನೂ ಮೀರಿ ಚಿಲ್ಲರೆ ಹಣದುಬ್ಬರ ದರವು (Retail Price Index) 2021ರ ಮೇ ತಿಂಗಳಲ್ಲಿ ಶೇ 6.3ಕ್ಕೆ ಏರಿಕೆ ಆಗಿದೆ. ಏಪ್ರಿಲ್​ನಲ್ಲಿ ಈ ಪ್ರಮಾಣ ಶೇ 4.23 ಇತ್ತು. ಈ ಬಗ್ಗೆ ಸೋಮವಾರದಂದು ಸರ್ಕಾರ ದತ್ತಾಂಶ ಬಿಡುಗಡೆ ಮಾಡಿದೆ. ಕಳೆದ ಆರು ತಿಂಗಳಲ್ಲಿ ಇದೇ ಮೊದಲ ಬಾರಿಗೆ, ಆರ್​ಬಿಐ ಹಾಕಿಕೊಂಡಿದ್ದ ಗುರಿಯ ಮಿತಿಯನ್ನು ಮೀರಿದೆ. ಇನ್ನು ಸಗಟು ದರ ಸೂಚ್ಯಂಕ ಆಧಾರಿತ ಹಣದುಬ್ಬರ ದರವು (WPI) ಮೇ ತಿಂಗಳಲ್ಲಿ ಶೇ 12.94 ತಲುಪಿದೆ. ಹೆಚ್ಚುತ್ತಿರುವ ಕಚ್ಚಾ ತೈಲ ದರ, ಉತ್ಪಾದನಾ ವಸ್ತುಗಳು ಮತ್ತು ಕಳೆದ ವರ್ಷದ ಕಡಿಮೆ ಬೇಸ್ ಈ ಎಲ್ಲ ಅಂಶಗಳು ಸೇರಿಕೊಂಡು ಇಂಥ ಬೆಳವಣಿಗೆ ಆಗಿದೆ. ಸತತವಾಗಿ ಐದನೇ ತಿಂಗಳು WPI ಆಧಾರಿತ ಹಣದುಬ್ಬರ ದರವು ಏರಿಕೆ ದಾಖಲಿಸಿದೆ. ಹಣದುಬ್ಬರ ದರವು ಏರಿಕೆ ಆಗುತ್ತಿದ್ದಂತೆ ರಿಸರ್ವ್ ಬ್ಯಾಂಕ್​ ಮೇಲೆ ಒತ್ತಡ ಹೆಚ್ಚಾಗುವಂತೆ ಮಾಡಿದೆ. ಆರ್ಥಿಕ ಚೇತರಿಕೆಗೆ ದರವನ್ನು ನಿಯಂತ್ರಿಸುವುದು ಬಹಳ ಅಗತ್ಯವಾಗಿದೆ.

(Tax Collection of Govt Karnataka in par with Goals Despite Covid pandemic)

ಇದನ್ನೂ ಓದಿ: GST Council: ಬ್ಲ್ಯಾಕ್ ಫಂಗಸ್ ಔಷಧಗಳಿಗೆ ತೆರಿಗೆ ವಿನಾಯಿತಿ; ಕೊರೊನಾ ಲಸಿಕೆಯ ಮೇಲೆ ಶೇ 5 ಜಿಎಸ್​ಟಿ ಮುಂದುವರಿಕೆ

ಇದನ್ನೂ ಓದಿ: ಜೂನ್ 30ರವರೆಗೆ ವಾಹನ ತೆರಿಗೆ ಪಾವತಿಸುವ ಅವಧಿ ವಿಸ್ತರಣೆ

Published On - 9:02 pm, Mon, 14 June 21

ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ