ತೆರಿಗೆ ತಾರತಮ್ಯ: ಕೇಂದ್ರದ ನಡೆ ಖಂಡಿಸಿ 8 ರಾಜ್ಯಗಳ ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ

ಕೇಂದ್ರದ ತೆರಿಗೆ ತಾರತಮ್ಯ ಖಂಡಿಸಿ 8 ರಾಜ್ಯಗಳ ಸಿಎಂಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಟ್ವೀಟ್​ ಮಾಡಿರುವ ಅವರು, ಕರ್ನಾಟಕದಂತಹ ರಾಜ್ಯಗಳಿಗೆ ಕಡಿಮೆ ತೆರಿಗೆ ಹಂಚಿಕೆ ಈ ಅನ್ಯಾಯದ ನಡೆ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತರುತ್ತೆ ಎಂದು ಹೇಳಿದ್ದಾರೆ.

ತೆರಿಗೆ ತಾರತಮ್ಯ: ಕೇಂದ್ರದ ನಡೆ ಖಂಡಿಸಿ 8 ರಾಜ್ಯಗಳ ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ
ತೆರಿಗೆ ತಾರತಮ್ಯ: ಕೇಂದ್ರದ ನಡೆ ಖಂಡಿಸಿ 8 ರಾಜ್ಯಗಳ ಸಿಎಂಗೆ ಪತ್ರಬರೆದ ಸಿದ್ದರಾಮಯ್ಯ
Follow us
ಗಂಗಾಧರ​ ಬ. ಸಾಬೋಜಿ
|

Updated on:Sep 11, 2024 | 10:36 PM

ಬೆಂಗಳೂರು, ಸೆಪ್ಟೆಂಬರ್​ 11: ಕೇಂದ್ರ ಸರ್ಕಾರದ ತೆರಿಗೆ ತಾರತಮ್ಯ ಖಂಡಿಸಿ ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ (Siddaramaiah) ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರದ ಅನ್ಯಾಯದ ತೆರಿಗೆ ಹಂಚಿಕೆ ಕುರಿತು ನಮ್ಮ ತೆರಿಗೆ ನಮ್ಮ ಹಕ್ಕು ಅಭಿಯಾನದಡಿ ಪತ್ರ ಬರೆದಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಅನ್ಯಾಯದ ತೆರಿಗೆ ಹಂಚಿಕೆ ಕುರಿತು ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​ 

ಕರ್ನಾಟಕ ಮತ್ತು ಇತರೆ ತಲಾವಾರು ಜಿಎಸ್​​ಡಿಪಿ ಹೆಚ್ಚಿರುವ ರಾಜ್ಯಗಳು ತಮ್ಮ ಆರ್ಥಿಕ ಕಾರ್ಯಕ್ಷಮತೆಗಾಗಿ ದಂಡವನ್ನು ಅನುಭವಿಸುತ್ತಿವೆ, ಅಸಮಾನವಾಗಿ ಕಡಿಮೆ ತೆರಿಗೆ ಹಂಚಿಕೆಗಳನ್ನು ಪಡೆಯುತ್ತಿವೆ. ಈ ಅನ್ಯಾಯದ ನಡೆ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತರುತ್ತೆ. ಪ್ರಗತಿಪರ ರಾಜ್ಯಗಳಿಗೆ ಆರ್ಥಿಕ ಸ್ವಾಯತ್ತತೆಗೆ ಧಕ್ಕೆ ತರುತ್ತೆ ಎಂದಿದ್ದಾರೆ.

ಇದನ್ನೂ ಓದಿ: ಸಿಎಂ ಆಗುವ ಉದ್ದೇಶದಿಂದಲೇ ರಾಹುಲ್ ಗಾಂಧಿಯನ್ನು ಡಿಕೆ ಶಿವಕುಮಾರ್ ಭೇಟಿಯಾಗಿದ್ದಾರೆ: ಪ್ರಲ್ಹಾದ್​ ಜೋಶಿ

ಹಣಕಾಸು ಆಯೋಗವು ಬದಲಾವಣೆಯನ್ನು ಮಾಡುವ ಹಾಗೂ ಬೆಳವಣಿಗೆ ಮತ್ತು ಉತ್ತಮ ತೆರಿಗೆ ಕ್ರೋಢೀಕರಣಕ್ಕಾಗಿ ಉತ್ತೇಜಕಗಳನ್ನು ರಚಿಸುವ ಅಗತ್ಯವಿರುವಾಗ ಹಣಕಾಸಿನ ಒಕ್ಕೂಟದ ಸಮಸ್ಯೆಗಳ ಕುರಿತು ಒಟ್ಟಾಗಿ ಚರ್ಚಿಸಲು ಬೆಂಗಳೂರಿನಲ್ಲಿ ನಡೆಯುವ ಸಮಾವೇಶಕ್ಕೆ ನಾನು ಅವರನ್ನು ಆಹ್ವಾನಿಸಿದ್ದೇನೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:35 pm, Wed, 11 September 24