ಕೇಂದ್ರ ಶಿಕ್ಷಣ ಸಚಿವಾಲಯ ಕೊಡಮಾಡುವ ರಾಷ್ಟ್ರೀಯ ಪುರಸ್ಕಾರಕ್ಕೆ ಕರ್ನಾಟಕದ ಸಿಎನ್​ ನಾಗರಾಜ್ ಆಯ್ಕೆ

| Updated By: ganapathi bhat

Updated on: Aug 18, 2021 | 7:37 PM

ರಾಷ್ಟ್ರಪ್ರಶಸ್ತಿ ಸಿಕ್ಕಿರುವುದು ನನಗೆ ತುಂಬಾ ಖುಷಿ ಆಗಿದೆ. ಇಲಾಖೆ ಅಧಿಕಾರಿಗಳು ಹಾಗೂ ಮನೆಯವರಿಗೆ ಸಂತಸ ಆಗಿದೆ. ಶಿಕ್ಷಣ ಇಲಾಖೆ ನೀಡಿದ್ದ ತರಬೇತಿ ಅನುಷ್ಠಾನಗೊಳಿಸಿದ್ದೆ. ಅದರ ಫಲವಾಗಿ ಈ ಪ್ರಶಸ್ತಿ ಸಿಕ್ಕಿದೆ ಎಂದು ಭಾವಿಸಿದ್ದೇನೆ ಎಂದು ಶಿಕ್ಷಕ ನಾಗರಾಜ್ ಹೇಳಿಕೆ ನೀಡಿದ್ದಾರೆ.

ಕೇಂದ್ರ ಶಿಕ್ಷಣ ಸಚಿವಾಲಯ ಕೊಡಮಾಡುವ ರಾಷ್ಟ್ರೀಯ ಪುರಸ್ಕಾರಕ್ಕೆ ಕರ್ನಾಟಕದ ಸಿಎನ್​ ನಾಗರಾಜ್ ಆಯ್ಕೆ
ಸಿಎನ್​ ನಾಗರಾಜ್
Follow us on

ಬೆಂಗಳೂರು: ಕೇಂದ್ರ ಶಿಕ್ಷಣ ಸಚಿವಾಲಯ ದೇಶದ ಶಿಕ್ಷಕರಿಗೆ ಕೊಡಮಾಡುವ ರಾಷ್ಟ್ರೀಯ ಪುರಸ್ಕಾರ 44 ಶಿಕ್ಷಕರಿಗೆ ಘೋಷಣೆಯಾಗಿದೆ. ಕರ್ನಾಟಕ ರಾಜ್ಯದ ಓರ್ವ ಶಿಕ್ಷಕರು ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ ಆಗಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡಬಾನಹಳ್ಳಿ ಗ್ರಾಮದ ದೊಡ್ಡಬಾನಹಳ್ಳಿ ಪ್ರೌಢ ಶಾಲೆ ಶಿಕ್ಷಕ ಸಿ.ಎನ್ ನಾಗರಾಜ್ ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ ಆಗಿದ್ದಾರೆ.

ಈ ಬಗ್ಗೆ ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ ಸಿ.ಎನ್. ನಾಗರಾಜ್ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಂಭ್ರಮ ಹಂಚಿಕೊಂಡಿದ್ದಾರೆ. ರಾಷ್ಟ್ರಪ್ರಶಸ್ತಿ ಸಿಕ್ಕಿರುವುದು ನನಗೆ ತುಂಬಾ ಖುಷಿ ಆಗಿದೆ. ಇಲಾಖೆ ಅಧಿಕಾರಿಗಳು ಹಾಗೂ ಮನೆಯವರಿಗೆ ಸಂತಸ ಆಗಿದೆ. ಶಿಕ್ಷಣ ಇಲಾಖೆ ನೀಡಿದ್ದ ತರಬೇತಿ ಅನುಷ್ಠಾನಗೊಳಿಸಿದ್ದೆ. ಅದರ ಫಲವಾಗಿ ಈ ಪ್ರಶಸ್ತಿ ಸಿಕ್ಕಿದೆ ಎಂದು ಭಾವಿಸಿದ್ದೇನೆ ಎಂದು ದೊಡ್ಡಬಾನಹಳ್ಳಿ ಪ್ರೌಢಶಾಲೆ ಶಿಕ್ಷಕ ನಾಗರಾಜ್ ಹೇಳಿಕೆ ನೀಡಿದ್ದಾರೆ. ಕೇವಲ ನನ್ನ ಟೀಚಿಂಗ್ ಮಾತ್ರ ಅಲ್ಲ ನನ್ನ ಸಂಪೂರ್ಣ ಕೆಲಸಗಳನ್ನು ನೋಡಿ ಈ ಪ್ರಶಸ್ತಿಗೆ ನನ್ನನ್ನು ಆಯ್ಕೆ ಮಾಡಿದ್ದಾರೆ ಎಂದು ನಾಗರಾಜ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ
ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ. ಸೆಪ್ಟೆಂಬರ್ 27 ಹಾಗೂ 29 ರಂದು ಎರಡು ದಿನ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ನಡೆಯಲಿದೆ. ಎಸ್ಎಸ್ಎಲ್​ಸಿ ಬೋರ್ಡ್​ನಿಂದ ಪರೀಕ್ಷಾ ವೇಳಾಪಟ್ಟಿ ಪ್ರಕಟ ಆಗಿದೆ. ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಯ ದಿನಾಂಕ ಇನ್ನಷ್ಟೇ ತಿಳಿದು ಬರಬೇಕಿದೆ. ಏಪ್ರಿಲ್ 2019 ರಲ್ಲಿ ಪರೀಕ್ಷೆಗೆ ಪ್ರಥಮ ಬಾರಿಗೆ ನೋಂದಾಯಿಸಿ, ಕೊವಿಡ್ ಸೋಂಕು ಕಾರಣದಿಂದ ಗೈರಾದ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಬಹುದು ಎಂದು ತಿಳಿಸಲಾಗಿದೆ. ಜುಲೈ ತಿಂಗಳಲ್ಲಿ ನಡೆದ ಮಾದರಿಯಲ್ಲಿಯೇ ಪೂರಕ ಪರೀಕ್ಷೆ ಕೂಡ ನಡೆಯಲ್ಲಿದೆ.

ಸಪ್ಟೆಂಬರ್​ ತಿಂಗಳಲ್ಲಿ ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆ ನಡೆಯಲಿದೆ. ಎರಡು ದಿನಗಳ ಕಾಲ ನಡೆಯಲಿರುವ ಪೂರಕ ಪರೀಕ್ಷೆ ನಡೆಯಲಿದೆ. ಸರಳೀಕೃತ ಮಾದರಿಯಲ್ಲಿ ಪೂರಕ ಪರೀಕ್ಷೆ ಇರಲಿದ್ದು, ಒಂದು ದಿನ ಕೋರ್ ವಿಷಯಗಳಿಗೆ ಹಾಗೂ ಮತ್ತೊಂದು ದಿನ ಭಾಷಾ ವಿಷಯಕ್ಕೆ ಪರೀಕ್ಷೆ ನಡೆಯಲಿದೆ. 2020-21ನೇ ಸಾಲಿನಲ್ಲಿ ಮುಖ್ಯ ಪರೀಕ್ಷೆಗೆ ನೋಂದಣಿ ಮಾಡಿಕೊಂಡ ಹಾಗೂ ಕೊವಿಡ್ ಕಾರಣಕ್ಕೆ ಗೈರಾದ ವಿದ್ಯಾರ್ಥಿಗಳಿಗೆ ನಡೆಯುವ ಪೂರಕ ಪರೀಕ್ಷೆ ಇದಾಗಿದೆ. ಪರೀಕ್ಷೆ ಸಪ್ಟೆಂಬರ್ ತಿಂಗಳಲ್ಲೇ ಇರಲಿದೆ ಎಂದು ತಿಳಿಸಲಾಗಿತ್ತು.

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ, ರಸ್ತೆ ದುರಸ್ತಿಗೆ ಆದ್ಯತೆ ನೀಡಲು ಬಸವರಾಜ ಬೊಮ್ಮಾಯಿ ಸೂಚನೆ

SSLC Exams: ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ; ವಿವರ ಇಲ್ಲಿದೆ

Published On - 7:32 pm, Wed, 18 August 21