ವರ್ಗಾವಣೆಗೆ ಹೆದರಿ ಕೋಮಾಗೆ ಜಾರಿದ ಮುಖ್ಯ ಶಿಕ್ಷಕ!

|

Updated on: Sep 22, 2019 | 7:29 PM

ಹುಬ್ಬಳ್ಳಿ: ರಾಜ್ಯ ಸರ್ಕಾರದ ಕಡ್ಡಾಯ ವರ್ಗಾವಣೆಗೆ ಹೆದರಿ ಕೋಮಾಗೆ ಮುಖ್ಯ ಶಿಕ್ಷಕರೊಬ್ಬರು ಜಾರಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಆನಂದ ನಗರದ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕ ಸುಭಾಷ್ ತರಲಘಟ್ಟ ಎಂಬುವರನ್ನು, ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ರಾಮಗೇರಿಗೆ ವರ್ಗಾವಣೆ ಮಾಡಲಾಗಿತ್ತು. ಇದರಿಂದ ಮನನೊಂದಿದ್ದ ಸುಭಾಷ್ ತರಲಘಟ್ಟ ಹೆದರಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾರೆ. ಇನ್ನು ಶಿಕ್ಷಕ ಸುಭಾಷ್​ಗೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆ ಬಳಿ ಜಮಾಯಿಸಿರುವ ಸಂಬಂಧಿಕರು, ಸರ್ಕಾರದ ಕಡ್ಡಾಯ ವರ್ಗಾವಣೆ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. […]

ವರ್ಗಾವಣೆಗೆ ಹೆದರಿ ಕೋಮಾಗೆ ಜಾರಿದ ಮುಖ್ಯ ಶಿಕ್ಷಕ!
Follow us on

ಹುಬ್ಬಳ್ಳಿ: ರಾಜ್ಯ ಸರ್ಕಾರದ ಕಡ್ಡಾಯ ವರ್ಗಾವಣೆಗೆ ಹೆದರಿ ಕೋಮಾಗೆ ಮುಖ್ಯ ಶಿಕ್ಷಕರೊಬ್ಬರು ಜಾರಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಆನಂದ ನಗರದ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕ ಸುಭಾಷ್ ತರಲಘಟ್ಟ ಎಂಬುವರನ್ನು, ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ರಾಮಗೇರಿಗೆ ವರ್ಗಾವಣೆ ಮಾಡಲಾಗಿತ್ತು. ಇದರಿಂದ ಮನನೊಂದಿದ್ದ ಸುಭಾಷ್ ತರಲಘಟ್ಟ ಹೆದರಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾರೆ. ಇನ್ನು ಶಿಕ್ಷಕ ಸುಭಾಷ್​ಗೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆ ಬಳಿ ಜಮಾಯಿಸಿರುವ ಸಂಬಂಧಿಕರು, ಸರ್ಕಾರದ ಕಡ್ಡಾಯ ವರ್ಗಾವಣೆ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.