ಕೊರೊನಾಗೆ ಬಲಿಯಾದ ಶಿಕ್ಷಕರ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡಿ -ಶಿಕ್ಷಕರ ಸಂಘದ ಕಾರ್ಯದರ್ಶಿ ಚಂದ್ರಶೇಖರ್ ಒತ್ತಾಯ

|

Updated on: May 16, 2021 | 12:41 PM

ಬಸವಕಲ್ಯಾಣ, ಮಸ್ಕಿ, ಬೀದರ್ ವಿಧಾನಸಭಾ ಉಪ ಚುನಾವಣೆಯಲ್ಲಿ ಕೆಲಸ‌ ಮಾಡಿದ 35 ಶಿಕ್ಷಕರು ಬಲಿಯಾಗಿದ್ದಾರೆ. ರಾಜ್ಯದಲ್ಲಿ 1.70 ಲಕ್ಷ ಪ್ರಾಥಮಿಕ ಸರ್ಕಾರಿ ಶಿಕ್ಷಕರಿದ್ದಾರೆ. ಈ ಪೈಕಿ ರಾಜ್ಯದಲ್ಲಿ ಒಟ್ಟು 262 ಸರ್ಕಾರಿ ಶಾಲಾ ಶಿಕ್ಷಕರು ಕೊರೊನಾದಿಂದ ಮೃತಪಟ್ಟಿದ್ದಾರೆ.

ಕೊರೊನಾಗೆ ಬಲಿಯಾದ ಶಿಕ್ಷಕರ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡಿ -ಶಿಕ್ಷಕರ ಸಂಘದ ಕಾರ್ಯದರ್ಶಿ ಚಂದ್ರಶೇಖರ್ ಒತ್ತಾಯ
ಸಾಂಕೇತಿಕ ಚಿತ್ರ
Follow us on

ಬೆಂಗಳೂರು: ಮಹಾಮಾರಿ ಕೊರೊನಾ ತೀವ್ರತೆಗೆ ರಾಜ್ಯದಲ್ಲಿ 600ಕ್ಕೂ ಹೆಚ್ಚು ಶಿಕ್ಷಕರು ಬಲಿಯಾಗಿದ್ದಾರೆ. ಹೀಗಾಗಿ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಸರ್ಕಾರಿ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಚಂದ್ರಶೇಖರ್ ನುಗ್ಲಿ ಒತ್ತಾಯಿಸಿದ್ದಾರೆ.

ಬಸವಕಲ್ಯಾಣ, ಮಸ್ಕಿ, ಬೀದರ್ ವಿಧಾನಸಭಾ ಉಪ ಚುನಾವಣೆಯಲ್ಲಿ ಕೆಲಸ‌ ಮಾಡಿದ 35 ಶಿಕ್ಷಕರು ಬಲಿಯಾಗಿದ್ದಾರೆ. ರಾಜ್ಯದಲ್ಲಿ 1.70 ಲಕ್ಷ ಪ್ರಾಥಮಿಕ ಸರ್ಕಾರಿ ಶಿಕ್ಷಕರಿದ್ದಾರೆ. ಈ ಪೈಕಿ ರಾಜ್ಯದಲ್ಲಿ ಒಟ್ಟು 262 ಸರ್ಕಾರಿ ಶಾಲಾ ಶಿಕ್ಷಕರು ಕೊರೊನಾದಿಂದ ಮೃತಪಟ್ಟಿದ್ದಾರೆ. ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಜಾಪುರ ಜಿಲ್ಲೆ ಒಂದರಲ್ಲಿಯೇ 56 ಶಿಕ್ಷಕರು ಕೊರೊನಾಗೆ ಬಲಿಯಾಗಿದ್ದಾರೆ. ಮೃತರೆಲ್ಲರಿಗೂ ಒಂದು ಕೋಟಿ ಪರಿಹಾರ ನೀಡಿ ಎಂದು ಚಂದ್ರಶೇಖರ್ ನುಗ್ಲಿ ಒತ್ತಾಯಿಸಿದ್ದಾರೆ.

ಇನ್ನು ಮೂರು ಲಕ್ಷ ಶಿಕ್ಷಕರು ಖಾಸಗಿ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಖಾಸಗಿ ಶಾಲೆಯ 422 ಶಿಕ್ಷಕರು ಕೊರೊನಾಗೆ ಮೃತಪಟ್ಟಿದ್ದಾರೆ. ಪಾಠ ಮಾಡುವ ಶಿಕ್ಷಕರನ್ನು ಕೊರೊನಾ ಬಿಡುತ್ತಿಲ್ಲ. ಕಳೆದೊಂದು ತಿಂಗಳಿನಲ್ಲಿ‌ ಕರ್ತವ್ಯ ನಿರ್ವಹಿಸಿದ ಶಿಕ್ಷಕರು ಕೊರೊನಾಗೆ ಬಲಿಯಾಗಿದ್ದಾರೆ. ಹೀಗಾಗಿ ಮೃತ ಶಿಕ್ಷಕರ ಕುಟುಂಬಕ್ಕೆ ಪರಿಹಾರ ನೀಡಿ ಎಂದು ಖಾಸಗಿ ಶಾಲಾ ಒಕ್ಕೂಟ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಕೂಡ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಚುನಾವಣಾ ಕೆಲಸಕ್ಕೆ ಹಾಜರಾಗಿದ್ದ ನೂರಾರು ಶಿಕ್ಷಕರ ಸಾವು, ಚುನಾವಣಾ ಆಯೋಗಕ್ಕೆ ಅಲಹಾಬಾದ್ ಹೈಕೋರ್ಟ್ ನೋಟಿಸ್