ಕರ್ನಾಟಕದಲ್ಲಿ ಟೀನೇಜ್ ಪ್ರೆಗ್ನೆನ್ಸಿ ಭಾರೀ ಹೆಚ್ಚಳ: ಬೆಚ್ಚಿಬೀಳಿಸುವಂತಿದೆ ಆರೋಗ್ಯ ಇಲಾಖೆ ಅಂಕಿಅಂಶ

ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ತಾಯ್ತನದ ವಯಸ್ಸಿಗೂ ಮೊದಲೇ ರಾಜ್ಯದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಏರಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಇದೀಗ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆಗಳಿಗೆ ಖುದ್ದು ಮುಖ್ಯಮಂತ್ರಿಗಳೇ ಸೂಚನೆ ನೀಡಿದ್ದಾರೆ.

ಕರ್ನಾಟಕದಲ್ಲಿ ಟೀನೇಜ್ ಪ್ರೆಗ್ನೆನ್ಸಿ ಭಾರೀ ಹೆಚ್ಚಳ: ಬೆಚ್ಚಿಬೀಳಿಸುವಂತಿದೆ ಆರೋಗ್ಯ ಇಲಾಖೆ ಅಂಕಿಅಂಶ
ಟೀನೇಜ್ ಪ್ರೆಗ್ನೆನ್ಸಿ (ಸಾಂದರ್ಭಿಕ ಚಿತ್ರ)
Edited By:

Updated on: Aug 25, 2025 | 8:47 AM

ಬೆಂಗಳೂರು, ಆಗಸ್ಟ್ 25: ಕೆಲವು ತಂದೆ-ತಾಯಿಗಳಿಗೆ ಮನೆಯ ಹೆಣ್ಣು ಮಕ್ಕಳಿಗೆ ಆದಷ್ಟು ಬೇಗ ಮದುವೆ ಮಾಡಿ ಜವಾಬ್ದಾರಿಯಿಂದ ಮುಕ್ತವಾಗಬೇಕು ಎಂಬ ಭಾವನೆ ಇರುತ್ತದೆ. ಶಿಕ್ಷಣದ ಕೊರತೆ, ಮೂಢನಂಬಿಕೆಗಳಿಂದಲೂ ಕೆಲವು ಪೋಷಕರು ಬಾಲ್ಯ ವಿವಾಹಕ್ಕೆ ಮುಂದಾಗುತ್ತಿದ್ದಾರೆ. ಇನ್ನು ಕೆಲವು ದೌರ್ಜನ್ಯ ಹಾಗೂ ಪ್ರೇಮ ಪ್ರಕರಣಗಳ ಕಾರಣದಿಂದಲೂ ಬಾಲ ಗರ್ಭಿಣಿಯರ ಸಂಖ್ಯೆ ಏರಿಕೆಗೆ ಕಾರಣವಾಗುತ್ತಿದೆ. ಕರ್ನಾಟಕದಲ್ಲಿ (Karnataka) 18 ವರ್ಷ ತುಂಬುವುದಕ್ಕಿಂತ ಮೊದಲೇ ಗರ್ಭಿಣಿ ಆಗುತ್ತಿರುವವರ ಸಂಖ್ಯೆ (Teenage Pregnancy) ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಾಗಿ, ಈ ಬಗ್ಗೆ ಗಮನಹರಿಸಬೇಕೆಂದು ಎಲ್ಲ ಇಲಾಖೆಗಳಿಗೆ ಮುಖ್ಯಮಂತ್ರಿಗಳೇ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿಯೂ ಹೆಚ್ಚುತ್ತಿದೆ ಟೀನೇಜ್ ಪ್ರೆಗ್ನೆನ್ಸಿ

ಬೆಂಗಳೂರಿನಲ್ಲಿಯೂ ವರ್ಷದಿಂದ ವರ್ಷಕ್ಕೆ ಟಿನೇಜ್ ಪ್ರಗ್ನೆನ್ಸಿ ಏರಿಕೆ ಕಾಣುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದಾದ್ಯಂತ ಒಟ್ಟಾರೆಯಾಗಿ 3,36,000 ಕ್ಕೂ ಹೆಚ್ಚು ಟಿನೇಜ್ ಪ್ರಗ್ನೆನ್ಸಿ ಪ್ರಕರಣಗಳು ವರದಿಯಾಗಿದ್ದರೆ, ಬೆಂಗಳೂರು ಅರ್ಬನ್​ನಲ್ಲಿ 8891 ದಾಖಲಾಗಿವೆ. ಈ ವಿಚಾರವಾಗಿ ಆರೋಗ್ಯ ಇಲಾಖೆ ನೀಡಿರುವ ಅಂಕಿಅಂಶಗಳು ಆಘಾತಕಾರಿಯಾಗಿವೆ.

ಆರೇ ತಿಂಗಳಲ್ಲಿ 22000 ಟೀನೇಜ್ ಪ್ರೆಗ್ನೆನ್ಸಿ!

ಕಳೆದ ಆರು ತಿಂಗಳಲ್ಲಿ ರಾಜ್ಯದಲ್ಲಿ 22000 ಸಾವಿರ ಹಾಗೂ ಬೆಂಗಳೂರು ಅರ್ಬನ್​​ನಲ್ಲಿ 8891 ಟೀನೇಜ್ ಪ್ರಗ್ನೆನ್ಸಿ ಪ್ರಕರಣಗಳು ಕಂಡು ಬಂದಿವೆ. ಹೀಗಾಗಿ ಆರೋಗ್ಯ ಇಲಾಖೆ ಕೂಡಾ ಈ ಬಗ್ಗೆ ಕ್ರಮ ಕೈಗೊಳ್ಳಲು ಮುಂದಾಗಿದೆ.

ಟೀನೇಜ್ ಪ್ರೆಗ್ನೆನ್ಸಿಗೆ ಪ್ರಮುಖ ಕಾರಣಗಳೇನು?

14 ನೇ ವಯಸ್ಸಿನಲ್ಲೇ ಅತಿ ಹೆಚ್ಚು ಬಾಲಕಿಯರು ಗರ್ಭಿಣಿ ಆಗುತ್ತಿದ್ದಾರೆ. ಅರಿವಿನ ಕೊರತೆ, ಪ್ರೊಟೆಕ್ಷನ್ ಕೊರತೆಯಿಂದ ಪ್ರಕರಣಗಳು ಹೆಚ್ಚಳ ಕಂಡಿವೆ. ಬಾಲ್ಯ ವಿವಾಹ, ಅನಕ್ಷರತೆ ಮತ್ತು ಬಡತನ, ವಲಸೆ ಹೋಗುವ ಪ್ರವೃತ್ತಿ ಸಾಮಾಜಿಕ ಅಭದ್ರತೆ, ಕುಟುಂಬ ಕಲ್ಯಾಣ ವಿಧಾನಗಳ ಅರಿವು ಇಲ್ಲದಿರುವುದು, ಹುಡುಗಿಯರ ಅಭಿಪ್ರಾಯಕ್ಕೆ ಮನ್ನಣೆ ನೀಡದಿರುವುದು ಟೀನೇಜ್ ಪ್ರೆಗ್ನೆನ್ಸಿಗೆ ಪ್ರಮುಖ ಕಾರಣಗಳಾಗಿವೆ. ಈ ಬಗ್ಗೆ ಮಕ್ಕಳ ಹಕ್ಕುಗಳ ಆಯೋಗ ಕೂಡಾ ಸೂಕ್ತ ಕ್ರಮಕ್ಕೆ ಒತ್ತಾಯಿಸಿದೆ.

ಇದನ್ನೂ ಓದಿ: ಜೀವಂತ ಕಂದಮ್ಮನಿಗೆ ಜನ್ಮ ನೀಡುವ ರೋಬೋಟ್, ಇನ್ನು ಮಹಿಳೆಯರ ಅಗತ್ಯವಿಲ್ಲ

ಬಾಲ ಗರ್ಭಿಣಿಯಾಗುವುದರಿಂದ ತಾಯಿ, ಮಗುವಿನ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಮಗು ಜನನದ ಬಳಿಕ ಬಾಲ ಬಾಣಂತಿಯರು ರಕ್ತ ಹೀನತೆ, ಅಧಿಕ ರಕ್ತದೊತ್ತಡ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುವ ಭೀತಿ ಇದ್ದು, ಸರ್ಕಾರ ಈ ಬಗ್ಗೆ ತ್ವರಿತವಾಗಿ ಕ್ರಮಕ್ಕೆ ಮುಂದಾಗಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:47 am, Mon, 25 August 25

ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
Loading...
Unable to load recommendations.
Follow Us