ಐರನ್ ಮ್ಯಾನ್ ಸ್ಪರ್ಧೆ ಪೂರ್ಣಗೊಳಿಸಿದ ತೇಜಸ್ವಿ ಸೂರ್ಯ: ಪ್ರಧಾನಿ ಮೋದಿ ಶ್ಲಾಘನೆ
ಗೋವಾದಲ್ಲಿ ನಡೆದ ಐರನ್ ಮ್ಯಾನ್ 70.3 ಸ್ಪರ್ಧೆಯನ್ನು ಸಂಸದ ತೇಜಸ್ವಿ ಸೂರ್ಯ ಅವರು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಆ ಮೂಲಕ ಅವರು ಈ ಸ್ಪರ್ಧೆಯನ್ನು ಪೂರ್ಣಗೊಳಿಸಿದ ಮೊದಲ ಜನಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ತೇಜಸ್ವಿ ಸೂರ್ಯ ಸಾಧನೆಯನ್ನು ಪ್ರಧಾನಿ ಮೋದಿ ಅವರು ಶ್ಲಾಘಿಸಿದ್ದಾರೆ.
ಬೆಂಗಳೂರು, ಅಕ್ಟೋಬರ್ 27: ಇಂದು ಗೋವಾದಲ್ಲಿ ನಡೆದ ವಾಕಿಂಗ್, ಸ್ವಿಮ್ಮಿಂಗ್ ಹಾಗೂ ಸೈಕ್ಲಿಂಗ್ ಮೂರು ರೀತಿಯ ಐರನ್ ಮ್ಯಾನ್ 70.3 ಸ್ಪರ್ಧೆಯಲ್ಲಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಭಾಗವಹಿಸಿ, ಪೂರ್ಣಗೊಳಿಸುವ ಮೂಲಕ ವಿಜೇತರಾದ ಪ್ರಥಮ ಜನಪ್ರತಿನಿಧಿಯಾಗಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಸ್ಪರ್ಧೆಯು 1.9 ಕಿಮೀ ಈಜು, 90 ಕಿಮೀ ಸೈಕ್ಲಿಂಗ್ ಮತ್ತು 21.1 ಕಿಮೀ ಓಟ ಸೇರಿದಂತೆ ಒಟ್ಟು 113 ಕಿಮೀ ದೂರ ಕ್ರಮಿಸಬೇಕಿತ್ತು.
ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ತೇಜಸ್ವಿ ಸೂರ್ಯ, ಐರನ್ ಮ್ಯಾನ್ 70.3 ಗೋವಾ ಸ್ಪರ್ಧೆಯೂ ಕ್ರೀಡೆಗೆ ಹೆಚ್ಚು ಪ್ರಸಿದ್ಧವಾಗಿದೆ. ಈ ಸ್ಪರ್ಧೆಯಲ್ಲಿ 50 ಕ್ಕೂ ಹೆಚ್ಚು ದೇಶಗಳ ಕ್ರೀಡಾಪಟುಗಳು ಭಾಗವಹಿಸುತ್ತಾರೆ. ಆ ಮೂಲಕ ಭಾರತ ಮತ್ತು ವಿಶ್ವದಾದ್ಯಂತ ಕ್ರೀಡಾಪಟುಗಳು ಮತ್ತು ಫಿಟ್ನೆಸ್ ಪ್ರಿಯರ ಪ್ರಮುಖ ಸ್ಪರ್ಧೆ ಆಗಿದೆ ಎಂದಿದ್ದಾರೆ.
The Ironman 70.3 Goa, known for attracting athletes from over 50 countries, has become a premier event for athletes and fitness enthusiasts in India and across the World.
The challenge involves a 1.9km swim, a 90km cycling segment, and a 21.1km run, covering a total distance of… pic.twitter.com/jUDpjKccwU
— Tejasvi Surya (@Tejasvi_Surya) October 27, 2024
ಐರನ್ ಮ್ಯಾನ್ 70.3 ಗೋವಾ ಸ್ಪರ್ಧೆಯೂ ತುಂಬಾ ಕಠಿಣವಾಗಿದ್ದು, ಕಳೆದ 4 ತಿಂಗಳುಗಳಿನಿಂದ ನನ್ನ ಫಿಟ್ನೆಸ್ಗಾಗಿ ನಾನು ಕಠಿಣ ತರಬೇತಿ ಪಡೆದಿದ್ದೇನೆ. ಇದರ ಪರಿಣಾಮವಾಗಿ ನಾನು ಈ ಸ್ಪರ್ಧೆಯನ್ನು ಪೂರ್ಣಗೊಳಿಸಿದ್ದೇನೆ ಎಂದು ಹಂಚಿಕೊಳ್ಳಲು ಸಂತೋಷವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದ ಫಿಟ್ ಇಂಡಿಯಾ ಅಭಿಯಾನವೇ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಸ್ಪೂರ್ತಿ ಎಂದು ಹೇಳಿದ್ದಾರೆ.
ದೊಡ್ಡ ಮಹತ್ವಾಕಾಂಕ್ಷೆಗಳು ಹೊತ್ತು ಬೆನ್ನಟ್ಟುತ್ತಿರುವ ಭಾರತವು ಯುವ ರಾಷ್ಟ್ರವಾಗಿ ರೂಪುಗೊಳಿಸುವಲ್ಲಿ ನಾವು ನಮ್ಮ ದೈಹಿಕ ಸಾಮರ್ಥ್ಯವನ್ನು ಪೋಷಿಸಬೇಕು ಮತ್ತು ಹೆಚ್ಚು ಆರೋಗ್ಯಕರ ರಾಷ್ಟ್ರವಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಆ ನಿಟ್ಟಿನಲ್ಲಿ ಸದೃಢನಾಗುವ ಪ್ರಯತ್ನವು ನಿಮ್ಮನ್ನು ಹೆಚ್ಚು ಶಿಸ್ತುಬದ್ಧ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದಿದ್ದಾರೆ.
ಇನ್ನು ಈ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದು, ಸಂಸದ ತೇಜಸ್ವಿ ಸೂರ್ಯ ಅವರ ಈ ಸಾಧನೆವನ್ನು ಶ್ಲಾಘಿಸಿದ್ದಾರೆ. ಇದು ಫಿಟ್ನೆಸ್ ಸಂಬಂಧಿತ ಚಟುವಟಿಕೆಗಳನ್ನು ಮುಂದುವರಿಸಲು ಇನ್ನೂ ಅನೇಕ ಯುವಕರಿಗೆ ಸ್ಫೂರ್ತಿ ನೀಡುತ್ತದೆ ಎಂಬುವುದು ನನಗೆ ಖಾತ್ರಿಯಿದೆ ಎಂದು ಹೇಳಿದ್ದಾರೆ.
Sir, your own fitness and energy levels are an inspiration to all of us! Thank you for your kind words.
Khelo India and Fit India movement have set a culture of prioritising physical fitness, from which whole country is benefiting.
I intend to take your message further and… https://t.co/chvDbWDBD2
— Tejasvi Surya (@Tejasvi_Surya) October 27, 2024
ಇದಕ್ಕೆ ಪ್ರತಿಯಾಗಿ ತೇಜಸ್ವಿ ಸೂರ್ಯ ಮತ್ತೊಂದು ಟ್ವೀಟ್ ಮಾಡಿದ್ದು, ಸರ್, ನಿಮ್ಮ ಫಿಟ್ನೆಸ್ ಮತ್ತು ಎನರ್ಜಿ ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದೆ. ಖೇಲೋ ಇಂಡಿಯಾ ಮತ್ತು ಫಿಟ್ ಇಂಡಿಯಾ ಅಭಿಯಾನವೂ ದೈಹಿಕ ಸಾಮರ್ಥ್ಯಕ್ಕೆ ಆದ್ಯತೆ ನೀಡುತ್ತಿದ್ದು, ಇದರಿಂದ ಇಡೀ ದೇಶವೇ ಪ್ರಯೋಜನ ಪಡೆಯುತ್ತಿದೆ. ನಿಮ್ಮ ಕಾರ್ಯ ಯೋಜನೆಗಳನ್ನು ಮತ್ತಷ್ಟು ಮುಂದುವರಿಸಲು ಮತ್ತು ಹೆಚ್ಚಿನ ಯುವಕರನ್ನು ಫಿಟ್ನೆಸ್ ದಿನಚರಿಗಳಿಗೆ ತರಲು ನಾನು ಬಯಸುತ್ತೇನೆ ಎಂದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.