ಕ್ಷಮೆ ಕೇಳಿದ ಸುದ್ದಿ ಅಲ್ಲಗಳೆದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ: ಸಾಮಾಜಿಕ ಜಾಲತಾಣದಲ್ಲಿ ವಾಗ್ವಾದ

ಮಂಗಳವಾರದ ಈ ಘಟನೆಯ ಬಳಿಕ, ಅಲ್ಲಿನ ಕೆಲಸಗಾರರ ಹೆಸರು, ಸಂಪರ್ಕ ಸಂಖ್ಯೆ ಹಾಗೂ ವಿಳಾಸ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹಂಚಲ್ಪಟ್ಟಿತ್ತು. ಇದರಿಂದ ಅಲ್ಲಿನ ಕೆಲಸಗಾರರಿಗೆ ಬಹಳಷ್ಟು ಸಮಸ್ಯೆಯೂ ಉಂಟಾಗಿತ್ತು.

ಕ್ಷಮೆ ಕೇಳಿದ ಸುದ್ದಿ ಅಲ್ಲಗಳೆದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ: ಸಾಮಾಜಿಕ ಜಾಲತಾಣದಲ್ಲಿ ವಾಗ್ವಾದ
ಸಂಸದ ತೇಜಸ್ವಿ ಸೂರ್ಯ
Follow us
TV9 Web
| Updated By: ganapathi bhat

Updated on:Aug 23, 2021 | 12:48 PM

ಬೆಂಗಳೂರು: ಬಿಜೆಪಿ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಕೊವಿಡ್19 ವಾರ್​ರೂಮ್​ನಲ್ಲಿ ಕಾರ್ಯನಿರ್ವಹಿಸುವವರ ಬಳಿ ಕ್ಷಮಾಪಣೆ ಕೇಳಿದ್ದಾರೆ ಎಂಬ ವಿಚಾರವನ್ನು ಸ್ವತಃ ತೇಜಸ್ವಿ ಸೂರ್ಯ ಅಲ್ಲಗಳೆದಿದ್ದಾರೆ. ಬಿಬಿಎಂಪಿಯಲ್ಲಿ ಬೆಡ್ ಬ್ಲಾಕಿಂಗ್ ಹಗರಣ ನಡೆದಿರುವುದನ್ನು ಅವರು ಬಹಿರಂಗಗೊಳಿಸಿದ್ದರು. ಈ ಪ್ರಕರಣ ಬಳಿಕ ಪರಸ್ಪರ ಕೋಮುವಾಗ್ವಾದಕ್ಕೂ ಕಾರಣವಾಗಿತ್ತು. 

ಒಬ್ಬರಿಗೆ ಸುದ್ದಿ ಮಾಡಲು ಏನು ಸಿಗದಿದ್ದಾಗ ಹೀಗೆ ಸುಳ್ಳು ಸುದ್ದಿಯನ್ನು ಸೃಷ್ಟಿಸುತ್ತಾರೆ ಎಂದು ತೇಜಸ್ವಿ ಸೂರ್ಯ ಅವರ ಕಚೇರಿ ತನ್ನ ಟ್ವಿಟರ್ ಹ್ಯಾಂಡಲ್​ನಲ್ಲಿ ಬರೆದುಕೊಂಡಿದೆ. ತೇಜಸ್ವಿ ಸೂರ್ಯ, ಕೊವಿಡ್ ವಾರ್ ರೂಮ್​ಗೆ ಭೇಟಿ ನೀಡಿ, ಅಲ್ಲಿನ ಕೆಲಸಗಾರರ ಬಳಿ ಕ್ಷಮೆ ಕೇಳಿದ್ದಾರೆ ಎಂಬ ಎರಡು ಸುದ್ದಿಗೆ ಪ್ರತಿಕ್ರಿಯಿಸಿ ಹೀಗೆ ಹೇಳಿದ್ದಾರೆ.

ತೇಜಸ್ವಿ ಸೂರ್ಯ ಮಂಗಳವಾರ ಕೊವಿಡ್ ವಾರ್ ರೂಮ್​ಗೆ ಭೇಟಿ ನೀಡಿದ್ದರು. ಆ ವೇಳೆ, 17 ಮುಸ್ಲಿಂ ಕೆಲಸಗಾರರ ಹೆಸರನ್ನು ಓದಿ ಹೇಳಿದ್ದರು. ಆಸ್ಪತ್ರೆಯ ಬೆಡ್ ಬ್ಲಾಕಿಂಗ್ ಹಗರಣದಲ್ಲಿ ಅವರು ಭಾಗಿಯಾಗಿದ್ದರು ಎಂದು ತಿಳಿಸಿದ್ದರು. ಕರ್ನಾಟಕವು ಕೊರೊನಾ ಸೋಂಕಿನ ತೀವ್ರಗತಿಯ ಹರಡುವಿಕೆಯಿಂದ ತತ್ತರಿಸಿದೆ. ಈ ವೇಳೆ ಹೀಗೆ ಮಾಡಿರುವುದು ಅಕ್ಷಮ್ಯ ಎಂದು ಜನರು ಕೂಡ ಪ್ರತಿಕ್ರಿಯೆ ನೀಡಿದ್ದರು.

ಬಿಜೆಪಿ ಶಾಸಕರ ಜೊತೆಗೆ ಕೊವಿಡ್ ವಾರ್ ರೂಮ್​ಗೆ ಭೇಟಿ ನೀಡಿದ್ದ ತೇಜಸ್ವಿ ಸೂರ್ಯ, ಅಲ್ಲಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಅವರಲ್ಲಿ ಒಬ್ಬರಾಗಿದ್ದ ಶಾಸಕ ರವಿ ಸುಬ್ರಹ್ಮಣ್ಯ, ಇವರನ್ನೆಲ್ಲಾ ಕಾರ್ಪೊರೇಷನ್​ಗೆ ಅಪಾಯಿಂಟ್ ಮಾಡಿಕೊಂಡಿದ್ದೀರಾ ಅಥವಾ ಮದರಸಾಗಾ ಎಂಬ ಪ್ರಶ್ನೆಯನ್ನೂ ಎತ್ತಿದ್ದರು.

ಮಂಗಳವಾರದ ಈ ಘಟನೆಯ ಬಳಿಕ, ಅಲ್ಲಿನ ಕೆಲಸಗಾರರ ಹೆಸರು, ಸಂಪರ್ಕ ಸಂಖ್ಯೆ ಹಾಗೂ ವಿಳಾಸ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹಂಚಲ್ಪಟ್ಟಿತ್ತು. ಇದರಿಂದ ಅಲ್ಲಿನ ಕೆಲಸಗಾರರಿಗೆ ಬಹಳಷ್ಟು ಸಮಸ್ಯೆಯೂ ಉಂಟಾಗಿತ್ತು. ತೇಜಸ್ವಿ ಸೂರ್ಯ ಕ್ಷಮೆ ಕೇಳಿದ್ದಾರೆ ಅಥವಾ ಇಲ್ಲ ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ಅಭಿಪ್ರಾಯಗಳು ಹರಿದಾಡುತ್ತಿವೆ.

ಈ ಬಗ್ಗೆ ತಕ್ಷಣವೇ ಪೊಲೀಸರು ತನಿಖೆ ಆರಂಭಿಸಿದ್ದರು. ಬುಧವಾರ, ನಗರದ ಎಲ್ಲಾ ವಲಯಗಳ ಕೊವಿಡ್ ವಾರ್ ರೂಮ್​ಗಳಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದರು. ಆ ಮೂಲಕ, ಅಕ್ರಮವಾಗಿ ಬೆಡ್ ಬ್ಲಾಕಿಂಗ್ ದಂಧೆ ನಡೆಸುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಬಳಿಕ, ಈವರೆಗೆ 7 ಮಂದಿಯನ್ನು ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಗಾನ್‌ ಕೇಸ್‌, ಒನ್‌ ಟೈಮ್‌ ಕ್ರಾಪ್‌: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಕುಹಕ

ಕೋಮು ವೈಷಮ್ಯ ಆರೋಪ; ತೇಜಸ್ವಿ ಸೂರ್ಯ ಹಾಗೂ ಮೂವರು ಶಾಸಕರ ವಿರುದ್ಧ ಜೆಡಿಎಸ್​ ಯುವ ನಾಯಕಿಯಿಂದ ದೂರು

Published On - 8:18 pm, Fri, 7 May 21

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್