AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಇರುವ ಕಡೆ ದುಷ್ಕೃತ್ಯಗಳಿಗೆ ಬೆಂಬಲ: ಸಂಸದ ತೇಜಸ್ವಿ ಸೂರ್ಯ ಕಿಡಿ

ಬೆಂಗಳೂರಿನಲ್ಲಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ಬಿಜೆಪಿ ಇರುವ ಕಡೆ ಭಯೋತ್ಪಾದನೆ ಇರುವುದಿಲ್ಲ. ಕಾಂಗ್ರೆಸ್ ಇರುವ ಕಡೆ ದುಷ್ಕೃತ್ಯಗಳಿಗೆ ಬೆಂಬಲ ನೀಡಲಾಗುತ್ತೆ ಎಂದು ವಾಗ್ದಾಳಿ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಈ ಬಾರಿ ಇತಿಹಾಸ ನಿರ್ಮಿಸಲಿದೆ. ಈ ಬಾರಿ ಸುಮಾರು 5 ಲಕ್ಷ ಅಂತರದಿಂದ ಗೆಲ್ಲುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಇರುವ ಕಡೆ ದುಷ್ಕೃತ್ಯಗಳಿಗೆ ಬೆಂಬಲ: ಸಂಸದ ತೇಜಸ್ವಿ ಸೂರ್ಯ ಕಿಡಿ
ಸಂಸದ ತೇಜಸ್ವಿ ಸೂರ್ಯ
Sunil MH
| Updated By: ಗಂಗಾಧರ​ ಬ. ಸಾಬೋಜಿ|

Updated on: Mar 17, 2024 | 5:18 PM

Share

ಬೆಂಗಳೂರು, ಮಾರ್ಚ್​​ 17: ಬಿಜೆಪಿ ಇರುವ ಕಡೆ ಭಯೋತ್ಪಾದನೆ ಇರುವುದಿಲ್ಲ. ಕಾಂಗ್ರೆಸ್ ಇರುವ ಕಡೆ ದುಷ್ಕೃತ್ಯಗಳಿಗೆ ಬೆಂಬಲ ನೀಡಲಾಗುತ್ತೆ ಎಂದು ಸಂಸದ ತೇಜಸ್ವಿ ಸೂರ್ಯ (Tejasvi Surya) ವಾಗ್ದಾಳಿ ಮಾಡಿದ್ದಾರೆ. ನಗದರಲ್ಲಿ ಮಾತನಾಡಿದ ಅವರು, ದೇಶದಲ್ಲಿ ಬಿಜೆಪಿ ಗಟ್ಟಿಯಾಗಿದೆ. 10 ವರ್ಷದಿಂದ ಉಗ್ರರ ದಾಳಿಗೆ ಬಲಿಯಾದವರು ಕಡಿಮೆ ಎಂದರು. ಇವತ್ತು ಬೆಂಗಳೂರಿನ‌ಲ್ಲಿ‌ 70 ಕಿ.ಮೀ. ಮೆಟ್ರೋ ‌ಅಭಿವೃದ್ಧಿ ಆಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 5 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.

ಬೆಂಗಳೂರು ದಕ್ಷಿಣ ಈ ಬಾರಿ ಇತಿಹಾಸ ನಿರ್ಮಿಸಲಿದೆ. ಕಳೆದ ಬಾರಿ ಬೆಂಗಳೂರಿನ ಇತಿಹಾಸದಲ್ಲಿ ಅತೀ ಹೆಚ್ಚು ಅಂತರದಿಂದ ಗೆದ್ದಿದ್ದೆವು. ಈ ಬಾರಿ ಸುಮಾರು 5 ಲಕ್ಷ ಅಂತರದಿಂದ ಗೆಲ್ಲುತ್ತೇವೆ ಎಂದು ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಭರವಸೆ ನೀಡಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಟ್ವೀಟ್​ 

ಬಿ ವೈ ವಿಜಯೇಂದ್ರ ಅವರು ರಾಜ್ಯ ಅಧ್ಯಕ್ಷರಾದ ನಂತರ ಕಾರ್ಯಕರ್ತರಲ್ಲಿ ಸ್ಫೂರ್ತಿ ಮೂಡಿದೆ. ಅದೇ ರೀತಿ ಸಿ.ಕೆ ರಾಮಮೂರ್ತಿ ಅವರು ಜಿಲ್ಲಾಧ್ಯಕ್ಷರಾದ ಬಳಿಕ ಬೆಂಗಳೂರು ದಕ್ಷಿಣದಲ್ಲಿ ಸಂಘಟನೆಯನ್ನು ಗಟ್ಟಿ ಮಾಡುವ ಕೆಲಸವಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಯಾರೋ ಒಬ್ಬರ ಮಾತು ಕೇಳಿ ಟಿಕೆಟ್ ಕೊಡಲ್ಲ: ಈಶ್ವರಪ್ಪಗೆ ವಿಜಯೇಂದ್ರ ಕೌಂಟರ್

ನನ್ನೆಲ್ಲಾ ಬಿಜೆಪಿ ಕಾರ್ಯಕರ್ತರ ಸಹಕಾರದೊಂದಿಗೆ, ಪ್ರೀತಿ ಹಾಗೂ ಬಲದೊಂದಿಗೆ ಈ ಬಾರಿ ಅತೀ ಹೆಚ್ಚು ಅಂತರದಿಂದ ಚುನಾವಣೆ ಗೆಲ್ಲಲಿದ್ದೇವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಾಸನದಲ್ಲಿ ಸೋದರಳಿಯ ಶ್ರೇಯಸ್ ಪಟೇಲ್ ವಿರುದ್ಧ ಬಂಡಾಯವೆದ್ದ ರಾಜೇಶ್ವರಿ; ಕಾಂಗ್ರೆಸ್​ಗೆ ತಲೆಬಿಸಿ

ಬೆಂಗಳೂರು ದಕ್ಷಿಣದಲ್ಲಿ‌ 5 ಲಕ್ಷ‌ ಮತಗಳ‌ ಅಂತರದಿಂದ‌ ಗೆಲುತ್ತೇವೆ. ಅದರ‌ ಸರ್ಟಿಫಿಕೇಟ್‌ ನೀವೆ‌ ಕೊಡುತೀರಿ. ಬಸವನಗುಡಿಯಲ್ಲಿ‌ 1.40 ಲಕ್ಷ ಲೀಡ್‌ ಕೊಡಿಸುವುದಾಗಿ ರವಿಸುಬ್ರಹ್ಮಣ್ಯ ಹೇಳಿದ್ದಾರೆ. ಅಲ್ಲಿ ಕಾಂಗ್ರೆಸ್ 20 ಸಾವಿರ ದಾಟಲ್ಲ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು