ತೆಲಂಗಾಣದಲ್ಲಿ ಅಕ್ಕಿ ದಾಸ್ತಾನು ಇಲ್ಲವೆಂದಿದ್ದಾರೆ ಚಂದ್ರಶೇಖರ್ ರಾವ್: ಸಿಎಂ ಸಿದ್ದರಾಮಯ್ಯ

ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಿಸಿದ ಹಿನ್ನೆಲೆ ಕರ್ನಾಟಕ ಸರ್ಕಾರ ಅಕ್ಕ-ಪಕ್ಕದ ರಾಜ್ಯ ಹಾಗೂ ದೂರದ ಛತ್ತೀಸಘಡ್​ ಮತ್ತು ಪಂಜಾಬ್​ ರಾಜ್ಯಗಳ ಜೊತೆ ಅಕ್ಕಿ ಖರೀದಿಗೆ ಮಾತುಕತೆ ನಡೆಸಿತು. ಇಂದು ಸಿಎಂ ಸಿದ್ದರಾಮಯ್ಯ ತೆಲಂಗಾಣದ ಸಿಎಂಗೆ ಕರೆ ಮಾಡಿ ಅಕ್ಕಿ ಪೂರೈಕೆಗೆ ಮನವಿ ಮಾಡಿದ್ದರು.

ತೆಲಂಗಾಣದಲ್ಲಿ ಅಕ್ಕಿ ದಾಸ್ತಾನು ಇಲ್ಲವೆಂದಿದ್ದಾರೆ ಚಂದ್ರಶೇಖರ್ ರಾವ್: ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Follow us
ವಿವೇಕ ಬಿರಾದಾರ
|

Updated on: Jun 17, 2023 | 3:42 PM

ಬೆಂಗಳೂರು: ತೆಲಂಗಾಣದಲ್ಲಿ (Telngana) ಅಕ್ಕಿ ದಾಸ್ತಾನು ಇಲ್ಲವೆಂದು ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ (Chandrashekar Rao)​ ಅವರು ಹೇಳಿದ್ದಾರೆ. ಸಿಎಂ ಚಂದ್ರಶೇಖರ ರಾವ್ ಅವರ ಜೊತೆ ನಾನೇ ಮಾತಾಡಿದ್ದೇನೆ. ಹೀಗಾಗಿ ಆಂಧ್ರ ಪ್ರದೇಶ ಸರ್ಕಾರದ ಜೊತೆ ಚರ್ಚಿಸುವಂತೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಹೇಳಿದ್ದೇನೆ. ಛತ್ತೀಸ್‌ಘಡ್​​ದವರು 1.5 ಲಕ್ಷ ಟನ್ ಅಕ್ಕಿ ಕೊಡಲು ಸಮ್ಮತಿಸಿದ್ದಾರೆ. ಆದರೆ ದರ ಸ್ವಲ್ಪ ದುಬಾರಿ ಇದೆ, ಸಾಗಣೆ ವೆಚ್ಚವೂ ಹೆಚ್ಚಾಗಲಿದೆ. ಇಂದು (ಜೂ.17) ಸಂಜೆ ಸಭೆ ನಡೆಸಿ ಸರ್ಕಾರದ ನಿರ್ಧಾರ ತಿಳಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ಬೆಂಗಳೂರಿನ ಶಕ್ತಿಭವನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಕಮಿಷನ್​ಗಾಗಿ ಹೊರ ರಾಜ್ಯಗಳಿಂದ ಅಕ್ಕಿ ಖರೀದಿಸುತ್ತಿದ್ದಾರೆ ಎಂಬ ಶಾಸಕ ಬಿ.ವೈ.ವಿಜಯೇಂದ್ರ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಟಾಂಗ್​ ಕೊಟ್ಟಿದ್ದಾರೆ. ರಾಜ್ಯದಲ್ಲೇ ಅಕ್ಕಿ ಸಿಗುವುದಿದ್ದರೆ ಶಾಸಕ ವಿಜಯೇಂದ್ರ ಕೊಡಿಸಲಿ. ಬಿ.ವೈ.ವಿಜಯೇಂದ್ರ ಮಿಲ್​ನಲ್ಲಿ ಎಷ್ಟು ಅಕ್ಕಿ ಇದೆ ಅದನ್ನು ಕೊಡಲಿ. ಬಿಜೆಪಿಯವರು ಸುಮ್ಮನೆ ಮಾತನಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಗರಂ ಆದರು.

ಇದನ್ನೂ ಓದಿ: ನ್ನಭಾಗ್ಯ ಯೋಜನೆ ಅಕ್ಕಿಗಾಗಿ ಅನ್ಯ ರಾಜ್ಯಗಳ ಮೊರೆ ಹೋದ ಸರ್ಕಾರ

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿಗಳಲ್ಲೊಂದಾದ ಅನ್ನಭಾಗ್ಯ ಯೋಜನೆಇದೇ ಜುಲೈ 1 ರಂದು ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ. ಆದರೆ ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಿಸಿದೆ.

ಹೀಗಾಗಿ ಜುಲೈ 1ರಂದು ಈ ಯೋಜನೆ ಜಾರಿಯಾಗುವುದು ಬಹುತೇಕ ಡೌಟ್ ಆಗಿದ್ದು ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಅಕ್ಕ ಪಕ್ಕದ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಜೊತೆ ಅಕ್ಕಿ ಖರೀದಿಗೆ ಮಾತುಕತೆ ನಡೆಸಿದೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ಇಂದು ತೆಲಂಗಾಣದ ಸಿಎಂಗೆ ಕರೆ ಮಾಡಿ ಅಕ್ಕಿ ಪೂರೈಕೆಗೆ ಮನವಿ ಮಾಡಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ  ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ