AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಮುಂಗಾರು ಮಳೆ ಮಧ್ಯೆಯೂ ಕರ್ನಾಟಕದಲ್ಲಿ ತಾಪಮಾನ ಹೆಚ್ಚಳ!

Karnataka Weather Update: ಮಳೆ ಬಂದು ಬಿಡುತ್ತಿದ್ದಂತೆಯೇ ಸೆಕೆಯ ಅನುಭವವಾಗುತ್ತದೆ. ಮಳೆಗಾಲವಾದರೂ ಬೆಂಗಳೂರಿನಲ್ಲಿ ತಣ್ಣಗಿನ ವಾತಾವರಣವೇ ಇಲ್ಲ ಎಂಬ ಮಾತುಗಳು ಅಲ್ಲಲ್ಲಿ ಕೇಳಿಬರುತ್ತಿವೆ. ಬೆಂಗಳೂರೆಂದಲ್ಲ, ಕರ್ನಾಟಕದ ಅನೇಕ ಪ್ರದೇಶಗಳಲ್ಲಿಯೂ ಇಂಥ ಪರಿಸ್ಥಿತಿ ಇದೆ. ಭರ್ಜರಿ ಮುಂಗಾರು ಮಳೆಯ ನಡುವೆಯೂ ಸೆಕೆಯ ಅನುಭವವಾಗುತ್ತಿದೆ. ಇದಕ್ಕೆ ಕಾರಣವೇನು ಎಂಬುದನ್ನು ಹವಾಮಾನ ಇಲಾಖೆ ವಿವರಿಸಿದೆ.

ಭಾರಿ ಮುಂಗಾರು ಮಳೆ ಮಧ್ಯೆಯೂ ಕರ್ನಾಟಕದಲ್ಲಿ ತಾಪಮಾನ ಹೆಚ್ಚಳ!
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Aug 16, 2024 | 9:51 AM

Share

ಬೆಂಗಳೂರು, ಆಗಸ್ಟ್ 16: ಪ್ರಸಕ್ತ ಋತುವಿನಲ್ಲಿ ಮುಂಗಾರು ಮಳೆ ಜೋರಾಗಿಯೇ ಸುರಿಯುತ್ತಿದೆ. ಕರ್ನಾಟಕದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಆದರೂ, ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆ ನಿಲ್ಲುತ್ತಿದ್ದಂತೆಯೇ ಸೆಕೆಯ ಅನುಭವವಾಗುತ್ತಿದೆ. ರಾಜ್ಯದಲ್ಲಿ ಮುಂಗಾರು ಮಳೆಯ ಮಧ್ಯೆಯೇ ತಾಪಮಾನವು ಗಗನಕ್ಕೇರುತ್ತಿರುವುದೇ ಇದಕ್ಕೆ ಕಾರಣ.

ಬೆಂಗಳೂರಿನಲ್ಲಿ ಆಗಸ್ಟ್ 15 ರಂದು ಗರಿಷ್ಠ ತಾಪಮಾನ 29.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಇದು ಸಾಮಾನ್ಯವಾಗಿ ಇರುವ ತಾಪಮಾನಕ್ಕಿಂತ 1.4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. ಆಗಸ್ಟ್ 14 ರಂದು, ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇತ್ತು. ಇದು ಸಾಮಾನ್ಯಕ್ಕಿಂತ 2.8 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ.

ಬೆಂಗಳೂರಿನಲ್ಲಿ ಬುಧವಾರ ಮತ್ತು ಗುರುವಾರ ಕನಿಷ್ಠ ತಾಪಮಾನ 22.5 ಡಿಗ್ರಿ ಸೆಲ್ಸಿಯಸ್ ಇತ್ತು. ಇದು, ಸಾಮಾನ್ಯಕ್ಕಿಂತ 2.4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ.

ಆಗಸ್ಟ್​​ನಲ್ಲಿಯೂ ಮೇ ತಿಂಗಳ ವಾತಾವರಣ!

ಈ ತಿಂಗಳಿನ (ಆಗಸ್ಟ್) ಹವಾಮಾನ ಪರಿಸ್ಥಿತಿ ಬೆಂಗಳೂರಿನಲ್ಲಿ ಹಾಗೂ ರಾಜ್ಯ ಅನೇಕ ಕಡೆಗಳಲ್ಲಿ ಮೇ ತಿಂಗಳಿನಂತೆಯೇ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಎನ್ ಪುವಿಯರಸನ್ ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ. ಸೂರ್ಯನ ಪ್ರಖರ ಶಾಖವನ್ನು ಈ ತಿಂಗಳು ನಾವು ಗಮನಿಸಬಹುದು. ಗಾಳಿ, ಮೋಡ ಕಡಿಮೆಯಾಗಿದ್ದು ಆಕಾಶವು ಶುಭ್ರವಾಗಿ ಕಾಣಿಸುತ್ತಿದೆ. ತೇವಾಂಶ ಕೂಡ ಹೆಚ್ಚಾಗಿದೆ. ಆಗಸ್ಟ್​​ನಲ್ಲಿ ಮಳೆಯ ಪ್ರಮಾಣವೂ ಇಳಿಮುಖವಾಗಿದ್ದು, ರಾಜ್ಯದಾದ್ಯಂತ ತಾಪಮಾನ ಏರಿಕೆಯಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಮುಂದಿನ ಮೂರು ದಿನ ಇದೇ ಗತಿ

ಇನ್ನೂ ಮೂರು ದಿನಗಳ ಕಾಲ ಇದೇ ರೀತಿಯ ತಾಪಮಾನ ಇರಲಿದೆ. ನಂತರ ಮುಂಗಾರು ಮಳೆ ಮತ್ತೆ ಚುರುಕಾಗಲಿದ್ದು ತಾಪಮಾನದಲ್ಲಿ ತುಸು ಇಳಿಕೆ ನಿರೀಕ್ಷಿಸಬಹುದು ಎಂದು ಪುವಿಯರಸನ್ ತಿಳಿಸಿದ್ದಾರೆ.

ಹಾವೇರಿಯಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ 6.6 ಡಿಗ್ರಿ ಸೆಲ್ಸಿಯಸ್‌ನಷ್ಟು ವ್ಯತ್ಯಾಸ ದಾಖಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇದು ರಾಜ್ಯದಲ್ಲೇ ಕಂಡುಬಂದ ಅತಿ ಹೆಚ್ಚು ವ್ಯತ್ಯಾಸವಾಗಿತ್ತು. ಹಾವೇರಿಯಲ್ಲಿ ಗರಿಷ್ಠ ತಾಪಮಾನ 33.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಇದನ್ನೂ ಓದಿ: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್, ಎರಡು ದಿನ ಭಾರಿ ಮಳೆ​

ಹವಾಮಾನ ಇಲಾಖೆ ಅಂಕಿಅಂಶಗಳ ಪ್ರಕಾರ, ಜೂನ್ 1 ರಿಂದ (ಮಾನ್ಸೂನ್ ಆರಂಭ) ಆಗಸ್ಟ್ 15 ರವರೆಗೆ, ಕರ್ನಾಟಕವು ಮಳೆಯಲ್ಲಿ ಶೇ 22 ರ ಏರಿಕೆ ದಾಖಲಿಸಿದೆ. ರಾಜ್ಯದಲ್ಲಿ 573.4 ಮಿಮೀ ವಾಡಿಕೆಯ ಮಳೆಯ ಮುನ್ಸೂಚನೆಗೆ ವಿರುದ್ಧವಾಗಿ, 697.3 ಮಿಮೀ ಮಳೆಯಾಗಿದೆ. ಜೂನ್ ಮತ್ತು ಜುಲೈನಲ್ಲಿ ಗರಿಷ್ಠ ಪ್ರಮಾಣದ ಮಳೆ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ಮಳೆ ಪ್ರಮಾಣ ಶೇ 37ರಷ್ಟು ಏರಿಕೆಯಾಗಿದೆ. ಜೂನ್ 1 ರಿಂದ ಆಗಸ್ಟ್ 15 ರವರೆಗೆ ನಗರದಲ್ಲಿ 287.8 ಮಿಮೀ ಮಳೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬ್ಲೌಸ್ ಹಿಂದೆ ಮೂಡಿತು ‘ಈ ಸಲ ಕಪ್ ನಮ್ದೇ’ ಡಿಸೈನ್
ಬ್ಲೌಸ್ ಹಿಂದೆ ಮೂಡಿತು ‘ಈ ಸಲ ಕಪ್ ನಮ್ದೇ’ ಡಿಸೈನ್
ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಕುಮಾರಕೃಪಾ ಅತಿಥಿ ಗೃಹವೇ ಸರ್ಕಾರಿ ನಿವಾಸ?
ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಕುಮಾರಕೃಪಾ ಅತಿಥಿ ಗೃಹವೇ ಸರ್ಕಾರಿ ನಿವಾಸ?
ಮಗು ಜನಿಸಿದ್ದಕ್ಕೆ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ, ಹರಿಪ್ರಿಯಾ
ಮಗು ಜನಿಸಿದ್ದಕ್ಕೆ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ, ಹರಿಪ್ರಿಯಾ