ರಾಜ್ಯದಲ್ಲಿ ತಾಪಮಾನ ಹೆಚ್ಚಳ: 8 ಜಿಲ್ಲೆಗಳ ಅಂಗನವಾಡಿ ಸಮಯ ಬದಲಾವಣೆ ಮಾಡಿ ಸರ್ಕಾರ ಆದೇಶ

ಮುಂದಿನ ಎರಡು ತಿಂಗಳ ಕಾಲ ಈ ಎಂಟು ಜಿಲ್ಲೆಯಲ್ಲಿನ ಅಂಗನವಾಡಿಗಳು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಕಾರ್ಯನಿರ್ವಹಿಸಲಿವೆ. ಬದಲಾದ ವೇಳಾಪಟ್ಟಿಯಂತೆ ಐಸಿಡಿಎಸ್ ಸೇವೆಗಳನ್ನು ನಿಯಮಾನುಸಾರ ಯಾವುದೇ ಅಡೆತಡೆಗಳಿಲ್ಲದೆ ಅಂಗನವಾಡಿ ಫಲಾನುಭವಿಗಳಿಗೆ ತಲುಪಿಸಲು ಅಗತ್ಯ ಕ್ರಮ ವಹಿಸಬೇಕು ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್ ಅವರು  ತಿಳಿಸಿದ್ದಾರೆ. 

ರಾಜ್ಯದಲ್ಲಿ ತಾಪಮಾನ ಹೆಚ್ಚಳ: 8 ಜಿಲ್ಲೆಗಳ ಅಂಗನವಾಡಿ ಸಮಯ ಬದಲಾವಣೆ ಮಾಡಿ ಸರ್ಕಾರ ಆದೇಶ
ಅಂಗನವಾಡಿ (ಪ್ರಾತಿನಿಧಿಕ ಚಿತ್ರ)
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಗಂಗಾಧರ​ ಬ. ಸಾಬೋಜಿ

Updated on:Apr 02, 2024 | 6:51 PM

ಕೊಪ್ಪಳ, ಮಾರ್ಚ್​ 02: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ಮುಂದಿನ ಕೆಲದಿನಗಳ ಕಾಲ ರಾಜ್ಯದಲ್ಲಿ ಉಷ್ಣಅಲೆ ಇರಲಿದೆ ಅಂತ ಹವಾಮಾನ ಇಲಾಖೆ ತಿಳಿಸಿದೆ. ಆದರೆ ರಣ ಬಿಸಿಲಿಗೆ ಅಂಗನವಾಡಿ (Anganwadi) ಗೆ ಹೋಗುತ್ತಿದ್ದ ಪುಟ್ಟ ಮಕ್ಕಳು ನಲಗುತ್ತಿದ್ದವು. ಇದನ್ನು ಅರಿತ ಸರ್ಕಾರ ಇದೀಗ ಅಂಗನವಾಡಿಗಳ ಸಮಯವನ್ನು ಎರಡು ತಿಂಗಳ ಕಾಲ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಏಪ್ರಿಲ್ ಮತ್ತು ಮೇ  ತಿಂಗಳಿಗೆ ಅನ್ವಯವಾಗುವಂತೆ ರಾಜ್ಯದ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬಳ್ಳಾರಿ, ಯಾದಗಿರಿ, ಕೊಪ್ಪಳ, ರಾಯಚೂರು, ಬೀದರ್ ಮತ್ತು ಕಿತ್ತೂರು ಕರ್ನಾಟಕ ಭಾಗದ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳ  ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದೆ.

ಮುಂದಿನ ಎರಡು ತಿಂಗಳ ಕಾಲ ಈ ಎಂಟು ಜಿಲ್ಲೆಯಲ್ಲಿನ ಅಂಗನವಾಡಿಗಳು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಕಾರ್ಯನಿರ್ವಹಿಸಲಿವೆ. ಬದಲಾದ ವೇಳಾಪಟ್ಟಿಯಂತೆ ಐಸಿಡಿಎಸ್ ಸೇವೆಗಳನ್ನು ನಿಯಮಾನುಸಾರ ಯಾವುದೇ ಅಡೆತಡೆಗಳಿಲ್ಲದೆ ಅಂಗನವಾಡಿ ಫಲಾನುಭವಿಗಳಿಗೆ ತಲುಪಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್ ಅವರು  ತಿಳಿಸಿದ್ದಾರೆ.

ಇದನ್ನೂ ಓದಿ: Karnataka Weather Update: ಏಪ್ರಿಲ್​- ಜೂನ್​ ತನಕ ರಾಜ್ಯದ ಹಲವೆಡೆ ತಾಪಮಾನ ಏರಿಕೆ, 2 ರಿಂದ 8 ದಿನ ಉಷ್ಣ ಅಲೆ ಬೀಸುವ ಸಂಭವ

ಈ ಮೊದಲು ಅಂಗನವಾಡಿಗಳು ಮುಂಜಾನೆ 9.30 ರಿಂದ ಸಂಜೆ 4 ಗಂಟೆವರಗೆ ಕಾರ್ಯನಿರ್ವಹಿಸುತ್ತಿದ್ದವು. ಕೆಲ ಪಾಲಕರು ತಮ್ಮ ಮಕ್ಕಳನ್ನು ಮಧ್ಯಾಹ್ನ 1.30 ಕ್ಕೆ ಕರೆದುಕೊಂಡು ಹೋದರೆ, ಕೆಲ ಪಾಲಕರು ಸಂಜೆ ಕರೆದುಕೊಂಡು ಹೋಗುತ್ತಿದ್ದರು. ಆದರೆ ಕೊಪ್ಪಳ, ಬಳ್ಳಾರಿ, ಕಲಬುರಗಿ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಹೆಚ್ಚಿನ ತಾಪಮಾನ ಇರೋದರಿಂದ ಮಕ್ಕಳು ಮಧ್ಯಾಹ್ನದ ಸಮಯದಲ್ಲಿ ಪರದಾಡುತ್ತಿದ್ದರು.

ಇದನ್ನೂ ಓದಿ: Karnataka Weather Update: ಮಾರ್ಚ್​ 28ರ ಬೆಂಗಳೂರು ತಾಪಮಾನ 7 ವರ್ಷಗಳಲ್ಲೇ ಗರಿಷ್ಠ

ಹೀಗಾಗಿ ಅಂಗನವಾಡಿಗಳ ಸಮಯವನ್ನು ಬೇಸಿಗೆ ಕಾಲದಲ್ಲಿ ಬದಲಾವಣೆ ಮಾಡಬೇಕು ಅಂತ ಅನೇಕ ಪಾಲಕರು ಮತ್ತು ಅಂಗನವಾಡಿ ಸಿಬ್ಬಂದಿ ಆಗ್ರಹಿಸಿದ್ದರು. ಹೀಗಾಗಿ ಸರ್ಕಾರ ತಾತ್ಕಾಲಿಕವಾಗಿ ಸಮಯವನ್ನು ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:54 pm, Tue, 2 April 24

ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ