ಎಫ್​ಐಆರ್ ರದ್ದು ಕೋರಿ ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್​​

ಪ್ರತಿಭಟನೆ ವೇಳೆ ರಸ್ತೆ ತಡೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕರ್ನಾಟಕ ಕಾಂಗ್ರೆಸ್ ನಾಯಕರಿಗೆ ಸುಪ್ರೀಂ ಕೋರ್ಟ್​​ನಲ್ಲಿ ತುಸು ರಿಲೀಫ್ ಸಿಕ್ಕಿದೆ. ಪ್ರಕರಣದ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ, ಮುಂದಿನ ಆದೇಶದವರೆಗೆ ಸಿದ್ದರಾಮಯ್ಯ ವಿರುದ್ಧದ ಕ್ರಿಮಿನಲ್ ವಿಚಾರಣೆಗೆ ತಡೆ ನೀಡಿ ಆದೇಶ ಹೊರಡಿಸಿದೆ.

ಎಫ್​ಐಆರ್ ರದ್ದು ಕೋರಿ ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್​​
ಸುಪ್ರೀಂಕೋರ್ಟ್​ನಲ್ಲಿ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್​​
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: Ganapathi Sharma

Updated on:Feb 19, 2024 | 12:31 PM

ನವದೆಹಲಿ, ಫೆಬ್ರವರಿ 19: ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ವಿಧಿಸಿರುವ 10 ಸಾವಿರ ರೂ. ದಂಡವನ್ನು ಪ್ರಶ್ನಿಸಿ ಮತ್ತು ಎಫ್​ಐಆರ್​​ ರದ್ದತಿ ಕೋರಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಕಾಂಗ್ರೆಸ್ (Congress) ನಾಯಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಿದೆ. ಇದೇ ವೇಳೆ, ಮುಂದಿನ ಆದೇಶದವರೆಗೆ ಸಿದ್ದರಾಮಯ್ಯ ವಿರುದ್ಧದದ ಕ್ರಿಮಿನಲ್ ವಿಚಾರಣೆಗೆ ತಡೆ ನೀಡಿ ಸುಪ್ರೀಂ ಕೋರ್ಟ್ (Supreme Court) ಆದೇಶ ನೀಡಿದೆ. ಇದರೊಂದಿಗೆ ಸಿದ್ದರಾಮಯ್ಯ ಹಾಗೂ ಇತರ ಕಾಂಗ್ರೆಸ್ ನಾಯಕರು ತುಸು ನಿರಾಳರಾಗುವಂತಾಗಿದೆ. ಆದರೆ, ಆರು ವಾರಗಳ ಒಳಗಾಗಿ ಪ್ರತಿಕ್ರಿಯೆ ನೀಡುವಂತೆ ಸರ್ವೋಚ್ಚ ನ್ಯಾಯಾಲಯ ಸೂಚನೆ ನೀಡಿದೆ.

ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಎಫ್​ಐಆರ್ ರದ್ದು ಮಾಡಬೇಕೆಂದು ಕೋರಿ ಸುಪ್ರೀಂ ಕೋರ್ಟ್​​ನಲ್ಲಿ ಕೆಲವು ದಿನಗಳ ಹಿಂದೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿರುವುದನ್ನು ಕೂಡ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಹಾಗೂ ಕಾಂಗ್ರೆಸ್ ನಾಯಕರ ಪರ ಅಭಿಷೇಕ್ ಮನುಸಿಂಘ್ವಿ ವಾದ ಮಂಡನೆ ಮಾಡಿದರು.

ಕಪಿಲ್ ಸಿಬಲ್ ವಾದ ಮಂಡನೆ ಹೀಗಿತ್ತು

ಕಾಂಗ್ರೆಸ್ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಇದೊಂದು ಶಾಂತಿಯುತ ಪ್ರತಿಭಟನೆಯಾಗಿತ್ತು. ಪ್ರತಿಭಟನೆಯಿಂದ ಯಾವುದೇ ರೀತಿಯ ಸಮಸ್ಯೆಯಾಗಿರಲಿಲ್ಲ. ಇದೊಂದು ‘ರಾಜಕೀಯ ಪ್ರತಿಭಟನೆ’ಯಾಗಿತ್ತು. ಇದರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿರುವುದು ಸಂವಿಧಾನದ 19(1)(ಎ) ವಿಧಿಯಡಿ ಪ್ರತಿಭಟಿಸುವ ಹಕ್ಕಿನ ಉಲ್ಲಂಘನೆಯಾಗಿದೆ. ಯಾವುದೇ ಕ್ರಿಮಿನಲ್ ಉದ್ದೇಶವಿಲ್ಲದೆ ಶಾಂತಿಯುತವಾಗಿ ನಡೆಸಿದ ರಾಜಕೀಯ ಪ್ರತಿಭಟನೆಯನ್ನು ದಂಡದ ನಿಬಂಧನೆಗಳನ್ನು ಬಳಸಿ ನಿಯಂತ್ರಿಸುವುದು ಸರಿಯಲ್ಲ ಎಂದು ಕಪಿಲ್ ಸಿಬಲ್ ವಾದ ಮಂಡನೆ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ರಾಜಕೀಯ ಪಕ್ಷಗಳ ಪ್ರತಿಭಟನೆ ಎಂದ ಕೂಡಲೆ ಕೇಸ್ ವಜಾ ಮಾಡಬೇಕೇ ಏಂದು ಪ್ರಶ್ನಿಸಿತು. ಜತೆಗೆ, ನೀವು ಪ್ರತಿಭಟನೆಗೆ ಅನುಮತಿ ಪಡೆದಿದಿದ್ದಿರೇ ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಸಿಬಲ್, ಪ್ರತಿಭಟಿಸುವುದು ಮೂಲಭೂತ ಹಕ್ಕು. ಪ್ರತಿಭಟಿಸುವುದು ಅಪರಾಧವಲ್ಲ ಎಂದು ವಾದ ಮಂಡಿಸಿದರು.

ಇದನ್ನೂ ಓದಿ: ಹೈಕೋರ್ಟ್​ನಿಂದ 10 ಸಾವಿರ ದಂಡ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಿಎಂ ಸಿದ್ದರಾಮಯ್ಯ

ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ನಡೆದಿದ್ದ ಪ್ರತಿಭಟನೆ

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ, ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಅವರ ರಾಜಿನಾಮೆ ಆಗ್ರಹಿಸಿ 2022ರ ಏಪ್ರಿಲ್ 14 ರಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಸಿದ್ದರಾಮಯ್ಯ, ಸಚಿವ ಎಂಬಿ ಪಾಟೀಲ್​ ಸೇರಿದಂತೆ ಕಾಂಗ್ರೆಸ್​ನ ನಾಯಕರು ಮತ್ತು ಕಾರ್ಯಕರ್ತರು ಬೃಹತ್​ ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಸ್ತೆ ತಡೆಯಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಾಹನ ಸಾವರರು ಪರದಾಡುವಂತಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:17 pm, Mon, 19 February 24

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ