ಕ್ರೀಡಾ ಸಾಧಕರಿಗೆ ನೇಮಕಾತಿಯಲ್ಲಿದ್ದ ಶೇ 2 ರ ಮೀಸಲಾತಿಗೆ ತಾತ್ಕಾಲಿಕ ತಡೆ: ಸರ್ಕಾರ ಆದೇಶ

ಸಿವಿಲ್ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ನೀಡಲಾಗುತ್ತಿರುವ ಶೇ 2 ರ ಮೀಸಲಾತಿಗೆ ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ತಡೆಯಾಜ್ಞೆ ನೀಡಿದೆ. ಇದಕ್ಕೆ ಕಾರಣವೇನು ಎಂಬುದನ್ನೂ ತಿಳಿಸಿದೆ. ಮೀಸಲಾತಿಗೆ ಸರ್ಕಾರ ತಡೆಯೊಡ್ಡಿದ್ದೇಕೆ? ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲೇನಿದೆ ಎಂಬ ವಿವರಗಳು ಇಲ್ಲಿವೆ.

ಕ್ರೀಡಾ ಸಾಧಕರಿಗೆ ನೇಮಕಾತಿಯಲ್ಲಿದ್ದ ಶೇ 2 ರ ಮೀಸಲಾತಿಗೆ ತಾತ್ಕಾಲಿಕ ತಡೆ: ಸರ್ಕಾರ ಆದೇಶ
ಕ್ರೀಡಾ ಸಾಧಕರಿಗೆ ನೇಮಕಾತಿಯಲ್ಲಿದ್ದ ಶೇ 2 ರ ಮೀಸಲಾತಿಗೆ ತಾತ್ಕಾಲಿಕ ತಡೆ
Edited By:

Updated on: Dec 05, 2024 | 11:13 AM

ಬೆಂಗಳೂರು, ಡಿಸೆಂಬರ್ 5: ಮಹತ್ವದ ಬೆಳವಣಿಗೆಯೊಂದರಲ್ಲಿ, ಕ್ರೀಡಾ ಸಾಧಕರಿಗೆ ನೇಮಕಾತಿಯಲ್ಲಿ ನೀಡಲಾಗುತ್ತಿರುವ ಶೇ 2 ರ ಮೀಸಲಾತಿಗೆ ರಾಜ್ಯ ಸರ್ಕಾರ ತಾತ್ಕಾಲಿಕ ತಡೆಯೊಡ್ಡಿದೆ. ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಈ ಮೀಸಲಾತಿ ನೀಡಲಾಗುತ್ತಿತ್ತು. ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮ 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿರುವುದನ್ನು ಪುನರ್ ಪರಿಶೀಲಿಸುತ್ತಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಕ್ರೀಡಾ ಸಾಧಕರಿಗೆ ಶೇ 2 ರ ಮೀಸಲಾತಿ ನೀಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದೀಗ ತಾತ್ಕಾಲಿಕ ತಡೆ ನೀಡಿ ಸುತ್ತೋಲೆ ಹೊರಡಿಸಿದೆ.

ರಾಜ್ಯ ಸರ್ಕಾರದ ಸುತ್ತೋಲೆಯಲ್ಲೇನಿದೆ?

ದಿನಾಂಕ 18.09.2024 ರ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ 295 ಸೇನೆನಿ 2023ರಲ್ಲಿ ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿ ಸದರಿ ನಿಯಮದ ಉಪ-ನಿಯಮ (1) ಖಂಡ (1D) ನಂತರ (1E) ಯನ್ನು ಸೇರ್ವಡೆಗೊಳಿಸಿ, ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ವಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳ ಪ್ರತಿಯೊಂದು ಪ್ರವರ್ಗದಿಂದಲೂ ಎಲ್ಲಾ ಇಲಾಖೆಗಳ ಮಂಜೂರಾದ ವೃ೦ದ ಬಲದಲ್ಲಿ ಶೇಕಡ 2 ರಷ್ಟು ಹುದ್ದೆಗಳನ್ನು ಕ್ರೀಡಾ ಸಾಧಕರಿಗೆ ಮೀಸಲಿರಿಸಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಆದರೆ, ಸರ್ಕಾರವು ಸೆಪ್ಟೆಂಬರ್ 18 ರ ಅಧಿಸೂಚನೆಯನ್ವಯ ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿರುವುದನ್ನು ಪುನರ್ ಪರಿಶೀಲಿಸಲಾಗುತ್ತಿದೆ. ಆದುದರಿಂದ, ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇಕಡ 2 ರಷ್ಟು ಹುದ್ದೆಗಳನ್ನು ಮೀಸಲಿರಿಸಿ ಹೊರಡಿಸಲಾಗಿರುವ ದಿನಾಂಕ 18.09.2024ರ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆಹಿಡಿಯಲಾಗಿದೆ ಎಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಈ ಮೂಲಕ ಸೂಚಿಸಲಾಗಿದೆ ಎಂದು ಸುತ್ತೋಲೆಯಲ್ಲಿ ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಮಹಿಳೆಯರಿಗೆ ಉಚಿತ ಫ್ಯಾಶನ್ ಡಿಸೈನಿಂಗ್​ ಮತ್ತು ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
Loading...
Unable to load recommendations.
Follow Us