
ಬಾಗಲಕೋಟೆ: ಬಾದಾಮಿ ತಾಲೂಕಿನ ಕೊಂಕಣಕೊಪ್ಪ ಗ್ರಾಮದಲ್ಲಿ ವಿದೇಶಿ ಪ್ರವಾಸಿಗನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳನ್ನ ಕೆರೂರು ಪೊಲೀಸರು ಬಂಧಿಸಿದ್ದಾರೆ.
ನ.18 ರಂದು ಪಾನಮತ್ತನಾಗಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ್ದ ಎಂಬ ಆರೋಪದ ಮೇಲೆ ಆಸ್ಟ್ರೇಲಿಯಾದ ವಿಲಿಯಂ ಕೈರನ್ ಜೇಮ್ಸ್ಗೆ ಜನರು ಹಿಗ್ಗಾಮುಗ್ಗ ಥಳಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ವಿಲಿಯಂ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ. ಘಟನೆ ಸಂಬಂಧ ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.