ಹಾಸನ ಜಿಲ್ಲೆಯಲ್ಲಿ 10 ಶಿಕ್ಷಕರಿಗೆ ಕೊರೊನಾ.. 10 ಶಾಲೆ ಲಾಕ್​ಡೌನ್​: ಪೋಷಕರಲ್ಲಿ ಹೆಚ್ಚಿದ ಆತಂಕ

|

Updated on: Jan 06, 2021 | 11:56 AM

ಶಾಲೆ ಪ್ರಾರಂಭವಾದ ಬಳಿಕ ಏಳು ಶಿಕ್ಷಕರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಪ್ರಾಥಮಿಕ ಶಾಲೆಯ 7 ಮಂದಿ ಮತ್ತು ಪ್ರೌಢಶಾಲೆಯ 3 ಮಂದಿ‌ ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಆಗಿದೆ. ಶಾಲೆ ಆರಂಭಕ್ಕೂ ಮುನ್ನ 3 ಮಂದಿ ಶಿಕ್ಷಕರಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು.

ಹಾಸನ ಜಿಲ್ಲೆಯಲ್ಲಿ 10 ಶಿಕ್ಷಕರಿಗೆ ಕೊರೊನಾ.. 10 ಶಾಲೆ ಲಾಕ್​ಡೌನ್​: ಪೋಷಕರಲ್ಲಿ ಹೆಚ್ಚಿದ ಆತಂಕ
ಸಾಂದರ್ಭೀಕ ಚಿತ್ರ
Follow us on

ಹಾಸನ: ಜಿಲ್ಲೆಯಲ್ಲಿ 10 ಮಂದಿ ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಶಿಕ್ಷಕರಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಜಿಲ್ಲೆಯ ಹತ್ತು ಶಾಲೆಗಳನ್ನು ಲಾಕ್​ಡೌನ್​ ಮಾಡಲಾಗಿದೆ.

ಹಾಸನ ಜಿಲ್ಲೆಯ ಡಿಡಿಪಿಐ ಪ್ರಕಾಶ್ ಟಿವಿ9 ಗೆ ಮಾಹಿತಿ ನೀಡಿದ್ದು, ಶಾಲೆ ಪ್ರಾರಂಭವಾದ ಬಳಿಕ ಏಳು ಶಿಕ್ಷಕರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಪ್ರಾಥಮಿಕ ಶಾಲೆಯ 7 ಮಂದಿ ಮತ್ತು ಪ್ರೌಢಶಾಲೆಯ 3 ಮಂದಿ‌ ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಆಗಿದೆ. ಶಾಲೆ ಆರಂಭಕ್ಕೂ ಮುನ್ನ 3 ಮಂದಿ ಶಿಕ್ಷಕರಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ 3 ಮಂದಿ ಶಿಕ್ಷಕರು ಶಾಲೆಗೆ ಹಾಜರಾಗಿರಲಿಲ್ಲಾ.

ಶಾಲೆ ಆರಂಭವಾದ ಬಳಿಕ ಎರಡು ದಿನಗಳಿಂದ 7 ಮಂದಿ ಶಿಕ್ಷಕರಿಗೆ ಕೊರೊನಾ ಪಾಸಿಟಿವ್​ ಆಗಿರುವುದರಿಂದ ಸಂಕಷ್ಟ ಎದುರಾಗಿದೆ. ಚನ್ನರಾಯಪಟ್ಟಣ ತಾಲೂಕಿನ 3, ಹಾಸನ ತಾಲೂಕಿನ 2 ಹಾಗೂ ಹೊಳೆನರಸೀಪುರ ತಾಲೂಕಿನ 2 ಶಿಕ್ಷಕರಿಗೆ ಸೋಂಕು ತಗುಲಿದೆ. ಹೀಗಾಗಿ ಹೊಳೆನರಸೀಪುರ, ಚನ್ನರಾಯಪಟ್ಟಣ, ಹಾಸನ ತಾಲೂಕಿನ 7 ಶಾಲೆಗಳಿಗೆ ಶಿಕ್ಷಣ ಇಲಾಖೆ ರಜೆ ನೀಡಿ ಆದೇಶ ಹೊರಡಿಸಿದೆ. ಮುಂದಿನ ಮೂರು ದಿನ ರಜೆ ನೀಡಿ ಬಳಿಕ ಪರಿಸ್ಥಿತಿ ನೋಡಿಕೊಂಡು ಶಾಲೆ ತೆರೆಯಲು ನಿರ್ದಾರ ಮಾಡಲಾಗಿದೆ. ಶಿಕ್ಷಕರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.

ಒಂದೇ ಶಾಲೆಯ ಇಬ್ಬರು ಶಿಕ್ಷಕರಿಗೆ ಕೊರೊನಾ ಪಾಸಿಟಿವ್: ಜ.8ರವರೆಗೆ ಶಾಲೆ ಬಂದ್