AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮಾಲೀಕರು, ಬಾಡಿಗೆದಾರರು ಆತಂಕ ಪಡಬೇಕಾಗಿಲ್ಲ: ಗೃಹ ಜ್ಯೋತಿ ಬಗ್ಗೆ ಬೆಸ್ಕಾಂ ನೀಡಿದ ಮಾಹಿತಿ ಹೀಗಿದೆ

ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿ ಪರಿಶೀಲನೆ ಕಾರ್ಯ ಜುಲೈ 1ರಿಂದ ಆರಂಭಗೊಂಡಿದ್ದು, ಎಸ್ಕಾಂಗಳ ಸಿಬ್ಬಂದಿಯೇ ಮನೆ ಮನೆಗೆ ತೆರಳಿ ಮಾಹಿತಿ ಪಡೆಯಲಿದ್ದಾರೆ. ಬಾಡಿಗೆದಾರರು ಆತಂಕ ಪಡಬೇಕಾಗಿಲ್ಲ. ಗೃಹ ಜ್ಯೋತಿ ಯೋಜನೆ ಬಗ್ಗೆ ಏನೇನು ಮಾಡಬೇಕು ಎನ್ನುವುದನ್ನು ಫಲಾನುಭವಿಗಳಿಗೆ ಬೆಸ್ಕಾಂ ಮಾಹಿತಿ ನೀಡಿದ್ದು, ಅದು ಈ ಕೆಳಗಿನಂತಿದೆ.

ಮನೆ ಮಾಲೀಕರು, ಬಾಡಿಗೆದಾರರು ಆತಂಕ ಪಡಬೇಕಾಗಿಲ್ಲ: ಗೃಹ ಜ್ಯೋತಿ ಬಗ್ಗೆ ಬೆಸ್ಕಾಂ ನೀಡಿದ ಮಾಹಿತಿ ಹೀಗಿದೆ
Gruha Jyothi
ರಮೇಶ್ ಬಿ. ಜವಳಗೇರಾ
|

Updated on: Jul 08, 2026 | 4:47 PM

Share

ಮುಖ್ಯಾಂಶಗಳು

  • ಗೃಹ ಜ್ಯೋತಿ ಯೋಜನೆಯ ಪುನರ್ ಪರಿಶೀಲನಾ ಕಾರ್ಯ
  • ಮನೆ ಮಾಲೀಕರು, ಬಾಡಿಗೆದಾರರು ಆತಂಕ ಪಡಬೇಕಾಗಿಲ್ಲ
  • ಗೃಹ ಜ್ಯೋತಿ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದ ಬೆಸ್ಕಾಂ

ಬೆಂಗಳೂರು, (ಜುಲೈ 8): 2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹ ಜ್ಯೋತಿ ಯೋಜನೆಯ (Gruha jyothi scheme) ಪುನರ್ ಪರಿಶೀಲನಾ ಕಾರ್ಯ ನಡೆಯುತ್ತಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಬೆಸ್ಕಾಂ (bescom)  ಮಾಹಿತಿ ನೀಡಿದೆ. ಅದರಲ್ಲೂ ಮುಖ್ಯವಾಗೊ ಬಾಡಿಗೆದಾರರ ಗೊಂದಲಗಳಿಗೆ ಸ್ಪಷ್ಟನೆ ನೀಡಿದೆ.  ಎಸ್ಕಾಂಗಳ ಮೀಟರ್ ರೀಡರ್ ಗಳು ಹಾಗೂ ಎಸ್ಕಾಂ ಸಿಬ್ಬಂದಿ ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆ ಪರಿಶೀಲನೆ ನಡೆಸಿ ಅವರ ಮಾಹಿತಿ ಸಂಗ್ರಹಿಸಿ, ಘೋಷಣಾ ಪತ್ರ ಮೂಲಕ ಸಿಬ್ಬಂದಿಯೇ ಅರ್ಜಿ ಭರ್ತಿ ಮಾಡುವ ಪ್ರಕ್ರಿಯೆನ್ನು ಪೂರ್ಣಗೊಳಿಸಲಿದ್ದಾರೆ. ಹೀಗಾಗಿ ಎಸ್ಕಾಂ ಸಿಬ್ಬಂದಿ ಮನೆ-ಮನೆ ಭೇಟಿ ಸಂದರ್ಭದಲ್ಲಿ ಈ ಕೆಳಗಿನ ದಾಖಲೆಗಳನ್ನು ಸಿದ್ದವಿಟ್ಟುಕೊಂಡು ಸಿಬ್ಬಂದಿಗೆ ತೋರಿಸಲು ಬೆಸ್ಕಾಂ ವಿನಂತಿಸಿದೆ.

ಬಾಡಿಗೆದಾರರು ಆತಂಕಪಡಬೇಕಿಲ್ಲ

ಬೆಸ್ಕಾಂ ಮೀಟರ್ ರೀಡರ್ ಹಾಗೂ ಸಿಬ್ಬಂದಿ ಫಲಾನುಭವಿಗಳ ಮನೆ ಮನೆ ಸಮೀಕ್ಷೆ ಕಾರ್ಯ ನಡೆಸುವ ವೇಳೆ ಹಳೆ ಬಾಡಿಗೆದರರ ಆಧಾರ್ ವಿವರ ತೆಗೆದು ಹಾಕಿ ಈಗಿರುವ ಬಾಡಿಗೆದಾರರ ಆಧಾರ್ ವಿವರಗಳನ್ನು ಅಪ್ಡೇಟ್ ಮಾಡಿಕೊಳ್ಳಲಾಗುವುದು, ಹಾಗಾಗಿ ಯೋಜನೆ ಸ್ಥಗಿತಗೊಳ್ಳಲಿದೆ ಎಂಬ ಆತಂಕ ಬೇಡ. ಈ ಹಿಂದೆ ಇದ್ದ ಬಾಡಿಗೆದಾರರ ಆಧಾರ್ ಮಾಹಿತಿಯಿಂದಾಗಿ ತಮಗೆ ಯೋಜನೆ ಸ್ಥಗಿತಗೊಳ್ಳಲಿದೆಯೇ ಎಂಬ ಆತಂಕ ಈಗಿರುವ ಬಾಡಿಗೆದಾರರಿಗೆ ಬಂದಿರಿರುವ ಹಿನ್ನೆಲೆಯಲ್ಲಿ ಬೆಸ್ಕಾಂ ಈ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: ಗೃಹ ಜ್ಯೋತಿ ಯೋಜನೆ: ಮೊಬೈಲ್ ಆಪ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? 5 ಹಂತಗಳು ಇಲ್ಲಿದೆ ನೋಡಿ

ಯಾವೆಲ್ಲಾ ದಾಖಲೆಗಳು ತೋರಿಸಬೇಕು?

ಆಧಾರ್ ಕಾರ್ಡ್, ಫಲಾನುಭವಿಯ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ , ಪ್ಯಾನ್ ಕಾರ್ಡ್, ಬಾಡಿಗೆ ಒಪ್ಪಂದದ ಪತ್ರಗಳು (ಅನ್ವಯಿಸುವಲ್ಲಿ ಮಾತ್ರ), ರೇಷನ್ ಕಾರ್ಡ್ ತೋರಿಸಲು ಕೋರಲಾಗಿದೆ. ಈ ಪ್ರಕ್ರಿಯೆಗೆ ಮೀಟರ್ ರೀಡರ್ ಮೂಲಕ ಸ್ಥಳದಲ್ಲೇ ಪರಿಶೀಲನೆ ಮಾಡುವುದು ಏಕೈಕ ಮಾರ್ಗವಾಗಿದ್ದು, ಗ್ರಾಹಕರು ಮತ್ತು ಫಲಾನುಭವಿಗಳು ಮೀಟರ್ ರೀಡರ್ ಗಳಿಗೆ ಸಂಪೂರ್ಣ ಸಹಕಾರ ನೀಡಿ, ಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಇಂಧನ ಇಲಾಖೆ ಮನವಿ ಮಾಡಿದೆ. ರಾಜ್ಯದ ಐದು ಎಸ್ಕಾಂಗಳಾದ ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಹಾಗೂ ಸೆಸ್ಕ್ ಗಳ ವ್ಯಾಪ್ತಿಯಲ್ಲಿ ಪರಿಶೀಲನಾ ಕಾರ್ಯ ನಡೆಯಲಿದೆ.

ಪ್ರವರ್ಗ ಮಾಹಿತಿ ಕಡ್ಡಾಯವಲ್ಲ

ಗೃಹಜ್ಯೋತಿ ಫಲಾನುಭವಿಗಳ ಮಾಹಿತಿ ಪರಿಶೀಲನೆ ವೇಳೆ ಫಲಾನುಭವಿಯ ಪ್ರವರ್ಗದ (ಜಾತಿ ಪ್ರಮಾಣಪತ್ರ) ಸಂಬಂಧಿಸಿದ ಮಾಹಿತಿ ಕೇವಲ ಐಚ್ಛಿಕವಾಗಿದೆ. ಫಲಾನುಭವಿಗಳ ಜಾತಿ ಪ್ರಮಾಣಪತ್ರಕ್ಕೆ ಸಂಬಂಧಿಸಿದಂತೆ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ಪ್ರಶ್ನೆಗೆ ಸಂಬಂಧಿಸಿದಂತೆ ಬೆಸ್ಕಾಂ ಈ ಸ್ಪಷ್ಟನೆ ನೀಡಿದೆ.

ಫಲಾನುಭವಿಗಳಿಗೆ ಜಾತಿ ಮಾಹಿತಿ ನೀಡಲು ಇಷ್ಟವಿಲ್ಲದಿದ್ದರೆ ಮೊಬೈಲ್ ಅಪ್ಲಿಕೇಷನ್ ನಲ್ಲಿರುವ ʼಮಾಹಿತಿ ನೀಡಲು ನಿರಾಕರಣೆʼ ಎಂಬ ಆಯ್ಕೆಯನ್ನು ನಮೂದಿಸಲು ಸಿಬ್ಬಂದಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಹೆಚ್ಚಿನ ಮಾಹಿತಿ ಅಥವಾ ಗೊಂದಲಗಳಿದ್ದಲ್ಲಿ ಗ್ರಾಹಕರು ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಬಹುದು.

ಸಹಾಯವಾಣಿ ಸಂಖ್ಯೆ: 9480816111, 9480816112, 9480816113, 9480816114 (ಸಹಾಯವಾಣಿಯು ಪ್ರತಿದಿನ ಬೆಳಗ್ಗೆ 6:00 ಗಂಟೆಯಿಂದ ರಾತ್ರಿ 10:00 ಗಂಟೆಯವರೆಗೆ ಲಭ್ಯವಿರುತ್ತದೆ).

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ: ಕುಸಿದು ಬೀಳುತ್ತಿರುವ ಬಂಡೆಗಲ್ಲುಗಳು
ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ: ಕುಸಿದು ಬೀಳುತ್ತಿರುವ ಬಂಡೆಗಲ್ಲುಗಳು
ಇಂಡೋನೇಷ್ಯಾದ ಭವ್ಯ 'ಪ್ರಂಬಾನನ್' ಶಿವ ದೇವಾಲಯಕ್ಕೆ ಪಿಎಂ ಮೋದಿ ಭೇಟಿ
ಇಂಡೋನೇಷ್ಯಾದ ಭವ್ಯ 'ಪ್ರಂಬಾನನ್' ಶಿವ ದೇವಾಲಯಕ್ಕೆ ಪಿಎಂ ಮೋದಿ ಭೇಟಿ