ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರದಿದ್ರೂ ಸಡಿಲಿಕೆ, ಹೆಚ್ಚಾಯ್ತು ಆತಂಕ

ಬೆಂಗಳೂರು: ಆರೋಗ್ಯ ಇಲಾಖೆಗೆ ಫುಲ್ ಟೆನ್ಶನ್ ಶುರುವಾಗಿದೆ. ಯಾಕಂದ್ರೆ ರಾಜ್ಯ ಸರ್ಕಾರ ಮೂರನೇ ಹಂತದ ಲಾಕ್​ಡೌನ್ ಸಡಲಿಕೆ ಮಾಡಿದೆ. ಇದರಿಂದ ಜನರು ರಸ್ತೆಗಿಳೀತಿದ್ದಾರೆ. ಕೊರೊನಾ ಭೀತಿ ಇದ್ದರೂ ತಿರುಗಾಡುತ್ತಿದ್ದಾರೆ. ಮದ್ಯದಂಗಡಿಗಳ ಮುಂದೆ ಅಂಗಡಿ ಮುಗ್ಗಟ್ಟುಗಳ ಮುಂದೆ ಸಾಮಾಜಿಕ ಅಂತರ ಮರೆತು ಖರೀದಿಗೆ ಮುಂದಾಗಿದ್ದಾರೆ. ಒಬ್ಬ ಕೊರೊನಾ ಸೋಂಕಿತನಿಂದ 30 ಜನರಿಗೆ ಸೋಂಕು ಹರಡುತ್ತೆ. ಹೀಗಾಗಿ ಕೊರೊನಾ ಸೋಂಕಿತರನ್ನ ಪತ್ತೆಹಚ್ಚಲು ಹರಸಾಹಸ ಮಾಡಬೇಕಾಗುತ್ತೆ. ಇನ್ನು ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರದಿದ್ರೂ ಲಾಕ್​ಡೌನ್ ಸಡಿಲಿಕೆ ಮಾಡಲಾಗಿದೆ. ಇದರಿಂದ ಸೋಂಕು ಸಮುದಾಯಕ್ಕೆ […]

ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರದಿದ್ರೂ ಸಡಿಲಿಕೆ, ಹೆಚ್ಚಾಯ್ತು ಆತಂಕ
Follow us
ಸಾಧು ಶ್ರೀನಾಥ್​
|

Updated on: May 05, 2020 | 10:07 AM

ಬೆಂಗಳೂರು: ಆರೋಗ್ಯ ಇಲಾಖೆಗೆ ಫುಲ್ ಟೆನ್ಶನ್ ಶುರುವಾಗಿದೆ. ಯಾಕಂದ್ರೆ ರಾಜ್ಯ ಸರ್ಕಾರ ಮೂರನೇ ಹಂತದ ಲಾಕ್​ಡೌನ್ ಸಡಲಿಕೆ ಮಾಡಿದೆ. ಇದರಿಂದ ಜನರು ರಸ್ತೆಗಿಳೀತಿದ್ದಾರೆ. ಕೊರೊನಾ ಭೀತಿ ಇದ್ದರೂ ತಿರುಗಾಡುತ್ತಿದ್ದಾರೆ.

ಮದ್ಯದಂಗಡಿಗಳ ಮುಂದೆ ಅಂಗಡಿ ಮುಗ್ಗಟ್ಟುಗಳ ಮುಂದೆ ಸಾಮಾಜಿಕ ಅಂತರ ಮರೆತು ಖರೀದಿಗೆ ಮುಂದಾಗಿದ್ದಾರೆ. ಒಬ್ಬ ಕೊರೊನಾ ಸೋಂಕಿತನಿಂದ 30 ಜನರಿಗೆ ಸೋಂಕು ಹರಡುತ್ತೆ. ಹೀಗಾಗಿ ಕೊರೊನಾ ಸೋಂಕಿತರನ್ನ ಪತ್ತೆಹಚ್ಚಲು ಹರಸಾಹಸ ಮಾಡಬೇಕಾಗುತ್ತೆ.

ಇನ್ನು ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರದಿದ್ರೂ ಲಾಕ್​ಡೌನ್ ಸಡಿಲಿಕೆ ಮಾಡಲಾಗಿದೆ. ಇದರಿಂದ ಸೋಂಕು ಸಮುದಾಯಕ್ಕೆ ಹರಡುತ್ತೇನೋ ಅನ್ನೋ ಭೀತಿ ಶುರುವಾಗಿದೆ. ಸಮುದಾಯಕ್ಕೆ ಹರಡಿದ್ರೆ ಮೆಡಿಕಲ್ ವಾರಿಯರ್ಸ್ ಮೇಲೆ ತೀವ್ರ ಒತ್ತಡ ಬೀಳಲಿದೆ.

ಈಗಾಗಲೇ ಕಳೆದೆರೆಡು ತಿಂಗಳಿಂದ ಹೆಲ್ತ್ ವಾರಿಯರ್ಸ್ ರೆಸ್ಟ್ ಮಾಡದೆ ಕೆಲಸ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವೈದ್ಯರು, ನರ್ಸ್​ಗಳ ಮೇಲೆ ಹೆಚ್ಚು ಒತ್ತಡ ಬಿದ್ರೆ ಸೋಂಕಿತರನ್ನ ಕಂಟ್ರೋಲ್ ಮಾಡೋದು ಕಷ್ಟ. ಸೋಂಕಿತರು ಹೆಚ್ಚಾದ್ರೆ ಸಾವು ನೋವುಗಳು ಕೂಡ ಹೆಚ್ಚಾಗುವ ಸಾಧ್ಯತೆ ಇದೆ.

ಇದೇ ರೀತಿ ಸಾಮಾಜಿಕ ಅಂತರ ಮರೆತು ಬೇಕಾಬಿಟ್ಟಿ ಮಾಸ್ಕ್ ಧರಿಸದೆ ಓಡಾಡಿದ್ರೆ ಅಪಾಯ ಕಟ್ಟಿಟ್ಟಬುತ್ತಿ. ಹೀಗಾಗಿ ಜನ ಯಾಮಾರಬೇಡಿ ಕೊರೊನಾ ಇನ್ನು ಮಾಯವಾಗಿಲ್ಲ ಎಂದು ಆರೋಗ್ಯ ಇಲಾಖೆಯ ಹಿರಿಯ ವೈದ್ಯರು ಎಚ್ಚರಿಸಿದ್ದಾರೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ