
ಬೆಂಗಳೂರು, ಮೇ 12: ಭಾರತವನ್ನ ಎದುರು ಹಾಕಿಕೊಂಡು ಬದುಕೋದು ಕಷ್ಟ ಅನ್ನೋದನ್ನ ಅರಿತ ಪಾಕಿಸ್ತಾನ, ಚೀನಾ, ಅಮೆರಿಕದ ಮೊರೆ ಹೋಗಿತ್ತು. ಭಾರತದ ದಾಳಿಯಿಂದ ನಮ್ಮನ್ನ ರಕ್ಷಿಸಿ ಅಂತಾ ಅಂಗಲಾಚಿ ಬೇಡಿಕೊಂಡಿತ್ತು. ಬಳಿಕ ಪಾಕಿಸ್ತಾನ-ಭಾರತ (India and Pak) ಕದನ ವಿರಾಮ ಘೋಷಣೆ ಮಾಡಲಾಗಿದೆ. ಆದರೂ ಉದ್ವಿಗ್ನ ಪರಿಸ್ಥಿತಿ ಇದೆ. ಹಾಗಾಗಿ ಜಮ್ಮು ಮತ್ತು ಕಾಶ್ಮೀರದ ಶೇರ್-ಇ-ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕದ 13 ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ವಾಪಸ್ ಕರೆತರಲಾಗಿದೆ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ (HD Kumaraswamy) ತಿಳಿಸಿದ್ದಾರೆ.
ಭಾರತ-ಪಾಕಿಸ್ತಾನದ ನಡುವೆ ಮಧ್ಯಸ್ಥಿಕೆಗೆ ರೆಡಿ ಎಂದಿದ್ದ ಟ್ರಂಪ್ ಕೊನೆಗೂ ಪಾಕ್ಗೆ ಬುದ್ಧಿ ಹೇಳಿದ್ದಾರೆ. ಭಾರತ-ಪಾಕಿಸ್ತಾನದ ನಡುವಿನ ಕದನಕ್ಕೆ ಬ್ರೇಕ್ ಬಿದ್ದಿದೆ ಎಂದು ಟ್ವೀಟ್ ಮೂಲಕ ಘೋಷಿಸಿದ್ದರು. ಆದರೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ದಾಳಿ ಮಾಡಿತ್ತು. ಹೀಗಾಗಿ ಪರಿಸ್ಥಿತಿಯನ್ನು ಅರಿತ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕಾಶ್ಮೀರದಲ್ಲಿ ಓದುತ್ತಿದ್ದ ಕರ್ನಾಟಕದ 13 ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಕರೆತರುವಲ್ಲಿ ನೆರವಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಶೇರ್-ಇ-ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕದ 13 ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ವಾಪಸ್ ಕರೆತರಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಕ್ಷೇಮವಾಗಿ ನವದೆಹಲಿಗೆ ಮುಟ್ಟಿದ್ದು, ನಾಳೆ ಸಂಜೆ ಬೆಂಗಳೂರು ತಲುಪಲಿದ್ದಾರೆ.
ಇಡೀ ರಾಷ್ಟ್ರವು ಸವಾಲಿನ… pic.twitter.com/4sdQhnhRst
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 11, 2025
ಈ ಬಗ್ಗೆ ಸ್ವತಃ ಟ್ವೀಟ್ ಮಾಡಿಕೊಂಡಿರುವ ಸಚಿವ ಹೆಚ್ಡಿ ಕುಮಾರಸ್ವಾಮಿ, ಜಮ್ಮು ಮತ್ತು ಕಾಶ್ಮೀರದ ಶೇರ್-ಇ-ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕದ 13 ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ವಾಪಸ್ ಕರೆತರಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಕ್ಷೇಮವಾಗಿ ನವದೆಹಲಿಗೆ ಮುಟ್ಟಿದ್ದು, ಇಂದು ಸಂಜೆ ಬೆಂಗಳೂರು ತಲುಪಲಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಭಾರತ-ಪಾಕಿಸ್ತಾನ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ ವಿಡಿಯೋ ಮೂಲಕ ಕಮಿಷನರ್ ದಯಾನಂದ್ ಎಚ್ಚರಿಕೆ!
ಇಡೀ ರಾಷ್ಟ್ರವು ಸವಾಲಿನ ಪರಿಸ್ಥಿತಿಯಲ್ಲಿರುವಾಗಲೂ ಗೌರವಾನ್ವಿತ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ
ಅವರ ಸ್ಪಷ್ಟ ಮಾರ್ಗದರ್ಶನ ಮತ್ತು ದಿಟ್ಟ ಕ್ರಮಗಳಿಂದ ಈ ಕಾರ್ಯಾಚರಣೆ ಸಾಧ್ಯವಾಗಿದೆ. ಶ್ರೀನಗರದಿಂದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸರಕಾರದ ಅಧಿಕಾರಿಗಳು, ಭದ್ರತಾ ಸಂಸ್ಥೆಗಳು, ರೈಲ್ವೆ ಸಿಬ್ಬಂದಿ ಮತ್ತು ಕೈಗಾರಿಕಾ ಸಚಿವಾಲಯದ ಅಧಿಕಾರಿಗಳು ಶ್ರಮಿಸಿದ್ದು, ಎಲ್ಲರನ್ನೂ ನಾನು ಶ್ಲಾಘಿಸುತ್ತೇನೆ. ಜೈ ಹಿಂದ್ ಎಂದು ಹೇಳಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:42 am, Mon, 12 May 25