TET-2021: ಶಿಕ್ಷಕರ ಅರ್ಹತಾ ಪರೀಕ್ಷೆಗೆ ದಿನಾಂಕ ಘೋಷಣೆ; ಅಗಸ್ಟ್ 22ರಂದು ಪರೀಕ್ಷೆ

| Updated By: guruganesh bhat

Updated on: Jul 01, 2021 | 6:36 PM

ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್​ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇಂದಿನಿಂದಲೇ ಅರ್ಜಿ ಸಲ್ಲಿಸಬಹುದಾಗಿದ್ದು ಜುಲೈ 20 ಕೊನೆಯ ದಿನವಾಗಿದೆ. ಅಗಸ್ಟ್ 22ರಂದು ಬೆಳಗ್ಗೆ 9.30ರಿಂದ 12 ಗಂಟೆ ಮತ್ತು ಮಧ್ಯಾಹ್ನ 2 ಗಂಟೆಯಿಂದ 4.30ರವರೆಗೆ ಪರೀಕ್ಷೆಗಳು ನಡೆಯಲಿವೆ. 

TET-2021: ಶಿಕ್ಷಕರ ಅರ್ಹತಾ ಪರೀಕ್ಷೆಗೆ ದಿನಾಂಕ ಘೋಷಣೆ; ಅಗಸ್ಟ್ 22ರಂದು ಪರೀಕ್ಷೆ
ಸಾಂಕೇತಿಕ ಚಿತ್ರ
Follow us on

ಬೆಂಗಳೂರು: ಒಂದರಿಂದ ಎಂಟನೇ ತರಗತಿ ಶಾಲಾ ಶಿಕ್ಷಕರ ನೇಮಕಾತಿ ಅರ್ಹತೆ ಪಡೆಯಲು ಅಗತ್ಯವಾದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2021) ಅಗಸ್ಟ್ 22ರಂದು ನಡೆಯಲಿದೆ ಎಂದು  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಒಂದರಿಂದ ಐದನೇ ತರಗತಿ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಸುವವರು ಪಿಯುಸಿ ಹಾಗೂ ಡಿ.ಇಡಿ., ಉತ್ತೀರ್ಣರಾಗಿರಬೇಕು ಹಾಗೂ ಆರರಿಂದ ಎಂಟನೇ ತರಗತಿ ಶಿಕ್ಷಕರಾಗಲು ಅರ್ಜಿ ಸಲ್ಲಿಸುವವರು ಪದವಿ ಮತ್ತು ಡಿ.ಇಡಿ, ಅಥವಾ ಪದವಿಯೊಂದಿಗೆ ಬಿಇಡಿ ಅಥವಾ ಬಿ.ಎ.ಇಡಿ/ ಬಿ.ಎಸ್.ಸಿ.ಇಡಿಯಲ್ಲಿ ಉತ್ತೀರ್ಣರಾಗಿರಬೇಕು. ಕೊನೆ ವರ್ಷಗಳ ಡಿಇಡಿ,  ಬಿಇಡಿ, ಬಿಎಇಡಿ/ ಬಿಎಸ್ಸಿಇಡಿ ಪರೀಕ್ಷೆಗೆ ಹಾಜರಾಗಿ ಫಲಿತಾಂಶ ನಿರೀಕ್ಷೆಯಲ್ಲಿರುವವರೂ ಸಹ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್​ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇಂದಿನಿಂದಲೇ ಅರ್ಜಿ ಸಲ್ಲಿಸಬಹುದಾಗಿದ್ದು ಜುಲೈ 20 ಕೊನೆಯ ದಿನವಾಗಿದೆ. ಅಗಸ್ಟ್ 22ರಂದು ಬೆಳಗ್ಗೆ 9.30ರಿಂದ 12 ಗಂಟೆ ಮತ್ತು ಮಧ್ಯಾಹ್ನ 2 ಗಂಟೆಯಿಂದ 4.30ರವರೆಗೆ ಪರೀಕ್ಷೆಗಳು ನಡೆಯಲಿವೆ.  ಪತ್ರಿಕೆ 150 ಅಂಕಗಳನ್ನು ಹೊಂದಿರುತ್ತವೆ.  ಪ್ರವೇಶ ಪತ್ರಗಳನ್ನು ದಿನಾಂಕ ಆ. 12ರಿಂದ ಆನ್​ಲೈನ್​ನಲ್ಲಿ ಡೌನ್​ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

www.schooleducation.kar.nic.inನಲ್ಲಿ ಅರ್ಜಿ ಸಲ್ಲಿಸಬಹುದು. ಇಂದಿನಿಂದ ಜುಲೈ 20ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅಗಸ್ಟ್ 12ರಿಂದ ಪ್ರವೇಶ ಪತ್ರ ಡೌನ್‌ಲೋಡ್ ಮಾಡಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ. ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರಮಾಣ ಪತ್ರವು ಜೀವಿತಾವಧಿಯವರೆಗೆ ಮಾನ್ಯತೆ ಹೊಂದಿರುತ್ತದೆ.  ಹೆಚ್ಚಿನ ಸಂಖ್ಯೆಯ ಅರ್ಹ ಅಭ್ಯರ್ಥಿಗಳು ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರಯೋಜನ ಪಡೆದುಕೊಳ್ಳಬೇಕೆಂದು ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ: 

ಉನ್ನತ ಶಿಕ್ಷಣ ಇಲಾಖೆಯಿಂದ 1,500ರಷ್ಟು ಶೈಕ್ಷಣಿಕ ಹುದ್ದೆಗಳಿಗೆ ನೇರ ನೇಮಕಾತಿ; ವಿವರ ಇಲ್ಲಿದೆ

Job Reservation: ಸರ್ಕಾರಿ ಉದ್ಯೋಗದಲ್ಲಿ ಮಂಗಳಮುಖಿಯರಿಗೆ ಮೀಸಲಾತಿ; ಕರ್ನಾಟಕ ಸರ್ಕಾರದಿಂದ ಹೈಕೋರ್ಟ್​ಗೆ ಪ್ರಮಾಣ ಪತ್ರ ಸಲ್ಲಿಕೆ

(TET 2021 Declaration of Teacher Eligibility Test Date Examination on 22 August)