ದಾವಣಗೆರೆಯಲ್ಲಿ ಟಿಇಟಿ ಪ್ರಶ್ನೆ ಪತ್ರಿಕೆ ಲೀಕ್ ಆಗಿತ್ತಾ?
ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಕೆಟಿಜೆ ನಗರದ 17ನೇ ಕ್ರಾಸ್ನ ಮನೆಯೊಂದರಲ್ಲಿ ಟಿಇಟಿ ಪ್ರಶ್ನೆ ಪತ್ರಿಕೆಯ ಬಂಡಲ್ಗಳು ಪತ್ತೆಯಾಗಿವೆ. ಮೇ 26 ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ಟಿಇಟಿ ಪರೀಕ್ಷೆ ನಡೆಸಿತ್ತು. ಇದೀಗ ಬಂಡಲ್ ಗಟ್ಟಲೆ ಪ್ರಶ್ನೆ ಪತ್ರಿಕೆಗಳು ಪತ್ತೆಯಾಗಿವೆ. ಟಿಇಟಿ ಪರೀಕ್ಷೆಗೂ ಮೊದಲೇ ಪ್ರಶ್ನೆ ಪ್ರತ್ರಿಕೆಗಳು ಸೋರಿಕೆಯಾಗಿದ್ವಾ ಎಂಬ ಅನುಮಾನಕ್ಕೆ ಕಾರಣವಾಗಿದೆ. ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಕೆಟಿಜೆ ನಗರ […]
ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ಕೆಟಿಜೆ ನಗರದ 17ನೇ ಕ್ರಾಸ್ನ ಮನೆಯೊಂದರಲ್ಲಿ ಟಿಇಟಿ ಪ್ರಶ್ನೆ ಪತ್ರಿಕೆಯ ಬಂಡಲ್ಗಳು ಪತ್ತೆಯಾಗಿವೆ. ಮೇ 26 ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ಟಿಇಟಿ ಪರೀಕ್ಷೆ ನಡೆಸಿತ್ತು. ಇದೀಗ ಬಂಡಲ್ ಗಟ್ಟಲೆ ಪ್ರಶ್ನೆ ಪತ್ರಿಕೆಗಳು ಪತ್ತೆಯಾಗಿವೆ. ಟಿಇಟಿ ಪರೀಕ್ಷೆಗೂ ಮೊದಲೇ ಪ್ರಶ್ನೆ ಪ್ರತ್ರಿಕೆಗಳು ಸೋರಿಕೆಯಾಗಿದ್ವಾ ಎಂಬ ಅನುಮಾನಕ್ಕೆ ಕಾರಣವಾಗಿದೆ. ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಕೆಟಿಜೆ ನಗರ ಪೊಲೀಸರು ಪ್ರಶ್ನೆ ಪತ್ರಿಕೆಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.