ದಾವಣಗೆರೆಯಲ್ಲಿ ಟಿಇಟಿ ಪ್ರಶ್ನೆ ಪತ್ರಿಕೆ ಲೀಕ್​ ಆಗಿತ್ತಾ?

|

Updated on: Sep 28, 2019 | 4:52 PM

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಕೆಟಿಜೆ ನಗರದ 17ನೇ ಕ್ರಾಸ್​ನ ಮನೆಯೊಂದರಲ್ಲಿ ಟಿಇಟಿ ಪ್ರಶ್ನೆ ಪತ್ರಿಕೆಯ ಬಂಡಲ್​ಗಳು ಪತ್ತೆಯಾಗಿವೆ. ಮೇ 26 ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ಟಿಇಟಿ ಪರೀಕ್ಷೆ ನಡೆಸಿತ್ತು. ಇದೀಗ ಬಂಡಲ್ ಗಟ್ಟಲೆ ಪ್ರಶ್ನೆ ಪತ್ರಿಕೆಗಳು ಪತ್ತೆಯಾಗಿವೆ. ಟಿಇಟಿ ಪರೀಕ್ಷೆಗೂ ಮೊದಲೇ ಪ್ರಶ್ನೆ ಪ್ರತ್ರಿಕೆಗಳು ಸೋರಿಕೆಯಾಗಿದ್ವಾ ಎಂಬ ಅನುಮಾನಕ್ಕೆ ಕಾರಣವಾಗಿದೆ. ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಕೆಟಿಜೆ ನಗರ […]

ದಾವಣಗೆರೆಯಲ್ಲಿ ಟಿಇಟಿ ಪ್ರಶ್ನೆ ಪತ್ರಿಕೆ ಲೀಕ್​ ಆಗಿತ್ತಾ?
Follow us on

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ಕೆಟಿಜೆ ನಗರದ 17ನೇ ಕ್ರಾಸ್​ನ ಮನೆಯೊಂದರಲ್ಲಿ ಟಿಇಟಿ ಪ್ರಶ್ನೆ ಪತ್ರಿಕೆಯ ಬಂಡಲ್​ಗಳು ಪತ್ತೆಯಾಗಿವೆ. ಮೇ 26 ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ಟಿಇಟಿ ಪರೀಕ್ಷೆ ನಡೆಸಿತ್ತು. ಇದೀಗ ಬಂಡಲ್ ಗಟ್ಟಲೆ ಪ್ರಶ್ನೆ ಪತ್ರಿಕೆಗಳು ಪತ್ತೆಯಾಗಿವೆ. ಟಿಇಟಿ ಪರೀಕ್ಷೆಗೂ ಮೊದಲೇ ಪ್ರಶ್ನೆ ಪ್ರತ್ರಿಕೆಗಳು ಸೋರಿಕೆಯಾಗಿದ್ವಾ ಎಂಬ ಅನುಮಾನಕ್ಕೆ ಕಾರಣವಾಗಿದೆ. ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಕೆಟಿಜೆ ನಗರ ಪೊಲೀಸರು ಪ್ರಶ್ನೆ ಪತ್ರಿಕೆಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.