Thawar Chand Gehlot: ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್ ನೇಮಕ

Thawar Chand Gehlot: 84 ವರ್ಷದ ವಜೂಬಾಯಿ ವಾಲಾ ಅವರು (Vajubhai Rudabhai Vala) 2014ರ ಸೆಪ್ಟೆಂಬರ್​ನಲ್ಲಿ ಕರ್ನಾಟಕದ 18ನೆಯ ರಾಜ್ಯಪಾಲರಾಗಿ ನೇಮಕಗೊಂಡಿದ್ದರು. ಇದೀಗ 19ನೇ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್​ ನೇಮಕವಾಗಿದ್ದಾರೆ.

Thawar Chand Gehlot: ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್ ನೇಮಕ
ಕರ್ನಾಟಕದ 19ನೇ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ನೇಮಕ
Follow us
TV9 Web
| Updated By: ganapathi bhat

Updated on:Jul 06, 2021 | 8:38 PM

ಕರ್ನಾಟಕ ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್ (Thawar Chand Gehlot)​ ನೇಮಕವಾಗಿದ್ದಾರೆ. ಹಾಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿರುವ ಥಾವರಚಂದ್ ಗೆಹಲೋತ್ ನೂತನ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ರಾಜ್ಯಪಾಲರ ನೇಮಕ ಮಾಡಲಾಗಿದ್ದು, ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅವರು ಮಂಗಳವಾರ ನೇಮಕಾತಿ ಆದೇಶ ಮಾಡಿದ್ದಾರೆ. ಕೇಂದ್ರ ಸಚಿವ ಸಂಪುಟ ಪುನಾರಚರನೆ ಬೆನ್ನಲ್ಲೇ ನೇಮಕಾತಿಯಾಗಿದೆ. ಈ ಮೂಲಕ ಕರ್ನಾಟಕದ 19ನೇ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್ ಅಧಿಕಾರ ಸ್ವೀಕರಿಸಲಿದ್ದಾರೆ.

ಕರ್ನಾಟಕ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್​ ನೇಮಕವಾಗುವ ಜತೆಗೆ ಒಟ್ಟು 8 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕವಾಗಿದೆ. ಜಾರ್ಖಂಡ್​, ಹರಿಯಾಣ, ಮಿಜೋರಾಂ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಗೋವಾ, ತ್ರಿಪುರಾ ರಾಜ್ಯಗಳಿಗೂ ಹೊಸ ರಾಜ್ಯಪಾಲರು ನೇಮಕವಾಗಿದ್ದಾರೆ. ಮಿಜೋರಾಂಗೆ ಹರಿಬಾಬು ಕಂಭಂಪತಿ, ಮಧ್ಯಪ್ರದೇಶಕ್ಕೆ ಮಂಗೂಭಾಯ್ ಛಗನ್‌ಭಾಯ್ ಪಟೇಲ್, ಹಿಮಾಚಲಪ್ರದೇಶಕ್ಕೆ ರಾಜೇಂದ್ರನ್ ವಿಶ್ವನಾಥ್ ಅರ್ಲೇಕರ್, ಗೋವಾಕ್ಕೆ ಪಿ.ಎಸ್.ಶ್ರೀಧರನ್ ಪಿಳ್ಳೈ, ತ್ರಿಪುರಾಕ್ಕೆ ಸತ್ಯದೇವ್ ನಾರಾಯಣ್ ಆರ್ಯ, ಜಾರ್ಖಂಡ್​ಗೆ ರಮೇಶ್ ಬೈಸ್, ಹರಿಯಾಣಕ್ಕೆ ಬಂಡಾರು ದತ್ತಾತ್ತ್ರೇಯ ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

84 ವರ್ಷದ ವಜೂಬಾಯಿ ವಾಲಾ ಅವರು (Vajubhai Rudabhai Vala) 2014ರ ಸೆಪ್ಟೆಂಬರ್​ನಲ್ಲಿ ಕರ್ನಾಟಕದ 18ನೆಯ ರಾಜ್ಯಪಾಲರಾಗಿ ನೇಮಕಗೊಂಡಿದ್ದರು. ಇದೀಗ 19ನೇ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್​ ನೇಮಕವಾಗಿದ್ದಾರೆ. ಕರ್ನಾಟಕದ ನೂತನ ರಾಜ್ಯಪಾಲ ಥಾವರಚಂದ್ ಗೆಹಲೋತ್​ ಸದ್ಯ ಕೇಂದ್ರ ಸಚಿವರಾಗಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಅವರು, ಮೂರು ಬಾರಿ ಮಧ್ಯಪ್ರದೇಶ ಶಾಸಕರಾಗಿ, ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಈಗ ರಾಜ್ಯಸಭೆಯ ಸದಸ್ಯರೂ ಆಗಿರುವ ಅವರು ಈ ಹಿಂದೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿಯಾಗಿದ್ದರು. ಸಂಘ ಪರಿವಾರದ ಹಿನ್ನೆಲೆಯ ಥಾವರಚಂದ್ ಗೆಹಲೋತ್, ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರೂ ಆಗಿದ್ದರು.

ಇದನ್ನೂ ಓದಿ: ರಾಜ್ಯಪಾಲ ಹುದ್ದೆಗೋಸ್ಕರ ಹೈಕೋರ್ಟ್ ಮಾಜಿ ನ್ಯಾಯಾಧೀಶರು ಓರ್ವ ಮಧ್ಯವರ್ತಿಗೆ ಲಂಚ ನೀಡುವುದು ಖೇದಕರ; ಹೈಕೋರ್ಟ್

Published On - 12:24 pm, Tue, 6 July 21