AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೋ ಅಧ್ಯಕ್ಷ ಎಸ್​ ಸೋಮನಾಥ್​ಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ ಥಾವರ್ ಚಂದ್ ಗೆಹ್ಲೋಟ್

ರಾಜಭವನದಲ್ಲಿ ಬುಧವಾರ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್​ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವ ಅಂಗವಾಗಿ ಗೌರವ ಡಾಕ್ಟರೇಟ್ ಘೋಷಿಸಲಾಗಿತ್ತು. ಆದರೆ ಘಟಿಕೋತ್ಸವ ದಿನದಂದು ಎಸ್.ಸೋಮನಾಥ್ ಭಾಗವಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಇಂದು ರಾಜಭವನದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ.

ಇಸ್ರೋ ಅಧ್ಯಕ್ಷ ಎಸ್​ ಸೋಮನಾಥ್​ಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ ಥಾವರ್ ಚಂದ್ ಗೆಹ್ಲೋಟ್
ಗೌರವ ಡಾಕ್ಟರೇಟ್ ಪ್ರದಾನ
ಭೀಮೇಶ್​​ ಪೂಜಾರ್
| Edited By: |

Updated on:Feb 21, 2024 | 10:29 PM

Share

ಬೆಂಗಳೂರು, ಫೆಬ್ರವರಿ 21: ರಾಜಭವನದಲ್ಲಿ ಇಂದು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್​ (S. Somanath) ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವ ಅಂಗವಾಗಿ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿತ್ತು. ಆದರೆ ಘಟಿಕೋತ್ಸವ ದಿನದಂದು ಎಸ್.ಸೋಮನಾಥ್ ಭಾಗವಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಬುಧವಾರ ರಾಜಭವನದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ.

ಜಿಎಸ್​ಎಲ್​ವಿ ಮಾರ್ಕ್ 3 (GSLV Mk-III) ಲಾಂಚರ್ ರೂಪಿಸುವಲ್ಲಿ ಸೋಮನಾಥ್ ಮುಖ್ಯಪಾತ್ರ ವಹಿಸಿದ್ದರು. ತಮ್ಮ ವೃತ್ತಿ ಜೀವನದ ಆರಂಭದ ದಿನಗಳಲ್ಲಿ ಪಿಎಸ್​ಎಲ್​ವಿ (Polar Satellite Launch Vehicle – PSLV) ಉಡಾವಣಾ ವಾಹನ ರೂಪಿಸುವ ತಂಡದಲ್ಲಿ ಟೀಂ ಲೀಡರ್ ಆಗಿ ಕಾರ್ಯನಿರ್ವಹಿಸಿದ್ದಾರೆ.

ಇದನ್ನೂ ಓದಿ: ಗಗನಯಾನ ನಮ್ಮ ಆದ್ಯತೆ: ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್

ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ಮೂರು ವರ್ಷ ಕೆಲಸ ಮಾಡಿದ್ದರು. ಬಾಹ್ಯಾಕಾಶ ಆಯೋಗದಲ್ಲಿ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿದ್ದರು. ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದ ನಿರ್ದೇಶಕರಾಗಿ ಜನವರಿ 22, 2018ರಿಂದ ಕಾರ್ಯನಿರ್ವಹಿಸುತ್ತಿದ್ದರು. 2022ರಲ್ಲಿ ಅವರು ಇಸ್ರೋ ಅಧ್ಯಕ್ಷರಾದರು.

ಕೇರಳದ ಕೊಲ್ಲಂನಲ್ಲಿರುವ ಟಿಕೆಂಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಓದಿರುವ ಸೋಮನಾಥ್, ಬೆಂಗಳೂರಿನ ಇಂಡಿಯನ್ ಇನ್​ಸ್ಟಿಟ್ಯೂಟ್​ ಆಫ್ ಸೈನ್ಸ್​ನಲ್ಲಿ ಏರೊಸ್ಪೇಸ್ ಎಂಜಿನಿಯರಿಂಗ್​ನಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದಾರೆ. ಬಳಿಕ ವಿಕ್ರಂ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ 1985ರಲ್ಲಿ ಸೇರಿಕೊಂಡರು.

ಇದನ್ನೂ ಓದಿ: ಅಮೃತ್ ಕಾಲ್ ವೇಳೆಗೆ ‘ಭಾರತ್ ಬಾಹ್ಯಾಕಾಶ ನಿಲ್ದಾಣ’ ಸಿದ್ಧ: ಇಸ್ರೋ ಅಧ್ಯಕ್ಷ ಸೋಮನಾಥ್

ಇಸ್ರೋದ ಮಹತ್ವಾಕಾಂಕ್ಷಿ ಪ್ರಯತ್ನವಾಗಿದ್ದ ಚಂದ್ರಾಯಣ-2 ಬಾಹ್ಯಾಕಾಶ ನೌಕೆಯ ಲ್ಯಾಂಡರ್​ಗೆ ಬಳಸಿದ್ದ ಎಂಜಿನ್​ಗಳ ಅಭಿವೃದ್ಧಿ ಮತ್ತು ಜಿಸ್ಯಾಟ್-9ರಲ್ಲಿ ಬಳಕೆಯಾದ ಎಲೆಕ್ಟ್ರಿಕ್ ಪ್ರೊಪಲ್ಷನ್ ವ್ಯವಸ್ಥೆಯನ್ನು ರೂಪಿಸಿದ ಶ್ರೇಯವೂ ಸೋಮನಾಥ್ ಅವರಿಗೆ ಸೇರುತ್ತದೆ.

ಸೋಮನಾಥ್​ ಅವರಿಗೆ ಅನೇಕ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ಭಾರತ ಸರ್ಕಾರದಿಂದ ಪದ್ಮಶ್ರೀ ಪ್ರಶಸ್ತಿಯನ್ನೂ ಸಹ ನೀಡಿ ಗೌರವಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:16 pm, Wed, 21 February 24

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ