Thawarchand Gehlot: ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಕರ್ನಾಟಕ ರಾಜ್ಯಪಾಲ ಥಾವರಚಂದ ಗೆಹಲೋತ್

| Updated By: ganapathi bhat

Updated on: Jul 19, 2021 | 5:51 PM

ಕರ್ನಾಟಕ ರಾಜ್ಯಪಾಲ ಥಾವರಚಂದ ಗೆಹಲೋತ್ ಇಂದು (ಜುಲೈ 19) ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ್ದಾರೆ. ನವದೆಹಲಿಯಲ್ಲಿ ಇಂದು ಪ್ರಧಾನಿ ಮೋದಿ ಕಚೇರಿಯಲ್ಲಿ ಭೇಟಿಯಾಗಿದ್ದಾರೆ.

Thawarchand Gehlot: ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಕರ್ನಾಟಕ ರಾಜ್ಯಪಾಲ ಥಾವರಚಂದ ಗೆಹಲೋತ್
ಥಾವರಚಂದ ಗೆಹಲೋತ್ ಹಾಗೂ ನರೇಂದ್ರ ಮೋದಿ
Follow us on

ದೆಹಲಿ: ಥಾವರಚಂದ್ ಗೆಹಲೋತ್ ರಾಜೀನಾಮೆ ಅಂಗೀಕಾರ ಆಗಿರುವ ಬಗ್ಗೆ ರಾಜ್ಯಸಭೆಗೆ ಸಭಾಪತಿ ವೆಂಕಯ್ಯ ನಾಯ್ಡು ಮಾಹಿತಿ ತಿಳಿಸಿದ್ದಾರೆ. ರಾಜ್ಯಸಭಾ ಸದಸ್ಯತ್ವಕ್ಕೆ ನೀಡಿರುವ ರಾಜೀನಾಮೆ ಜುಲೈ 7ರಂದು ಅಂಗೀಕಾರ ಆಗಿದೆ. ಪ್ರಸ್ತುತ ಕರ್ನಾಟಕದ ರಾಜ್ಯಪಾಲರಾಗಿರುವ ಥಾವರಚಂದ್ ಗೆಹಲೋತ್ ಅವರು ರಾಜ್ಯಸಭಾ ಸದಸ್ಯತ್ವಕ್ಕೆ ನೀಡಿದ್ದ ರಾಜೀನಾಮೆ ಅಂಗೀಕಾರವಾಗಿದೆ. ಗೆಹಲೋತ್ ರಾಜ್ಯಪಾಲರಾಗುವ ಮುನ್ನ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

ಕರ್ನಾಟಕ ರಾಜ್ಯಪಾಲ ಥಾವರಚಂದ ಗೆಹಲೋತ್ ಇಂದು (ಜುಲೈ 19) ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ್ದಾರೆ. ನವದೆಹಲಿಯಲ್ಲಿ ಇಂದು ಪ್ರಧಾನಿ ಮೋದಿ ಕಚೇರಿಯಲ್ಲಿ ಭೇಟಿಯಾಗಿದ್ದಾರೆ.

ಕರ್ನಾಟಕ ರಾಜ್ಯದ 19ನೇ ನೂತನ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್ (Thawarchand Gehlot) ಜುಲೈ 11ರಂದು ನೇಮಕವಾಗಿದ್ದರು. ಹಾಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿದ್ದ ಥಾವರಚಂದ್ ಗೆಹಲೋತ್ ಕರ್ನಾಟಕದ ನೂತನ ರಾಜ್ಯಪಾಲರಾಗಿ ಭಾನುವಾರ ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ಅಧಿಕಾರ ಸ್ವೀಕರಿಸಿದ್ದರು. ಹೈಕೋರ್ಟ್​ ಸಿಜೆ ಎ.ಎಸ್.ಒಕಾ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದರು.

84 ವರ್ಷದ ವಜೂಬಾಯಿ ವಾಲಾ ಅವರು (Vajubhai Rudabhai Vala) 2014ರ ಸೆಪ್ಟೆಂಬರ್​ನಲ್ಲಿ ಕರ್ನಾಟಕದ 18ನೆಯ ರಾಜ್ಯಪಾಲರಾಗಿ ನೇಮಕಗೊಂಡಿದ್ದರು. ಇದೀಗ 19ನೇ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್​ ನೇಮಕವಾಗಿದ್ದಾರೆ. ಕರ್ನಾಟಕದ ನೂತನ ರಾಜ್ಯಪಾಲ ಥಾವರಚಂದ್ ಗೆಹಲೋತ್​ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಮೂರು ಬಾರಿ ಮಧ್ಯಪ್ರದೇಶ ಶಾಸಕರಾಗಿ, ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಈಗ ರಾಜ್ಯಸಭೆಯ ಸದಸ್ಯರೂ ಆಗಿರುವ ಅವರು ಈ ಹಿಂದೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿಯಾಗಿದ್ದರು. ಸಂಘ ಪರಿವಾರದ ಹಿನ್ನೆಲೆಯ ಥಾವರಚಂದ್ ಗೆಹಲೋತ್, ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರೂ ಆಗಿದ್ದರು.

ಇದನ್ನೂ ಓದಿ: Thawar Chand Gehlot: ಸಂಘ ಪರಿವಾರ ಹಿನ್ನೆಲೆಯ ಥಾವರಚಂದ್ ಗೆಹಲೋತ್ ಈ ಹಿಂದೆಯೂ ಕರ್ನಾಟಕದೊಂದಿಗೆ ಸಂಪರ್ಕದಲ್ಲಿದ್ದರು

Thawar Chand Gehlot: ಕರ್ನಾಟಕದ 19ನೇ ರಾಜ್ಯಪಾಲರಾಗಿ ಜುಲೈ 11ರಂದು ಥಾವರಚಂದ್ ಗೆಹಲೋತ್ ಪದಗ್ರಹಣ

Published On - 5:49 pm, Mon, 19 July 21