Thawarchand Gehlot Oath Taking; ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್ ಪ್ರಮಾಣ ವಚನ ಸ್ವೀಕಾರ

Thawarchand Gehlot Oath Taking; ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್ ಪ್ರಮಾಣ ವಚನ ಸ್ವೀಕಾರ
ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕ ರಾಜ್ಯಪಾಲ ಥಾವರಚಂದ್ ಗೆಹಲೋತ್; 84 ವರ್ಷದ ವಜೂಬಾಯಿ ವಾಲಾ ಅವರು (Vajubhai Rudabhai Vala) 2014ರ ಸೆಪ್ಟೆಂಬರ್​ನಲ್ಲಿ ಕರ್ನಾಟಕದ 18ನೆಯ ರಾಜ್ಯಪಾಲರಾಗಿ ನೇಮಕಗೊಂಡಿದ್ದರು. ಇದೀಗ 19ನೇ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್​ ಅಧಿಕಾರ ಸ್ವೀಕರಿಸಿದ್ದಾರೆ.

TV9kannada Web Team

| Edited By: Ayesha Banu

Jul 11, 2021 | 10:58 AM

ಬೆಂಗಳೂರು: ಕರ್ನಾಟಕ ರಾಜ್ಯದ 19ನೇ ನೂತನ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್ (Thawarchand Gehlot) ನೇಮಕವಾಗಿದ್ದಾರೆ. ಹಾಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿದ್ದ ಥಾವರಚಂದ್ ಗೆಹಲೋತ್ ಕರ್ನಾಟಕದ ನೂತನ ರಾಜ್ಯಪಾಲರಾಗಿ ಭಾನುವಾರ ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಹೈಕೋರ್ಟ್​ ಸಿಜೆ ಎ.ಎಸ್.ಒಕಾ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದಾರೆ.

ನಿರ್ಗಮಿತ ರಾಜ್ಯಪಾಲ ವಿ.ಆರ್.ವಾಲಾ ಗೆಹಲೋತ್​​ಗೆ ಅಧಿಕಾರ ಹಸ್ತಾಂತರ ಮಾಡಿದ್ರು. ನೂತನ ರಾಜ್ಯಪಾಲರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಹೈಕೋರ್ಟ್ ಸಿಜೆ ಎ.ಎಸ್.ಒಕಾ, ಸಿಎಂ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಡಿಸಿಎಂ ಕಾರಜೋಳ, ವಿಧಾನಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ, ಸಚಿವರಾದ ಬಸವರಾಜ ಬೊಮ್ಮಾಯಿ, ಕೆ.ಸುಧಾಕರ್, ಆರ್.ಅಶೋಕ್, ಸಂಸದೆ ಸುಮಲತಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. Thawarchand Gehlot Oath

Thawarchand Gehlot Oath

Thawarchand Gehlot Oath

84 ವರ್ಷದ ವಜೂಬಾಯಿ ವಾಲಾ ಅವರು (Vajubhai Rudabhai Vala) 2014ರ ಸೆಪ್ಟೆಂಬರ್​ನಲ್ಲಿ ಕರ್ನಾಟಕದ 18ನೆಯ ರಾಜ್ಯಪಾಲರಾಗಿ ನೇಮಕಗೊಂಡಿದ್ದರು. ಇದೀಗ 19ನೇ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್​ ನೇಮಕವಾಗಿದ್ದಾರೆ. ಕರ್ನಾಟಕದ ನೂತನ ರಾಜ್ಯಪಾಲ ಥಾವರಚಂದ್ ಗೆಹಲೋತ್​ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಮೂರು ಬಾರಿ ಮಧ್ಯಪ್ರದೇಶ ಶಾಸಕರಾಗಿ, ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಈಗ ರಾಜ್ಯಸಭೆಯ ಸದಸ್ಯರೂ ಆಗಿರುವ ಅವರು ಈ ಹಿಂದೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿಯಾಗಿದ್ದರು. ಸಂಘ ಪರಿವಾರದ ಹಿನ್ನೆಲೆಯ ಥಾವರಚಂದ್ ಗೆಹಲೋತ್, ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರೂ ಆಗಿದ್ದರು.

ಇದನ್ನೂ ಓದಿ: Thawar Chand Gehlot: ಸಂಘ ಪರಿವಾರ ಹಿನ್ನೆಲೆಯ ಥಾವರಚಂದ್ ಗೆಹಲೋತ್ ಈ ಹಿಂದೆಯೂ ಕರ್ನಾಟಕದೊಂದಿಗೆ ಸಂಪರ್ಕದಲ್ಲಿದ್ದರು

Follow us on

Most Read Stories

Click on your DTH Provider to Add TV9 Kannada