AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ಏರ್​ಪೋರ್ಟ್​ನಲ್ಲಿ ಸಿಕ್ಕಿಬಿದ್ದ!

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ಮೊಹಮ್ಮದ್ ಷರೀಫ್(55) ಅನ್ನು ಎನ್ಐಎ ಅಧಿಕಾರಿಗಳು ಇಂದು ಬಂಧಿಸಿದ್ದಾರೆ. ವಿದೇಶದಿಂದ ವಾಪಸ್ ಆಗುವಾಗ ದೆಹಲಿ ಏರ್​ಪೋರ್ಟ್​ನಲ್ಲಿ ಮೊಹಮ್ಮದ್ ಷರೀಫ್ ಬಂಧಿಸಿದ ಎನ್ಐಎ ಅಧಿಕಾರಿಗಳು, ಆತನ ಪತ್ತೆಗಾಗಿ ರಾಷ್ಟ್ರೀಯ ತನಿಖಾ ದಳ 5 ಲಕ್ಷ ರೂ. ಬಹುಮಾನ ಘೋಷಿಸಿದ್ದರು.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ಏರ್​ಪೋರ್ಟ್​ನಲ್ಲಿ ಸಿಕ್ಕಿಬಿದ್ದ!
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ಏರ್​ಪೋರ್ಟ್​ನಲ್ಲಿ ಸಿಕ್ಕಿಬಿದ್ದ!
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Dec 20, 2024 | 3:45 PM

Share

ಮಂಗಳೂರು, ಡಿಸೆಂಬರ್​ 20: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6ನೇ ಆರೋಪಿಯನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್(55) ಬಂಧಿತ ಆರೋಪಿ. ವಿದೇಶದಿಂದ ವಾಪಸ್ ಬರುತ್ತಿದ್ದಾಗ ದೆಹಲಿ ವಿಮಾನದಲ್ಲಿ ಬಂಧಿಸಲಾಗಿದೆ.

ಈತನ ಪತ್ತೆಗಾಗಿ ಎನ್​ಐಎ‌ ಅಧಿಕಾರಿಗಳು 5 ಲಕ್ಷ ರೂ. ರಿವಾರ್ಡ್ ಘೋಷಿಸಿದ್ದರು. ಈತ ಪ್ರವೀಣ್ ಕೊಲೆಗೆ ಸಂಚು ರೂಪಿಸುತ್ತಿದ್ದ ತಂಡದಲ್ಲಿದ್ದ. ಜೊತೆಗೆ ನಿಷೇಧಿತ ಪಿಎಫ್ಐ ಸಂಘಟನೆಯ ಮುಖಂಡನಾಗಿದ್ದ. ಎರಡು ಬಾರಿ ಎನ್​ಐಎ ಅಧಿಕಾರಿಗಳು ಶರೀಫ್ ಮನೆ ಮೇಲೆ ದಾಳಿ ಮಾಡಿದ್ದರು.

ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ: ಆರೋಪಿಗಳ ಸಹಚರರ ಸ್ಥಳಗಳ ಮೇಲೆ NIA ದಾಳಿ, ದಾಖಲೆಗಳು ಜಪ್ತಿ

ಇನ್ನು ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸಹಚರರ ಸ್ಥಳಗಳ ಮೇಲೆ ಇತ್ತೀಚೆಗೆ ಎನ್​ಐಎ ದಾಳಿ ಮಾಡಿ ದಾಖಲೆಗಳು ಜಪ್ತಿ ಮಾಡಿಕೊಂಡಿತ್ತು. ಕರ್ನಾಟಕ ಸೇರಿ ತಮಿಳುನಾಡಿನ 16 ಕಡೆ ಎನ್​​​ಐಎ ಅಧಿಕಾರಿಗಳು ದಾಳಿ ಮಾಡಿದ್ದರು. ಹತ್ಯೆಯ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್‌ಗೆ ಇಬ್ಬರು ಆರೋಪಿಗಳು ಆಶ್ರಯ ನೀಡಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿಯಲ್ಲಿರುವ ಆರೋಪಿ ನೌಷದ್ ಮನೆ ಮೇಲೆ ಕೂಡ ಎನ್​ಐಎ ಅಧಿಕಾರಿಗಳು ಇತ್ತೀಚೆಗೆ ದಾಳಿ ಮಾಡಿದ್ದರು. ದಾಳಿ ವಿಚಾರ ತಿಳಿದು ಮನೆ ಲಾಕ್ ಮಾಡಿ ಕುಟುಂಬ ಪರಾರಿ ಆಗಿತ್ತು. ನೌಷದ್ ಪತ್ತೆಗೂ ಎನ್​ಐಎ 2 ಲಕ್ಷ ರೂ. ರಿವಾರ್ಡ್ ಘೋಷಿಸಲಾಗಿತ್ತು.

ಇದನ್ನೂ ಓದಿ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಬಂಧನ

ಜುಲೈ 26, 2022 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ನಡೆದ ಒಂದು ಕೊಲೆ ರಾಜ್ಯದಲ್ಲಿ ಬೆಚ್ಚಿ ಬೀಳಿಸಿತ್ತು. ಹಿಂದು ಪರ ಹೋರಾಟಗಾಗರು ಸ್ವತಃ ಬಿಜೆಪಿ ವಿರುದ್ದ ರೊಚ್ಚಿಗೇಳುವಂತೆ ಆಗಿತ್ತು ಅವತ್ತಿನ ಸ್ಥಿತಿ. ಎನ್​ಐಎ ಪ್ರವೀಣ್ ನೆಟ್ಟಾರು ಕೊಲೆ ಕೇಸ್ ತನಿಖೆ ನಡೆಸುತ್ತಿದ್ದು, 21 ಆರೋಪಿಗಳನ್ನು ಅರೆಸ್ಟ್ ಮಾಡಿ ಆರೋಪಿಗಳ ವಿರುದ್ದ ಚಾರ್ಶೀಟ್ ಸಲ್ಲಿಕೆ ಮಾಡಿತ್ತು. ಮಹಮ್ಮದ್ ಶರೀಫ್ ಸೇರಿದಂತೆ ಈವರೆಗೆ 20 ಜನರನ್ನು ಬಂಧಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು