ಅಯೋಧ್ಯೆಯಿಂದ ಬೆಂಗಳೂರಿಗೆ ಬರಬೇಕಾದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ

ಉತ್ತರ ಪ್ರದೇಶದ ಅಯೋಧ್ಯೆಯಿಂದ ಬೆಂಗಳೂರಿಗೆ ಬರಬೇಕಾದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಹೀಗಾಗಿ ವಿಮಾನವನ್ನು ತಪಾಸಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಬರುವುದು ತಡವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಯೋಧ್ಯೆಯಿಂದ ಬೆಂಗಳೂರಿಗೆ ಬರಬೇಕಾದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ
ಏರ್ ಇಂಡಿಯಾ

Updated on: Oct 15, 2024 | 5:43 PM

ಬೆಂಗಳೂರು, ಅಕ್ಟೋಬರ್ 15): ಉತ್ತರ ಪ್ರದೇಶದ ಅಯೋಧ್ಯೆಯಿಂದ ಬೆಂಗಳೂರಿಗೆ ಬರಬೇಕಾದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಇಂದು(ಮಂಗಳವಾರ) ಉತ್ತರ ಪ್ರದೇಶದ ಅಯೋಧ್ಯೆ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಮಂಗಳವಾರ ಉತ್ತರ ಪ್ರದೇಶದ ಅಯೋಧ್ಯೆ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡ ತಪಾಸಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಮಾನ ಬೆಂಗಳೂರಿಗೆ ಬರುವುದು ಕೊಂಚ ತಡವಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ತಿಳಿಸಿದೆ.

ಇನ್ನು ಈ ಬಗ್ಗೆ ಅಯೋಧ್ಯೆ ವಿಮಾನ ನಿಲ್ದಾಣದ ನಿರ್ದೇಶಕ ವಿನೋದ್ ಕುಮಾರ್​ ಪ್ರತಿಕ್ರಿಯಿಸಿದ್ದು, ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಎಕ್ಸ್​ಪ್ರೆಸ್​ ವಿಮಾನವು ಉತ್ತರ ಪ್ರದೇಶದ ಅಯೋಧ್ಯೆ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮಾಹಿತಿ ನೀಡಿದ್ದಾರೆ.

ವಿಮಾನದಲ್ಲಿ 130 ಪ್ರಯಾಣಿಕರಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್​​ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಈ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ವಿಮಾನ ಸಂಸ್ಥೆಯ ಸಿಬ್ಬಂದಿ ಮತ್ತು ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ವಿಮಾನ ಅಯೋಧ್ಯೆಯಿಂದ ಬೆಂಗಳೂರಿಗೆ ಬರುವುದು ತಡವಾಗಲಿದೆ.

Published On - 5:22 pm, Tue, 15 October 24

ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Loading...
Unable to load recommendations.
Follow Us