School Fees: ಖಾಸಗಿ ಶಾಲೆಗಳ ಫೀಸ್ ಹಗ್ಗಜಗ್ಗಾಟ ಕೊನೆಗಾಣಿಸಲು 2ರಿಂದ 3 ದಿನಗಳಲ್ಲಿ ಸರ್ಕಾರದಿಂದ ಅಧಿಕೃತ ನಿರ್ಧಾರ ಘೋಷಣೆ ಸಾಧ್ಯತೆ
ಶೀಘ್ರವೇ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಲಾಗುವುದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿಯಮಗಳ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಅವಧಿ ಪೂರ್ಣ ಹಿನ್ನೆಲೆಯಲ್ಲಿ ಶೀಘ್ರ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ತಂತ್ರಜ್ಞಾನಾಧಾರಿತ ವರ್ಗಾವಣಾ ಪ್ರಕ್ರಿಯೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಬೆಂಗಳೂರು: ಖಾಸಗಿ ಶಾಲೆಗಳ ಫೀಸ್ ವಸೂಲಿಗೆ ಸಂಬಂಧಿಸಿ ನಡೆಯುತ್ತಿರುವ ಹಗ್ಗಜಗ್ಗಾಟವನ್ನು ಕೊನೆಗೊಳಿಸಲು ಮುಂದಿನ 2ರಿಂದ 3 ದಿನಗಳಲ್ಲಿ ಅಧಿಕೃತ ಘೋಷಣೆಯೊಂದನ್ನು ರಾಜ್ಯ ಶಿಕ್ಷಣ ಇಲಾಖೆ ಪ್ರಕಟಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಖಾಸಗಿ ಶಾಲೆಗಳ ಫೀಸ್ ಕುರಿತು ಅಡ್ವೊಕೇಟ್ ಜನರಲ್ ಜತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಚರ್ಚೆ ನಡೆಸಿದ್ದಾರೆ. ಅಡ್ವೊಕೇಟ್ ಜನರಲ್ ಅವರ ಸಲಹೆ ಮೇರೆಗೆ ಖಾಸಗಿ ಶಾಲೆ ಫೀಸ್ ಗೊಂದಲಕ್ಕೆ ತೆರೆ ಎಳೆಯಲು ಸಿದ್ಧತೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಕಳೆದ ವರ್ಷ ಶೇ.70ರಷ್ಟು ಬೋಧನಾ ಶುಲ್ಕ ನಿಗದಿ ಮಾಡಲಾಗಿತ್ತು. ಅಂತೆಯೇ ಈ ವರ್ಷವೂ ಶೇ.70ರಷ್ಟು ಬೋಧನಾ ಶುಲ್ಕ ನಿಗದಿ ಸಾಧ್ಯತೆಯಿದೆ. ಆದರೆ, ಕಳೆದ ವರ್ಷದ ಪ್ರಕರಣ ನ್ಯಾಯಾಲಯದಲ್ಲಿರುವ ಹಿನ್ನೆಲೆಯಲ್ಲಿ ಸರ್ಕಾರ ಈವರೆಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.
ಶೀಘ್ರವೇ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಲಾಗುವುದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿಯಮಗಳ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಅವಧಿ ಪೂರ್ಣ ಹಿನ್ನೆಲೆಯಲ್ಲಿ ಶೀಘ್ರ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ತಂತ್ರಜ್ಞಾನಾಧಾರಿತ ವರ್ಗಾವಣಾ ಪ್ರಕ್ರಿಯೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಖಾಸಗಿ ಶಾಲಾ ಶಿಕ್ಷಕರಿಗೆ ಸಿಎಂ ಘೋಷಿಸಿರುವ ಪ್ಯಾಕೇಜ್ ಪರಿಹಾರವನ್ನು ಫಲಾನುಭವಿಗಳಿಗೆ ನೇರವಾಗಿ ವಿತರಿಸುವ ಪ್ರಕ್ರಿಯೆ ಕ್ಷಿಪ್ರಗೊಳಿಸುವಂತೆಯೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ. ಶಿಕ್ಷಕರ, ಶಿಕ್ಷಕೇತರರ ಹಾಗೂ ಅತಿಥಿ ಶಿಕ್ಷಕರ ಬ್ಯಾಂಕ್ ಖಾತೆಗಳ ವಿವರಗಳನ್ನು ಶೀಘ್ರವೇ ಸಂಗ್ರಹಿಸಿ ಅನುದಾನವನ್ನು ನೇರ ಶಿಕ್ಷಕರ ಖಾತೆಗಳಿಗೆ ವರ್ಗಾಯಿಸಬೇಕು. ಅತ್ಯಂತ ಸಮರ್ಪಕವಾಗಿ ಈ ಪ್ರಕ್ರಿಯೆ ನಿರ್ವಹಿಸಬೇಕೆಂದು ಇಲಾಖೆಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದಾರೆ.
ಲಾಕ್ಡೌನ್ ಇರುವ ಜಿಲ್ಲೆಗಳ ಶಿಕ್ಷಕರು ಶಾಲೆಗೆ ಬರಬೇಕಂತಿಲ್ಲ ಜತೆಗೆ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗೆ ಮಾರ್ಗಸೂಚಿ ಪ್ರಕಟವಾಗಿದ್ದು, ನಾಳೆಯಿಂದಲೇ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದ್ದು, ಶಿಕ್ಷಕರು ಪೂರ್ವ ತಯಾರಿ ನಾಳೆಯಿಂದ ಪ್ರಾರಂಭಿಸಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ. ಆದರೆ ಲಾಕ್ಡೌನ್ ಜಾರಿಯಲ್ಲಿರುವ ಜಿಲ್ಲೆಗಳಿಗೆ ಮಾತ್ರ ಈ ಆದೇಶದಿಂದ ವಿನಾಯಿತಿ ನಿಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಸ್ಪಷ್ಟಪಡಿಸಿದ್ದಾರೆ. ಲಾಕ್ಡೌನ್ ಜಿಲ್ಲೆಗಳಲ್ಲಿನ ಶಿಕ್ಷಕರು ಮನೆಯಿಂದ ಕೆಲಸ ನಿರ್ವಹಿಸಬೇಕು. ಮಕ್ಕಳ ದಾಖಲಾತಿ, ಕಲಿಕಾ ಪೂರ್ವ ಸಿದ್ಧತೆ ಆರಂಭಿಸಬೇಕು. ನಿರ್ಬಂಧ ಸಡಿಲಿಕೆಯಾದ ಕೂಡಲೇ ಶಾಲೆಗೆ ತೆರಳಿ ಕಾರ್ಯ ನಿರ್ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.
ಕೊವಿಡ್ ಲಸಿಕೆ ಪಡೆದ ನಂತರ ದೇಹದಲ್ಲಿ ಅಯಸ್ಕಾಂತ ಶಕ್ತಿ ಉಂಟಾಗಿದೆ ಎಂದ ಉಲ್ಲಾಸನಗರ ವ್ಯಕ್ತಿಯ ವಾದ; ವಿಡಿಯೊ ವೈರಲ್
(The announcement of an official decision by the government is likely within 2 to 3 days to end the felling of private schools)