ದತ್ತ ಪೀಠದಲ್ಲಿ ಪೂಜಾ ವಿಧಾನ ವಿರೋಧಿಸಿ ಸೈಯದ್ ಗೌಸ್ ಮೊಹಿಯುದ್ದೀನ್ ಶಾ ಖಾದ್ರಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ

ಸೈಯದ್ ಗೌಸ್ ಮೊಹಿಯುದ್ದೀನ್ ಶಾ ಖಾದ್ರಿ ಸಲ್ಲಿಸಿದ್ದ ಮೇಲ್ಮನವಿ ವಜಾಗೊಂಡಿದ್ದು ವಿಭಾಗೀಯ ಪೀಠ ಏಕಸದಸ್ಯ ಪೀಠದ ಆದೇಶ ಎತ್ತಿಹಿಡಿದಿದೆ.

ದತ್ತ ಪೀಠದಲ್ಲಿ ಪೂಜಾ ವಿಧಾನ ವಿರೋಧಿಸಿ ಸೈಯದ್ ಗೌಸ್ ಮೊಹಿಯುದ್ದೀನ್ ಶಾ ಖಾದ್ರಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ
ದತ್ತ ಪೀಠ(ಸಂಗ್ರಹ ಚಿತ್ರ)
Follow us
TV9 Web
| Updated By: ಆಯೇಷಾ ಬಾನು

Updated on:Mar 06, 2023 | 12:19 PM

ಬೆಂಗಳೂರು: ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ (Dattatreya Bababudan Swamy Dargah Dispute) ದಲ್ಲಿ ಪೂಜಾ ವಿಧಾನ ವಿಚಾರಕ್ಕೆ ಸಂಬಂಧಿಸಿ ಸೈಯದ್ ಗೌಸ್ ಮೊಹಿಯುದ್ದೀನ್ ಶಾ ಖಾದ್ರಿ ಸಲ್ಲಿಸಿದ್ದ ಮೇಲ್ಮನವಿ ವಜಾಗೊಂಡಿದ್ದು ವಿಭಾಗೀಯ ಪೀಠ ಏಕಸದಸ್ಯ ಪೀಠದ ಆದೇಶ ಎತ್ತಿಹಿಡಿದಿದೆ.

ಪೂಜೆಗೆ ಅರ್ಚಕರನ್ನು ನೇಮಿಸಲು 2018ರಲ್ಲಿ ಸರ್ಕಾರ ನಿರಾಕರಿಸಿತ್ತು. ಮುಜಾವರ್​​​ಗಳಿಂದಲೇ ಧಾರ್ಮಿಕ ಆಚರಣೆಗೆ ತೀರ್ಮಾನಿಸಿತ್ತು. ಬಳಿಕ ಹೈಕೋರ್ಟ್ 2018ರಲ್ಲಿ ಸರ್ಕಾರ ಕೈಗೊಂಡಿದ್ದ ನಿರ್ಧಾರ ರದ್ದುಪಡಿಸಿ ಪೂಜಾ ವಿಧಾನದ ಕುರಿತು ಹೊಸದಾಗಿ ತೀರ್ಮಾನಿಸಲು ಆದೇಶಿಸಿತ್ತು. ಹೀಗಾಗಿ 2022ರಲ್ಲಿ ರಾಜ್ಯ ಸರ್ಕಾರ ಹೊಸದಾಗಿ ಆದೇಶ ಹೊರಡಿಸಿತು. ಎರಡೂ ಧರ್ಮದ ಸಂಪ್ರದಾಯಗಳ ಪ್ರಕಾರ ಮುಜಾವರ್ ಹಾಗೂ ಅರ್ಚಕರ ಪೂಜಾವಿಧಿಗೆ ಅವಕಾಶ ನೀಡಿತು. ಈ ನಿರ್ಧಾರಕ್ಕೆ ಸೈಯದ್ ಗೌಸ್ ಮೊಹಿಯುದ್ದೀನ್ ಶಾ ಖಾದ್ರಿ ವಿರೋಧ ವ್ಯಕ್ತಪಡಿಸಿದ್ದರು. ಸದ್ಯ ಮೊಹಿಯುದ್ದೀನ್ ಶಾ ಖಾದ್ರಿ ಸಲ್ಲಿಸಿದ್ದ ಮೇಲ್ಮನವಿ ವಜಾಗೊಂಡಿದೆ. ಹಿಂದೂ ಸಂಘಟನೆ ಪರ ಜಗದೀಶ್ ಬಾಳಿಗಾ ವಾದಿಸಿದ್ದಾರೆ.

ಇದನ್ನೂ ಓದಿ: Datta Peetha: ಚಿಕ್ಕಮಗಳೂರಿನ ದತ್ತಪೀಠದಲ್ಲಿ ದತ್ತಪಾದುಕೆಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಮೋದ್ ಮುತಾಲಿಕ್

ಏನಿದು ವಿವಾದ?

ಬಾಬಾಬುಡನ್‌ ಗಿರಿ ಅಥವಾ ಶ್ರೀಗುರುದತ್ತಾತ್ರೇಯ ಯಾರಿಗೆ ಸೇರಿದ್ದು ಎಂಬ ಬಗ್ಗೆ ವಾದ ವಿವಾದಗಳು ನಡೆಯುತ್ತಲೇ ಇವೆ. ಶ್ರೀ ಗುರು ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಎನ್ನುವುದು ಮೂಲ ಸರ್ಕಾರಿ ದಾಖಲಾತಿಗಳಲ್ಲಿ ಇರುವ ಹೆಸರಿದೆ. ಆದರೆ ಈ ಸ್ಥಳವನ್ನು ಬಾಬಾ ಬುಡನ್‌ ಗಿರಿ ಎಂದೂ ಮತ್ತೆ ಕೆಲವರು ಇನಾಂ ದತ್ತಾತ್ರೇಯ ಪೀಠ ಎಂದೂ ಕರೆಯುತ್ತಾರೆ. ಕಳೆದ ನಾಲ್ಕೈದು ದಶಕಗಳಿಂದ ಹಿಂದೂ-ಮುಸ್ಲಿಮರ ಧಾರ್ಮಿಕ ಭಾವೈಕ್ಯತಾ ಕೇಂದ್ರದ ಮೂಲಕ ವಿವಾದಿತ ಕೇಂದ್ರವೂ ಆಗಿದ್ದ ಈ ಧಾರ್ಮಿಕ ಕೇಂದ್ರದ ನಮ್ಮದು ಎಂದು ಎರಡು ಧರ್ಮದವರು ನ್ಯಾಯಾಲಯದಲ್ಲಿ ವಾದ-ಪ್ರತಿವಾದ ಮಂಡಿಸುತ್ತಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:04 pm, Mon, 6 March 23

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್