AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರಾ ಮೇಲ್ಡಂಡೆ ಯೋಜನೆಗೆ 13 ಸಾವಿರ ಕೋಟಿ ಹಣ ಮಂಜೂರು: ಸಿಎಂ ಬೊಮ್ಮಾಯಿ ಹೇಳಿಕೆ

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 13 ಸಾವಿರ ಕೋಟಿ ಹಣ ಮಂಜೂರು ಮಾಡಲಿದೆ. ಜೊತೆಗೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಭದ್ರಾ ಮೇಲ್ಡಂಡೆ ಯೋಜನೆಗೆ 13 ಸಾವಿರ ಕೋಟಿ ಹಣ ಮಂಜೂರು: ಸಿಎಂ ಬೊಮ್ಮಾಯಿ ಹೇಳಿಕೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿImage Credit source: Udayakala
TV9 Web
| Updated By: Rakesh Nayak Manchi|

Updated on:Jun 04, 2022 | 9:43 PM

Share

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ (Bhadra Meldande Project)ಗೆ ಕೇಂದ್ರ ಸರ್ಕಾರ 13 ಸಾವಿರ ಕೋಟಿ ಹಣ ಮಂಜೂರು ಮಾಡಲಿದೆ. ಅಲ್ಲದೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಭದ್ರಾ ಮೇಲ್ಡಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು. ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದ ಹೆಚ್.ಎಲ್.ಗುಣ್ಣಯ್ಯ ವೇದಿಕೆಯಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಣ್ಣ ನೀರಾವರಿ ಇಲಾಖೆ, ಹಿರಿಯೂರು ತಾಲ್ಲೂಕು ಆಡಳಿತ ಇವರ ಸಂಯುಕ್ತಾಶ್ರಯದಲ್ಲಿ ಹಿರಿಯೂರು ವಿಧಾನಸಭಾ ಕ್ಷೇತ್ರ ಧರ್ಮಪುರ ಕೆರೆ ಹಾಗೂ ಇತರೆ ಏಳು ಕೆರೆಗಳಿಗೆ ನೀರುಣಿಸುವ ಏತ ನೀರಾವರಿ ಯೋಜನೆಯ ಭೂಮಿಪೂಜೆ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇದನ್ನೂ ಓದಿ: ಪಠ್ಯದಲ್ಲಿರುವ ಹೆಡ್ಗೆವಾರ್​ ಭಾಷಣವನ್ನ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲು ರಾಜ್ಯ ಸರ್ಕಾರದಿಂದ ಪೂರಕ ದಾಖಲೆ ಹಾಗೂ ಬೇಡಿಕೆಗಳನ್ನು ಸಲ್ಲಿಸಲಾಗಿದೆ. ಯೋಜನೆಯ ಜಾರಿಗಾಗಿ ಈ ಭಾಗದ ಜನರು 50 ವರ್ಷಗಳ ಸುದೀರ್ಘ ಹೋರಾಟ ನೆಡೆಸಿದ್ದಾರೆ. 2008ರಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೆ ಸರ್ಕಾರದಿಂದ ಅನುಮೋದನೆ ನೀಡಿದ್ದರು. ಯೋಜನೆ ಜಾರಿಗೆ 543 ದಿನಗಳ ಕಾಲ ಈ ಭಾಗದ ಜನರು ಧರಣಿ ಮಾಡಿದ್ದರು. ಅಂದಿನ ಸರ್ಕಾರದ ನೀರಾವರಿ ಖಾತೆ ಸಚಿವನಾಗಿ, ಹೋರಾಟಗಾರ ಬಳಿ ಬಂದು ಯೋಜನೆ ಜಾರಿಗೆ ಬಗ್ಗೆ ತಾಂತ್ರಿಕವಾಗಿ ಹೇಗೆ ಭದ್ರಾ ನದಿಯಿಂದ ನೀರು ತರಲಾಗುತ್ತದೆ ಎಂದು ವಿವರಿಸಿದ ಮೇಲೆ ಹೋರಾಟ ಅಂತ್ಯವಾಯಿತು ಎಂದರು.

ಇದನ್ನೂ ಓದಿ: ನಾವು ಯಾವುದೇ ಕಾರಣಕ್ಕೂ ನಾಮಪತ್ರ ಹಿಂಪಡೆಯುವುದಿಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಹೋರಾಟಗಾರರಿಗೆ ಆಶ್ವಾಸನೆ ನೀಡಿದ ಹಾಗೇ ಕೇಂದ್ರ ಸರ್ಕಾರದ ಪರಿಸರ ಹಾಗೂ ಅರಣ್ಯ ಇಲಾಖೆಯ ಅನುಮತಿ ಪಡೆದು 15 ದಿನದಲ್ಲಿ ಯೋಜನೆಯ ಟೆಂಡರ್ ಕರೆಯಲಾಯಿತು ಎಂದು ಸ್ಮರಿಸಿದರು. ಅಲ್ಲದೆ ರೈತರ ಬೆವರಿಗೆ ಗಂಗೆಯ ಹನಿ ಸೇರಿದರೆ ಭೂಮಿ ತಾಯಿ ಬಂಗಾರದ ಬೆಳೆ ಕೊಡುತ್ತಾಳೆ. ಮಧ್ಯ ಕರ್ನಾಟಕದ ಪ್ರಮುಖ ಎರೆಡು ಯೋಜನೆಗಳಾದ ಭದ್ರಾ ಮೇಲ್ದಂಡೆ ಹಾಗೂ ಎತ್ತಿನ ಹೊಳೆ ಯೋಜನೆಯನ್ನು ಪ್ರಾರಂಭ ಮಾಡುವ ಯೋಗ ನನ್ನದಾಗಿದೆ. ಹಿರಿಯೂರು ಭಾಗದ ರೈತರು ಶ್ರಮ ಜೀವಿಗಳು. ನೀರಾವರಿ ಸೌಲಭ್ಯ ಇಲ್ಲದಿದ್ದಾಗಲೂ ತೋಟಗಾರಿಕೆ ಮಾಡಿದ್ದೀರಿ. ಶ್ರಮ ಜೀವಿಗಳ ನಾಡಿಗೆ, ಈ ಭಾಗದ ರೈತರ ಬೆವರು ಹಾಗೂ ಶ್ರಮಕ್ಕೆ ನನ್ನ ಸಾಷ್ಟಾಂಗ ನಮಸ್ಕಾರ ಎಂದರು.

ಇದನ್ನೂ ಓದಿ: Positive Trend: ಭಾರತದಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣ ಇಳಿಕೆ, ಕರ್ನಾಟಕದಲ್ಲೂ ಇಳಿಕೆಯಾಗಿದೆ! ಕಾರಣಗಳೇನು?

90 ಕೋಟಿ ರೂಪಾಯಿ ಮಂಜೂರು

ಧರ್ಮಪುರ ಕೆರೆ ಸೇರಿದಂತೆ ಏಳು ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 90 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. 40 ಕೋಟಿ ವೆಚ್ಚದ ಮೊದಲನೇ ಹಂತದ ಕಾಮಗಾರಿಗೆ ಅಡಿಗಲ್ಲು ಹಾಕಲಾಗಿದೆ. ಉಳಿದ ಎರಡನೇ ಹಂತದ 50 ಕೋಟಿ ವೆಚ್ಚದ ಕಾಮಗಾರಿಗೆ ತಿಂಗಳ ಒಳಗಾಗಿ ಟೆಂಡರ್ ಕರೆಯಲಾಗುವುದು. ಯೋಜನೆಯಲ್ಲಿ ಬಿಟ್ಟುಹೋದ ಹರಿಯಬ್ಬೆ ಸೇರಿದಂತೆ ಇತರೆ ಕೆರೆಗಳನ್ನು ಸೇರಿಸಲಾಗುವುದು ಎಂದು ಭರವಸೆ ನೀಡಿದರು.

ಹೆಗ್ಡೆವಾರ್ ಭಾಷಣ ಸೇರ್ಪಡೆ ಸಮರ್ಥಿಸಿದ ಸಿಎಂ

ಪಠ್ಯದಲ್ಲಿ ಆರ್​ಎಸ್​ಎಸ್​ ಸಂಸ್ಥಾಪಕ ಕೇಶವ ಬಲಿರಾಮ್ ಹೆಗ್ಡೆವಾರ್ ಭಾಷಣ ಸಮರ್ಥಿಸಿಕೊಂಡ ಸಿಎಂ ಬೊಮ್ಮಾಯಿ, ಇದರಲ್ಲಿ ತಪ್ಪೇನಿದೆ, ನಿನ್ನೆ ಪಠ್ಯಪುಸ್ತಕ ತರಿಸಿಕೊಂಡು ಓದಿದ್ದೇನೆ ಎಂದು ದೇವರಕೊಟ್ಟ ಹೆಲಿಪ್ಯಾಡ್​ನಲ್ಲಿ ಹೇಳಿಕೆ ನೀಡಿದರು. ಬರಗೂರು ಸಮಿತಿ ಪಠ್ಯದಲ್ಲೂ ಬಸವಣ್ಣ ಲಿಂಗದೀಕ್ಷೆ ವಿಚಾರ ಇದೆ‌. 2015ರ ಪಠ್ಯಕ್ಕಿಂತ ಈಗ ಸ್ವಲ್ಪ ಬದಲಾವಣೆ ಮಾಡಬೇಕು ಅಷ್ಟೇ. ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ವಿಸರ್ಜಿಸಲಾಗಿದೆ. ಪಠ್ಯದ ಬಗ್ಗೆ ಹಲವಾರು ಮಠಾಧೀಶರುಗಳು ಪತ್ರ ಬರೆದಿದ್ದಾರೆ. ಹೀಗಾಗಿ ಬಸವಣ್ಣನವರ ವಿಚಾರಗಳ ಬಗ್ಗೆ ಸಣ್ಣಪುಟ್ಟ ತಿದ್ದುಪಡಿ ಮಾಡಿ ಮಕ್ಕಳಿಗೆ ಪುಸ್ತಕ ವಿತರಿಸಲಾಗುವುದು ಎಂದರು.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:22 pm, Sat, 4 June 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!