ಸಂಪುಟ ವಿಸ್ತರಣೆ ಬಗ್ಗೆ ಯಾರಿಗೂ ಚಿಕ್ಕ ಮಾಹಿತಿಯನ್ನೂ ನೀಡುತ್ತಿಲ್ಲ CM ಯಡಿಯೂರಪ್ಪ; ಸುಮ್ನಿರಿ, ಕಾಯಿರಿ ಎಂದಷ್ಟೇ ಉತ್ತರ!
ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಎಂಬ ಪ್ರಶ್ನೆಯನ್ನೂ ಕೆಲವರು ಕೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯೆಯಾಗಿ ಸುಮ್ಮನಿರಿ, ಸಂಜೆಯವರೆಗೂ ಕಾಯಿರಿ ಎಂದಷ್ಟೇ ಮುಖ್ಯಮಂತ್ರಿ ಉತ್ತರ ನೀಡಿದ್ದಾರೆ.
ಬೆಂಗಳೂರು: ಜ.13 (ನಾಳೆ ) ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಆದರೆ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನೇನೂ ಮುಖ್ಯಮಂತ್ರಿ ನೀಡುತ್ತಿಲ್ಲ.
ಸಂಪುಟ ವಿಸ್ತರಣೆ ದಿನ ನಿಗದಿಯಾದ ಬೆನ್ನಲ್ಲೇ ಮುಖ್ಯಮಂತ್ರಿಯನ್ನು ಭೇಟಿಯಾಗುತ್ತಿರುವ ಶಾಸಕರು, ಸಚಿವರ ಸಂಖ್ಯೆ ಹೆಚ್ಚಿದೆ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಮಾತ್ರ ಯಾವುದೇ ಹೆಚ್ಚಿನ ಮಾಹಿತಿಯನ್ನೂ ಬಿಟ್ಟುಕೊಡುತ್ತಿಲ್ಲ. ಯಾರನ್ನು ಸಂಪುಟದಿಂದ ಕೈಬಿಡಬೇಕು.. ಯಾರನ್ನು ಸೇರಿಸಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ. ಪಟ್ಟಿ ತಯಾರಾಗಿಲ್ಲ. ಸಂಜೆ ದೆಹಲಿ ನಾಯಕರೇ ಅಂತಿಮ ಪಟ್ಟಿ ಕೊಡುತ್ತಾರೆ ಎಂದು ಹೇಳಿದ್ದಾರೆ.
ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಎಂಬ ಪ್ರಶ್ನೆಯನ್ನೂ ಕೆಲವರು ಕೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯೆಯಾಗಿ ಸುಮ್ಮನಿರಿ, ಸಂಜೆಯವರೆಗೂ ಕಾಯಿರಿ ಎಂದಷ್ಟೇ ಸಿಎಂ ಉತ್ತರ ನೀಡಿದ್ದಾರೆ.
ಸಿದ್ದರಾಮಯ್ಯ ಸರ್ಕಾರದ ಯಾವ ಭಾಗ್ಯಗಳು ಜನರಿಗೆ ತಲುಪಿಲ್ಲ: ಕಾಂಗ್ರೆಸ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ