ಮತ್ತೆ ಸಾರಿಗೆ ನೌಕರರ ಪ್ರತಿಭಟನೆ ಬೆದರಿಕೆ: ಒಂಬತ್ತರಲ್ಲಿ 5 ಬೇಡಿಕೆಗಳ ಈಡೇರಿಸಲು ಮುಂದಾದ ಸಾರಿಗೆ ಇಲಾಖೆ

| Updated By: ಸಾಧು ಶ್ರೀನಾಥ್​

Updated on: Feb 11, 2021 | 3:45 PM

ಸಾರಿಗೆ ನೌಕರರ ಪ್ರತಿಭಟನೆ ಹಿನ್ನೆಲೆಯಲ್ಲಿ ಎರಡು ತಿಂಗಳಾದರೂ ರೈತರ ಬೇಡಿಕೆಗೆ ಯಾವುದೇ ಪ್ರತಿಕ್ರಿಯೆ ಸಿಗದ ಕಾರಣ ಮತ್ತೆ ಮುಷ್ಕರಕ್ಕೆ ಇಳಿಯುವುದಾಗಿ ನೌಕರರು ಎಚ್ಚರಿಕೆ ನೀಡಿದ್ದರು. ತರುವಾಯ 9 ಬೇಡಿಕೆಗಳಲ್ಲಿ 5 ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ಇಲಾಖೆ ಸುತ್ತೋಲೆ ಹೊರಡಿಸಿದೆ.

ಮತ್ತೆ ಸಾರಿಗೆ ನೌಕರರ ಪ್ರತಿಭಟನೆ ಬೆದರಿಕೆ: ಒಂಬತ್ತರಲ್ಲಿ 5 ಬೇಡಿಕೆಗಳ ಈಡೇರಿಸಲು ಮುಂದಾದ ಸಾರಿಗೆ ಇಲಾಖೆ
ಸಂಗ್ರಹ ಚಿತ್ರ
Follow us on

ಬೆಂಗಳೂರು: ಸಾರಿಗೆ ನೌಕರರ ಪ್ರತಿಭಟನೆಗೆ ಸಂಬಂಧಿಸಿದಂತೆ ಎರಡು ತಿಂಗಳು ಕಳೆದರೂ ಯಾವುದೂ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಸಾರಿಗೆ ನೌಕರರ ಸಂಘಟನೆಗಳು ಮತ್ತೆ ಮುಷ್ಕರದ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆ ತಕ್ಷಣ ಈ ಐದು ಬೇಡಿಕೆಗಳನ್ನ ಈಡೇರಿಸುವಂತೆ ಸಾರಿಗೆ ಇಲಾಖೆ ಸೂಚನೆ ನೀಡಿದೆ. ಒಂಭತ್ತು ಬೇಡಿಕೆಗಳ ಪೈಕಿ ಐದು ಬೇಡಿಕೆಯನ್ನುಈಡೇರಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ.

ಡಿಸೆಂಬರ್​ನಲ್ಲಿ ನಡೆದ ನಾಲ್ಕು ದಿನದ ಸರ್ಕಾರಿ ನೌಕರರ ಮುಷ್ಕರಕ್ಕೆ ಸಂಬಂಧಿಸಿ 10 ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಲಾಗಿತ್ತು. ಇವುಗಳಲ್ಲಿ 9 ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರ ಭರವಸೆ ನೀಡಿತ್ತು. ತದನಂತರ ಎರಡು ತಿಂಗಳಾದರೂ ಯಾವುದೇ ಪ್ರತಿಕ್ರಿಯೆ ಇಲ್ಲದ ನಿಟ್ಟಿನಲ್ಲಿ ನೌಕರರು ಮತ್ತೆ ಮುಷ್ಕರಕ್ಕೆ ಇಳಿಯುವುದಾಗಿ ಎಚ್ಚರಿಕೆ ನೀಡಿದ್ದರು. ಇದೀಗ, ಎಚ್ಚರಿಕೆಗೆ ಮಣಿದ ಸರ್ಕಾರ 9 ಈಡೇರಿಕೆಗಳಲ್ಲಿ 5 ಈಡೇರಿಕೆಗೆ ನಿರ್ಧಾರ ಕೈಗೊಂಡಿದೆ. ಈ ಐದು ಭರವಸೆ ಈಡೇರಿಸುವಂತೆ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.

ಸಾರಿಗೆ ನೌಕರರು ಮುಂದಿಟ್ಟ ಈಡೇರಿಕೆಯ ಪೈಕಿ, ಆರೋಗ್ಯ ಭಾಗ್ಯ ವಿಮಾ ಯೋಜನೆ ಜಾರಿಗೆ ಸಂಬಂಧಿಸಿದಂತೆ ಸರ್ಕಾರಿ ಹಾಗೂ ಅನುದಾನಿತ ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆ ಪದ್ದತಿ ಜಾರಿಗೆ ತರುವುದು, ಸರ್ಕಾರಿ ನೌಕರರಿಗೆ ವೈದ್ಯಕೀಯ ವೆಚ್ಚ ಪಾವತಿ ಮಾದರಿಯಲ್ಲಿ ಸಿಜಿಹೆಚ್ಎಸ್ ದರದ ಅನ್ವಯ ಚಿಕಿತ್ಸಾ ವೆಚ್ಚ ಮರುಪಾವತಿ, ಕೊವಿಡ್ ​ನಿಂದ ಮೃತರಾದವರ ಕುಟುಂಬ ವರ್ಗಕ್ಕೆ 30 ಲಕ್ಷ ಪರಿಹಾರ ಧನ, ಸಾರಿಗೆ ಸಂಸ್ಥೆಗಳಲ್ಲಿ ಎಂಆರ್​ಎಂಎಸ್ ವ್ಯವಸ್ಥೆ ಜಾರಿಗೊಳಿಸುವುದು, ಘಟಕದ ವ್ಯಾಪ್ತಿಯಲ್ಲಿ ನೌಕರಿಗೆ ಕಿರುಕುಳ ತಪ್ಪಿಸೋ ಸಲುವಾಗಿ ಸೂಕ್ತ ಆಡಳಿತ ವ್ಯವಸ್ಥೆ ಜಾರಿಗೊಳಿಸುವುದು ಮತ್ತು ಎನ್ಐಎನ್​ಸಿ ಪದ್ಧತಿ ಜಾರಿಗೆ ತರುವಂತೆ ಸುತ್ತೋಲೆ ಹೊರಡಿಸಲಾಗಿದೆ.

ಇದನ್ನೂ ಓದಿ: ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ ಗಡುವು ನೀಡಿದ ಕೋಡಿಹಳ್ಳಿ ಚಂದ್ರಶೇಖರ್