ಕಾಂಗ್ರೆಸ್ ಕುಡಿಯುವ ನೀರಿಗೂ ರಾಜಕೀಯ ಬಣ್ಣ ಬಳೆಯುತ್ತಿದೆ; ಸಚಿವ ಡಾ. ಅಶ್ವಥ್ ನಾರಾಯಣ್

ಪಾದಯಾತ್ರೆ ಎಲ್ಲಿಗೆ ಬೇಕಾದ್ರೂ ಬರಲಿ. ನಮ್ಮ ಕ್ಷೇತ್ರಕ್ಕೆ ಬರಲು ಯಾವುದೇ ಅಭ್ಯಂತರ ಇಲ್ಲ. ನೀವು ನಮ್ಮ ಕ್ಷೇತ್ರಕ್ಕೆ ಬಂದ್ರೆ ನಮಗೆ ಜನ ಆಶೀರ್ವಾದ ಮಾಡುತ್ತಾರೆ. ಪರಿಜ್ಞಾನ ಇಲ್ಲದೇ ನಾಟಕ ಮಾಡಿಕೊಂಡು ಈ ಪಾದಯಾತ್ರೆ ಮಾಡುತ್ತಿದ್ದಾರೆ.

ಕಾಂಗ್ರೆಸ್ ಕುಡಿಯುವ ನೀರಿಗೂ ರಾಜಕೀಯ ಬಣ್ಣ ಬಳೆಯುತ್ತಿದೆ; ಸಚಿವ ಡಾ. ಅಶ್ವಥ್ ನಾರಾಯಣ್
ಸಚಿವ ಡಾ. ಅಶ್ವಥ್ ನಾರಾಯಣ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Feb 28, 2022 | 3:09 PM

ಬೆಂಗಳೂರು: ಕಾಂಗ್ರೆಸ್ ದೊಂಬರಾಟ ಮಾಡುತ್ತಿದೆ. ನೀರಿಗೆ ಕಾಂಗ್ರೆಸ್ ರಾಜಕೀಯ ಲೇಪ ಹಚ್ಚುತ್ತಿದೆ. ಕುಡಿಯುವ ನೀರಿಗೂ ರಾಜಕೀಯ ಬಣ್ಣ ಹಚ್ಚುತ್ತಿದೆ ಎಂದು ಬೆಂಗಳೂರಿನಲ್ಲಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಶ್ವಥ್ ನಾರಾಯಣ್ ಹೇಳಿಕೆ ನೀಡಿದ್ದಾರೆ. ನಾಡಿನ ನೆಲ, ಜಲ, ಭಾಷೆ ಬಂದಾಗ ಎಲ್ಲರೂ ಒಂದಾಗುತ್ತಾರೆ. ಆದರೆ ಕಾಂಗ್ರೆಸ್ ಸುಮ್ಮನೆ ರಾಜಕೀಯ ಮಾಡ್ತಿದೆ. 75 ವರ್ಷಗಳಲ್ಲಿ ಕಾಂಗ್ರೆಸ್ ಮೇಕೆದಾಟಿಗೆ ಏನೂ ಮಾಡಿಲ್ಲ. ಡಿಪಿಆರ್ ಕೂಡಾ ಅವರು ಮಾಡಿಲ್ಲ. ಹೀಗಾಗಿ ಕಾಂಗ್ರೆಸ್ ಪಾದಯಾತ್ರೆಯನ್ನು ನಾನು ಖಂಡಿಸುತ್ತೇನೆ. ಮೇಕೆದಾಟು ಅನುಷ್ಠಾನ ಮಾಡಲು ನಮ್ಮ ರಾಜ್ಯ ಮತ್ತು ಕೇಂದ್ರ ಬದ್ದವಾಗಿದೆ. ಎಂದರು. ಕಾಂಗ್ರೆಸ್​ನಿಂದ ಈ ಜನ್ಮದಲ್ಲಿ ಮೇಕೆದಾಟು ಒಂದಿಂಚು ಕಾರ್ಯರೂಪಕ್ಕೆ ತರಲು ಸಾಧ್ಯವಿಲ್ಲ. ಡಿಎಂಕೆ ಜೊತೆ ಕಾಂಗ್ರೆಸ್ ಕೈ ಜೋಡಿಸಿದೆ. ತಮಿಳುನಾಡಿನಲ್ಲಿ ಅವರದ್ದೇ ಸರ್ಕಾರ ಇದೆ. ಕಾಂಗ್ರೆಸ್ ಏಕಾಂಗಿಯಾಗಿ ಅಧಿಕಾರಕ್ಕೆ ಬಂದು ಇದನ್ನು ಮಾಡಲು ಸಾಧ್ಯವೇ ಇಲ್ಲ. ಇವರ ಜನ್ಮದಲ್ಲಿ ಮೇಕೆದಾಟು ಕಾಂಗ್ರೆಸ್ ಜಾರಿ ಮಾಡಲ್ಲ. ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ರಾಮನಗರ ಅಭಿವೃದ್ಧಿ ಮಾಡಿಲ್ಲ. ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ಏನೂ ಕೆಲಸ ಮಾಡಿಲ್ಲ. ರಾಜಕೀಯ ಜನ್ಮ ಪಡೆದು ಜಿಲ್ಲೆಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.

ಪಾದಯಾತ್ರೆ ಎಲ್ಲಿಗೆ ಬೇಕಾದ್ರೂ ಬರಲಿ. ನಮ್ಮ ಕ್ಷೇತ್ರಕ್ಕೆ ಬರಲು ಯಾವುದೇ ಅಭ್ಯಂತರ ಇಲ್ಲ. ನೀವು ನಮ್ಮ ಕ್ಷೇತ್ರಕ್ಕೆ ಬಂದ್ರೆ ನಮಗೆ ಜನ ಆಶೀರ್ವಾದ ಮಾಡುತ್ತಾರೆ. ಪರಿಜ್ಞಾನ ಇಲ್ಲದೇ ನಾಟಕ ಮಾಡಿಕೊಂಡು ಈ ಪಾದಯಾತ್ರೆ ಮಾಡುತ್ತಿದ್ದಾರೆ. ವ್ಯಾಪಾರ, ಲಾಭ, ನಷ್ಟ ನೋಡೋದು ಡಿ.ಕೆ. ಶಿವಕುಮಾರ್ ಗುಣ. ತಾನು ಹೇಗೆ ಸಿಎಂ ಆಗಬೇಕು ಅಂತ ಡಿ.ಕೆ. ಶಿವಕುಮಾರ್ ಪ್ಲ್ಯಾನ್ ಮಾಡುತ್ತಿದ್ದಾರೆ. ಜನಕ್ಕಾಗಿ ಈ ಪಾದಯಾತ್ರೆ ಮಾಡುತ್ತಿಲ್ಲ. ಬದಲಿಗೆ ಸಿದ್ದರಾಮಯ್ಯಗೆ ಟಕ್ಕರ್ ಕೊಡಲು ಈ ಪಾದಯಾತ್ರೆ ಮಾಡುತ್ತಿದ್ದಾರೆ ಎಂದರು.

ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ವ್ಯಾಸಂಗ ಮಾಡಲು ಅವಕಾಶ ಮಾಡಿಕೊಡುವ ವಿಚಾರವಾಗಿ ಸಿಎಂ ಜೊತೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಕೇಂದ್ರ ಸರ್ಕಾರದ ಜೊತೆ ಮಾತಾಡಬೇಕಾಗುತ್ತದೆ. ಮೆಡಿಕಲ್ ಕೋರ್ಸ್ ಗಳು ಮಾಡೋದು ಕಷ್ಟ, ಬೇರೆ ಕೋರ್ಸ್ ಗೆ ಸಮಸ್ಯೆ ಆಗಲ್ಲ. ಆದ್ರೂ ನಿಯಮಗಳ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದ್ದಾರೆ.

ಇದನ್ನೂ ಓದಿ:

ಪುನೀತ್​ ರಾಜ್​ಕುಮಾರ್​ ಹೆಸರಲ್ಲಿ ಉಡಾವಣೆ ಆಗಲಿದೆ ಉಪಗ್ರಹ; ಇದಕ್ಕೆ ತಗಲುತ್ತಿರುವ ವೆಚ್ಚ ಎಷ್ಟು?

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು